Homeಮುಖಪುಟರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

- Advertisement -
- Advertisement -

ಭಾರತದ ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ ಎಂದು ಆರ್‌ಟಿಐ ಹೋರಾಟಗಾರ ಸಾಕೇತ್ ಗೋಖಲೆ ಒತ್ತಾಯಿಸಿದ್ದಾರೆ.

ಈ ಕುರಿತು ಅಟಾರ್ನಿ ಜನರಲ್‌ಗೆ ತಾವು ಬರೆದಿರುವ ಪತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸಾಕೇತ್ ಗೋಖಲೆ, “ಇಂಡಿಯಾ ಟುಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸುಪ್ರೀಂನ ಮಾಜಿ ಮುಖ್ಯ ನ್ಯಾಯಾಧೀಶರು ನ್ಯಾಯಾಲಯಕ್ಕೆ ಅವಮಾನವಾಗುವಂತೆ ಮಾತನಾಡಿದ್ದಾರೆ” ಎಂದು ಅವರ ಹೇಳಿಕೆಗಳ ಕೆಲವು ಪಟ್ಟಿಯನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!

ಇದನ್ನೂ ಓದಿ: ರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ: ಶೇಮ್‌ ಎಂಬ ಘೋಷಣೆ ಮೂಲಕ ಪ್ರತಿಭಟನೆ

“ನೀವು 5 ಟ್ರಿಲಿಯನ್‌ ಆರ್ಥಿಕತೆಯನ್ನು ಬಯಸುತ್ತಿದ್ದೀರಿ. ಆದರೆ ದೇಶದ ನ್ಯಾಯಾಂಗವು ಕುಸಿದು ಬೀಳುವಂತಿದೆ. ನೀವು ನ್ಯಾಯಾಲಯಕ್ಕೆ ಹೋದರೆ ಅಲ್ಲಿ ನಿಮ್ಮ ಕೊಳೆಯಾದ ಬಟ್ಟೆಯನ್ನು ತೊಳೆಯಬೇಕೆ ಹೊರತು ನಿಮಗೆ ತೀರ್ಪು ಸಿಗುವುದಿಲ್ಲ. ಈ ಕುರಿತು ಹೇಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ. ಮಿಲಿಯನ್‌ ಗಟ್ಟಲೆ ಹಣ ಹೊಂದಿರುವ ಕಾರ್ಪೊರೇಷನ್‌ ಗಳು ಮಾತ್ರ ಸುಪ್ರೀಂ ಕೋರ್ಟ್‌ ಗೆ ಹೋಗಬಹುದು. ನ್ಯಾಯಾಂಗವು ಸರಿಯಾಗಿ ಕಾರ್ಯ ನಿರ್ವಹಿಸದ್ದಕ್ಕೆ ಒಂದಲ್ಲ ಹಲವು ಕಾರಣಗಳಿವೆ” ಎಂದು ರಂಜನ್ ಗೊಗೊಯ್ ನೀಡಿರುವ ಹಲವಾರು ಹೇಳಿಕೆಗಳನ್ನು ಸಾಕೇತ್‌ ಗೋಖಲೆ ಪಟ್ಟಿ ಮಾಡಿದ್ದಾರೆ.

ನೀವು ಈಗಾಗಲೇ ಕಾಮಿಡಿಯನ್‌ ಕುನಾಲ್‌ ಕಮ್ರ ಹಾಗೂ ಕಾರ್ಟೂನಿಸ್ಟ್‌ ರಚಿತಾ ತನೇಜಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದೀರಿ. ಆದರೆ, ರಂಜನ್‌ ಗೊಗೊಯ್ ಹೇಳಿಕೆಯು ಅದಕ್ಕಿಂತಲೂ ತೀವ್ರತರವಾಗಿದ್ದು. ಹಾಗಾಗಿ ಕೂಡಲೇ ಈ ಕುರಿತು ನಿಮ್ಮ ಪ್ರತಿಕ್ರಿಯೆಯನ್ನು ಬಯಸುತ್ತಿದ್ದೇನೆ ಎಂದು ಸಾಕೇತ್‌ ಗೋಖಲೆ ಪತ್ರದಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...