Homeಮುಖಪುಟಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಬಂಧನಕ್ಕೂ ಮುನ್ನ ಪತ್ರಕರ್ತ ಮಂದೀಪ್ ಪುನಿಯಾ ’ಬಿಜೆಪಿಯು ದೆಹಲಿ ಪೊಲೀಸರೊಂದಿಗೆ ಸೇರಿಕೊಂಡು ಹಿಂಸಾಚಾರ ನಡೆಸಲು ಸಿದ್ದತೆ ನಡೆಸಿದೆ ಎಂದು ಆರೋಪಿಸಿದ್ದರು. ಇದರ ಕುರಿತು ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸತ್ಯಕ್ಕೆ ಹೆದರುವವರು ನಿಜವಾದ ಪತ್ರಕರ್ತರನ್ನು ಬಂಧಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದೇ ರೀತಿಯಲ್ಲಿ ಧರ್ಮೇಂಧರ್ ಸಿಂಗ್ ಎಂಬುವವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದು ಆ ನಂತರ ಆತ ತನ್ನ ಗುರುತಿನ ಚೀಟಿ ತೋರಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ಸಿಂಘು ಗಡಿಯಲ್ಲಿ ದೆಹಲಿಯ ಭಾಗಕ್ಕೆ ಬರುವ ಮತ್ತು ಕೆಲವೇ ಸಾವಿರ ಸಂಖ್ಯೆಯಲ್ಲಿರುವ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ರೈತರು ಪ್ರತಿಭಟನೆ ನಡೆಸುವ ಸ್ಥಳಕ್ಕೆ 50-60 ಜನರ ಗುಂಪೊಂದು ಘೋಷಣೆ ಕೂಗುತ್ತಾ ಬಂದಿತು. 5000-6000 ಸಂಖ್ಯೆಯಲ್ಲಿ ಪೊಲೀಸರು ನೆರೆದಿದ್ದರೂ ಅವರು ಪ್ರತಿಭಟನಾಕಾರರನ್ನು ಒಳಕೆ ಬಿಟ್ಟರು. ನಂತರ ಅವರು ರೈತರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಮುಖ ಪ್ರೇಕ್ಷಕರಾಗಿದ್ದರು ಎಂದು ಮಂದೀಪ್ ಪುನಿಯಾ ಆರೋಪಿಸಿದ್ದರು.

ಈ ಕಾರಣಕ್ಕಾಗಿಯೇ ಅವರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಸಿಂಘು ಗಡಿಯಲ್ಲಿನ ಸ್ಟೇಷನ್ ಹೌಸ್ ಆಫೀಸರ್ ಜೊತೆ ಪತ್ರಕರ್ತ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಯುಂಟುಮಾಡುವುದು), 332 (ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡುವುದು) ಅಡಿಯಲ್ಲಿ ಮಂದೀಪ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಾವು ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಕಾರವಾನ್ ನಿಯತಕಾಲಿಕೆಯ ರಾಜಕೀಯ ಸಂಪಾದಕ ಹರ್ತೋಶ್ ಸಿಂಗ್ ಬಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...