Homeಮುಖಪುಟಪೌರತ್ವ ಕಾಯ್ದೆ ವಿರೋಧಿ ಹೋರಾಟ: ಪತ್ರಕರ್ತರ ಮೇಲಿನ ಪೊಲೀಸ್‌ ಹಲ್ಲೆಗೆ ಪ್ರೆಸ್‌ ಕ್ಲಬ್‌ ಆಫ್‌ ಇಂಡಿಯಾ...

ಪೌರತ್ವ ಕಾಯ್ದೆ ವಿರೋಧಿ ಹೋರಾಟ: ಪತ್ರಕರ್ತರ ಮೇಲಿನ ಪೊಲೀಸ್‌ ಹಲ್ಲೆಗೆ ಪ್ರೆಸ್‌ ಕ್ಲಬ್‌ ಆಫ್‌ ಇಂಡಿಯಾ ಖಂಡನೆ

- Advertisement -
- Advertisement -

ತಮ್ಮ ವೃತ್ತಿಪರ ಜವಾಬ್ದಾರಿಯನ್ನು ನಿರ್ವಹಿಸುವಾಗ, ಪತ್ರಕರ್ತರ ಮೇಲೆ ಇತ್ತೀಚಿನ ದಿನಗಳಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಗಳಿಂದ ಹಲ್ಲೆ ನಡೆಸಿದ ಘಟನೆಗಳು ಬೆಳಕಿಗೆ ಬಂದಿವೆ ಎಂದು ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಕಳವಳ ವ್ಯಕ್ತಪಡಿಸಿದೆ.

ಕಳೆದ ಭಾನುವಾರ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನ್ನು ವರದಿ ಮಾಡುತ್ತಿದ್ದ ಬಿಬಿಸಿ ಪತ್ರಕರ್ತರೊಬ್ಬರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ, ಮಹಿಳಾ ಪತ್ರಕರ್ತ ತನ್ನ ಗುರುತಿನ ಚೀಟಿ ತೋರಿಸಿದರೂ ಸಹ ಪೊಲೀಸರು ನಿಂದನೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಅವಳ ಮೊಬೈಲ್ ಫೋನ್ ಅನ್ನು ಸಹ ಒಡೆದುಹಾಕಿದ್ದಾರೆ.

ಎಎಮ್‌ಯು ಕ್ಯಾಂಪಸ್‌ನ ಹೊರಗೆ ಪೊಲೀಸರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚುತ್ತಿರುವುದನ್ನು ವಿಡಿಯೋ ಮಾಡಿದ್ದಕ್ಕಾಗಿ ಎನ್‌ಡಿಟಿವಿ ಪತ್ರಕರ್ತನೊಬ್ಬನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಗುವಾಹಟಿಯಲ್ಲಿ, ಭದ್ರತಾ ಪಡೆಗಳು ಪ್ರಾಗ್ ನ್ಯೂಸ್ ಕಚೇರಿಯ ಮೇಲೆ ದಾಳಿ ನಡೆಸಿ, ಪತ್ರಕರ್ತರನ್ನು ಥಳಿಸಲಾಗಿದೆ ಎಂದು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಆರೋಪಿಸಿದೆ.

ಹಿಂಸೆಯನ್ನು ತಡೆಯಬೇಕೆನ್ನುವ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳ ಜವಾಬ್ದಾರಿಗಳನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಆದಾಗ್ಯೂ, ಪ್ರಜಾಪ್ರಭುತ್ವದಲ್ಲಿ ನಡೆಯುವ ಘಟನೆಗಳನ್ನು ಜನರಿಗೆ ಜವಾಬ್ದಾರಿಯುತವಾಗಿ ತಿಳಿಸುವುದು ಮಾಧ್ಯಮಗಳ ಕರ್ತವ್ಯ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ನಾವು ಪೊಲೀಸರ ಈ ದಾಳಿಯನ್ನು ಖಂಡಿಸುತ್ತೇವೆ ಮತ್ತು ಸರ್ಕಾರವು ಪೊಲೀಸ್ ಮತ್ತು ಭದ್ರತಾ ಪಡೆಗಳಿಗೆ ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ಮಾಡಬೇಕೆಂದು ಸೂಚಿಸಬೇಕೆಂದು ಒತ್ತಾಯಿಸುತ್ತೇವೆ. ಮಾಧ್ಯಮವನ್ನು ಬಲದಿಂದ ನಿಭಾಯಿಸಲು ಪ್ರಯತ್ನಿಸಿದರೆ, ಪ್ರಸ್ತುತ ಸನ್ನಿವೇಶಗಳಲ್ಲಿ ದೇಶದ ಕ್ಷೀಣಿಸುತ್ತಿರುವ ಚಿತ್ರಣವು ಮತ್ತಷ್ಟು ಹದಗೆಡುತ್ತದೆ ಎಂದು ಪ್ರೆಸ್‌ ಕ್ಲಬ್‌ ಆಫ್‌ ಇಂಡಿಯಾ ಅಭಿಪ್ರಾಯಪಟ್ಟಿದೆ.

ಸೋಮವಾರ ಮಧ್ಯಾಹ್ನವೂ ಸಹ ಜಾಮೀಯ ಪ್ರತಿಭಟನೆಯನ್ನು ವರದಿ ಮಾಡಲು ತೆರಳಿದ್ದ ಎಎನ್‌ಐ ವರದಿಗಾ ಉಜ್ವಲ್‌ ರಾಯ್‌ ಮತ್ತು ಛಾಯಾಗ್ರಾಹಕ ಸರಬ್ಜಿತ್‌ ಸಿಂಗ್‌ ಮೇಲೆ ಹಲ್ಲೆ ನಡೆದಿದ್ದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...