Homeಮುಖಪುಟರಾಹುಲ್ ಗಾಂಧಿಗೆ ಶಿಕ್ಷೆಗೆ ತಡೆ ನಿರಾಕರಿಸಿದ್ದ ಜಡ್ಜ್  ಸೇರಿ 23 ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು

ರಾಹುಲ್ ಗಾಂಧಿಗೆ ಶಿಕ್ಷೆಗೆ ತಡೆ ನಿರಾಕರಿಸಿದ್ದ ಜಡ್ಜ್  ಸೇರಿ 23 ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸ್ಸು

- Advertisement -
- Advertisement -

‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೆಳ ನ್ಯಾಯಾಲಯ ನೀಡಿದ  ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ  ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಸೇರಿ  23 ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ವರ್ಗಾವಣೆಗೆ ಶಿಫಾರಸು ಮಾಡಿದೆ.

ಜುಲೈನಲ್ಲಿ ನೀಡಿದ ತೀರ್ಪಿನಲ್ಲಿ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಅವರು ರಾಹುಲ್ ಗಾಂಧಿಯವರ ಮನವಿಯನ್ನು ತಿರಸ್ಕರಿಸಿದ್ದರು.

ಕಳೆದ ರಾತ್ರಿ ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ವರ್ಗಾವಣೆಗಳನ್ನು ಕೊಲಿಜಿಯಂ ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ.

ಈ ಹಿಂದೆ 2002ರ ಗುಜರಾತ್ ಗಲಭೆ ಪ್ರಕರಣದ ಆರೋಪಿಯಾಗಿದ್ದ ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಅವರನ್ನು ಸಮರ್ಥಿಸುವ ವಕೀಲರ ತಂಡದಲ್ಲಿ ನ್ಯಾಯಮೂರ್ತಿ ಪ್ರಚ್ಚಕ್ ಒಬ್ಬರಾಗಿದ್ದರು.

ನ್ಯಾಯಮೂರ್ತಿ ಪ್ರಚ್ಚಕ್ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು ಮತ್ತು ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಗುಜರಾತ್ ಸರ್ಕಾರದ ಸಹಾಯಕ ವಕೀಲರಾಗಿ ಕೆಲಸ ಮಾಡಿದ್ದರು.

2015 ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಒಂದು ವರ್ಷದ ನಂತರ, ಅವರನ್ನು ಗುಜರಾತ್ ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಪರ ವಕೀಲರಾಗಿ ನೇಮಿಸಲಾಯಿತು.ಅವರು 2019 ರವರೆಗೆ ಈ ಹುದ್ದೆಯಲ್ಲಿದ್ದರು.2021ರಲ್ಲಿ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡರು.

ಇದನ್ನು ಓದಿ: ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...