Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಪ್ರಕರಣ

- Advertisement -
- Advertisement -

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಯಾಗಿರುವ ಮಾಲೆಗಾಂವ್ ಸ್ಪೋಟ ಪ್ರಕರಣದ ವಿಚಾರಣೆಯ ನೇತೃತ್ವದ ವಹಿಸಿದ್ದ ಎನ್‌ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶರನ್ನು ವಿಚಾರಣೆಯ ಅಂತಿಮ ಹಂತದಲ್ಲಿ ವರ್ಗಾವಣೆ ಮಾಡಲಾಗಿದೆ.

ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಾರ್ಷಿಕ ನಿಯಮಿತ ವರ್ಗಾವಣೆಯ ಭಾಗವಾಗಿ ಈ ವರ್ಗಾವಣೆ ನಡೆದಿದೆ ಎಂದು ವರದಿಗಳು ಹೇಳಿವೆ.

ಏಪ್ರಿಲ್ 5ರಂದು ಹೊರಡಿಸಲಾದ ವರ್ಗಾವಣೆ ಆದೇಶದಲ್ಲಿ, ವಿಚಾರಣೆ ಮುಗಿದಿರುವ ಎಲ್ಲಾ ಪ್ರಕರಣಗಳ ತೀರ್ಪುಗಳನ್ನು ಅಧಿಕಾರ ಹಸ್ತಾಂತರಿಸುವ ಮುನ್ನ ಪ್ರಕಟಿಸುವಂತೆ ನಿರ್ದೇಶಿಸಲಾಗಿದೆ.

ಮಾಲೆಗಾಂವ್ ಸ್ಟೋಟ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಎ.ಕೆ. ಲಹೋಟಿ ಅವರು, ಏಪ್ರಿಲ್ 15 ರೊಳಗೆ ಉಳಿದ ವಾದಗಳನ್ನು ಪೂರ್ಣಗೊಳಿಸುವಂತೆ ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳಿಗೆ ಕಳೆದ ಶನಿವಾರ ನಿರ್ದೇಶನ ನೀಡಿದ್ದರು.

ಲಹೋಟಿ ಅವರು 17 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದ ವಿಚಾರಣೆ ನೇತೃತ್ವ ವಹಿಸಿರುವ ಐದನೇ ನ್ಯಾಯಾಧೀರಾಗಿದ್ದಾರೆ.

ನ್ಯಾಯಾಧೀಶರ ವರ್ಗಾವಣೆಯನ್ನು ನಿರೀಕ್ಷಿಸಿದ್ದ ಪ್ರಕರಣದ ಸಂತ್ರಸ್ತರು, ಕಳೆದ ವಾರ ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ವಿಳಂಬವಿಲ್ಲದೆ ತೀರ್ಪು ಪ್ರಕಟವಾಗುವಂತೆ ನೋಡಿಕೊಳ್ಳಲು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಕೋರಿದ್ದರು.

“ಪ್ರಕರಣವು ಸಂಕೀರ್ಣವಾದ ದಾವೆ ಪ್ರಕ್ರಿಯೆಗಳ ಮೂಲಕ ಸಾಗುತ್ತಿದೆ. ನ್ಯಾಯಾಧೀಶ ಎ.ಕೆ ಲಹೋಟಿ ಅವರು ಪ್ರಕರಣದ ಪ್ರತಿಯೊಂದು ಅಂಶಗಳ ಬಗ್ಗೆಯೂ ಸೂಕ್ಷ್ಮವಾಗಿ ತಿಳಿದಿದ್ದಾರೆ. ನ್ಯಾಯದ ಹಿತದೃಷ್ಟಿಯಿಂದ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಶಿಫಾರಸು ಮಾಡುವಂತೆ ನಾವು ನಿಮ್ಮನ್ನು ಕೋರುತ್ತೇವೆ” ಎಂದು ಪತ್ರದಲ್ಲಿ ಹೇಳಲಾಗಿತ್ತು.

ನ್ಯಾಯಾಧೀಶರ ವರ್ಗಾವಣೆ ತಡೆಯುವಂತೆ ಹೈಕೋರ್ಟ್‌ ಮೊರೆ ಹೋಗುವ ಬಗ್ಗೆ ಯೋಚಿಸುತ್ತಿದ್ದೇವೆ. ಪ್ರಕರಣದ ವಿಚಾರಣೆ ಈಗಾಗಲೇ ವಿಳಂಬವಾಗಿದೆ. ನ್ಯಾಯಾಧೀಶರನ್ನು ವರ್ಗಾಯಿಸಿದರೆ ಇನ್ನಷ್ಟು ವಿಳಂಬವಾಗಲಿದೆ. ಹಾಗಾಗಿ, ನಾವು ಹಿರಿಯ ವಕೀಲರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಂತ್ರಸ್ತರ ಪರ ವಕೀಲ ಶಾಹಿದ್ ನದೀಮ್ ಹೇಳಿದ್ದಾರೆ.

ಮಾಲೆಗಾಂವ್ ಸ್ಪೋಟ ಪ್ರಕರಣ

ಸೆಪ್ಟೆಂಬರ್ 29,2008ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಮಸೀದಿಯ ಬಳಿ ಬೈಕ್‌ನಲ್ಲಿ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರಂಭದಲ್ಲಿ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ನಂತರ 2011ರಲ್ಲಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವರ್ಗಾಯಿಸಲಾಯಿತು.

ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಹಾಗೂ ಇನ್ನಿತರ ಐವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ಮೇಲೆ ಯುಎಪಿಎ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ದೂರು ದಾಖಲಾಗಿತ್ತು.

ಈವರೆಗೆ ಪ್ರಾಸಿಕ್ಯೂಷನ್‌ 323 ಹಾಗೂ ಸಂತ್ರಸ್ತರ ಪರ ವಕೀಲರು 8 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಲಯ ಪ್ರಕರಣಲ್ಲಿ ಅಂತಿಮ ವಾದ-ಪ್ರತಿವಾದ ಆಲಿಸುತ್ತಿದೆ ಎಂದು ವರದಿಯಾಗಿದೆ.

ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...