Homeಮುಖಪುಟಬಿಲ್ಕಿಸ್ ಬಾನೋ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಬೇಲಾ ಎಂ ತ್ರಿವೇದಿ!

ಬಿಲ್ಕಿಸ್ ಬಾನೋ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಬೇಲಾ ಎಂ ತ್ರಿವೇದಿ!

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೈದ 11 ಅಪರಾಧಿಗಳನ್ನು ಕ್ಷಮಾಧಾನ ನೀಡಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿದ ಕ್ರಮವನ್ನು ಪ್ರಶ್ನಿಸಿ ಸಂತಸ್ತೆ ಬಿಲ್ಕಿಸ್ ಬಾನೋ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಾಧೀಶೆ ಬೇಲಾ ಎಂ ತ್ರಿವೇದಿ ಹಿಂದೆ ಸರಿದಿದ್ದಾರೆ.

ನ್ಯಾಯಾಧೀಶೆ ತ್ರಿವೇದಿ ಮತ್ತು ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರನ್ನೊಳಗೊಂಡ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಬೇಕಿತ್ತು. ಆದರೆ ನ್ಯಾಯಮೂರ್ತಿ ರಸ್ತೋಗಿ ಅವರು ತಮ್ಮ ಸಹೋದರಿ ನ್ಯಾಯಾಧೀಶರು ಪ್ರಕರಣವನ್ನು ಆಲಿಸಲು ಇಷ್ಟಪಡುವುದಿಲ್ಲ. ಹಾಗಾಗಿ ಅವರ ಸದಸ್ಯರಲ್ಲದ ಪೀಠದ ಮುಂದೆ ಪ್ರಕರಣವನ್ನು ತನ್ನಿ ಎಂದು ಹೇಳಿದರು. ಅದರೆ ನ್ಯಾಯಾಧೀಶೆ ತ್ರಿವೇದಿ ಅವರು ಹಿಂದೆ ಸರಿದುದ್ದಕ್ಕೆ ನಿರ್ದಿಷ್ಟ ಕಾರಣವನ್ನು ಪೀಠವು ಸ್ಪಷ್ಟಪಡಿಸಿಲ್ಲ.

2002 ರ ಗುಜರಾತ್‌ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರು ಗರ್ಭಿಣಿಯಾಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಮಾತ್ರವಲ್ಲದೆ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬಿಕರನ್ನು ಕೊಲೆ ಮಾಡಲಾಗಿತ್ತು. ಒಟ್ಟು 11 ಜನರು ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೂ ಈ ವರ್ಷ ಆಗಸ್ಟ್ 15 ರಂದು ಗುಜರಾತ್ ಸರ್ಕಾರವು ಅವರನ್ನು ಬಿಡುಗಡೆ ಮಾಡಿದೆ.

ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಪರ ವಕೀಲರು ನವೆಂಬರ್ 30 ರಂದು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಮುಂಚೆ ಈ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ ಎಂದಿತ್ತು.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಶಿಕ್ಷಣತಜ್ಞೆ ರೂಪ್ ರೇಖಾ ವರ್ಮಾ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸಹ ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...