HomeಮುಖಪುಟUP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

UP: ಮಕ್ಕಳಿಗೆ ರೊಟ್ಟಿ ಜೊತೆಗೆ ಉಪ್ಪು ನೀಡುತ್ತಿದ್ದ ಶಾಲೆಯ ಕುರಿತು ವರದಿ ಮಾಡಿದ್ದ ಪತ್ರಕರ್ತ ನಿಧನ

- Advertisement -
- Advertisement -

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪಿನೊಂದಿಗೆ ರೊಟ್ಟಿಯನ್ನು ಹೇಗೆ ತಿನ್ನಿಸಿದೆ ಎಂಬುದನ್ನು 2019ರಲ್ಲಿ ಬಹಿರಂಗಪಡಿಸಿದ್ದ ಫ್ರಿಲಾನ್ಸ್‌ ಜರ್ನಲಿಸ್ಟ್‌ ಪವನ್ ಜೈಸ್ವಾಲ್ ಅವರು ಗುರುವಾರ ಬಾಯಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.

ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ತಿಂಗಳ ಹಿಂದೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಟ್ಯಾಗ್‌ ಮಾಡಿ ಟ್ವೀಟ್ ಮಾಡಿದ್ದ ಜೈಸ್ವಾಲ್, “ಜೀವನದಲ್ಲಿ ನಾವು ಪ್ರಾಮಾಣಿಕವಾಗಿ ಪತ್ರಿಕೋದ್ಯಮ ಮಾಡಿದ್ದೇವೆ, ಮಕ್ಕಳಿಗೆ ಉಪ್ಪು ಮತ್ತು ರೊಟ್ಟಿ ತಿನ್ನಿಸಿದ್ದನ್ನು ಬಹಿರಂಗಪಡಿಸಿದ್ದೇವೆ. ಆದರೆ ಈಗ ನಾನು ಭರವಸೆ ಕಳೆದುಕೊಳ್ಳುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಚಿಕಿತ್ಸೆಗಾಗಿ ಹಣದ ಅಗತ್ಯವಿದೆ. ನಾನು ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದೇನೆ. ದಯವಿಟ್ಟು ಸಹಾಯ ಮಾಡಿ” ಎಂದು ಮನವಿ ಮಾಡಿದ್ದರು.

ಉಪ್ಪು ಮತ್ತು ರೊಟ್ಟಿಯ ವರದಿ: ಪವನ್‌ ಮೇಲೆ ಎಫ್‌ಐಆರ್‌‌

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಈ ವಿಡಿಯೋ ಮಾಡುವ ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ. ರಾಜ್ಯ ಸರ್ಕಾರದ ಇಮೇಜ್‌‌ ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ, ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್‌ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿತ್ತು.

ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ 2019ರ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೂರು ತಿಂಗಳ ತನಿಖೆ ನಡೆದ ಬಳಿಕ ಜೈಸ್ವಾಲ್ ಅವರನ್ನು ದೋಷಮುಕ್ತಗೊಳಿಸಲಾಯಿತು. ಆದರೆ ಪಾಲ್ ವಿರುದ್ಧದ ಆರೋಪಗಳು ನಿಜವೆಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...