Homeಮುಖಪುಟನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ನ್ಯಾಯಾಂಗ ನಿಂದನೆ: ನಟಿ ಸ್ವರ ಭಾಸ್ಕರ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

- Advertisement -
- Advertisement -

ನಟಿ ಸ್ವರ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಅನುಮತಿ ನೀಡಬೇಕೆಂಬ ಅರ್ಜಿಯನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರು ಸಹ ತಿರಸ್ಕರಿಸಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಟೀಕಿಸುವ ಮತ್ತು ಸರ್ಕಾರವನ್ನು ಖಂಡಿಸುವ ಹೇಳಿಕೆ ನೀಡಿದ್ದಕ್ಕಾಗಿ ಸ್ವರ ವಿರುದ್ಧ ವಿಚಾರಣೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಈ ಹಿಂದೆಯೂ, ನಟಿ ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ವಿಚಾರಣೆ ಅರ್ಜಿಯನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ (ಎಜಿ) ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದರು.

2020ರ ಫೆಬ್ರವರಿಯಲ್ಲಿ ಮುಂಬೈನಲ್ಲಿ ನಡೆದ “ಕೋಮುವಾದದ ವಿರುದ್ಧ ಕಲಾವಿದರು” ಎಂಬ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸ್ವರ “ನ್ಯಾಯಾಲಯಗಳು ಸಂವಿಧಾನವನ್ನು ನಂಬುತ್ತವೆಯೇ ಎಂದು ಖಚಿತವಾಗಿಲ್ಲ” ಎಂದು ಹೇಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಸ್ವರ ಭಾಸ್ಕರ್, “ಬಾಬರಿ ಮಸೀದಿ ನೆಲಸಮ ಮಾಡುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟಿನ ತೀರ್ಪಿನಲ್ಲಿ ಹೇಳುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಮತ್ತು ಅದೇ ತೀರ್ಪಿನಲ್ಲಿ ಮಸೀದಿಯನ್ನು ಉರುಳಿಸಿದ ಜನರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

ನವೆಂಬರ್ 2019 ರ ತೀರ್ಪಿನಲ್ಲಿ ಬಾಬರಿ ಮಸೀದಿಯನ್ನು ಉರುಳಿಸಿದ್ದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಮಸೀದಿಯನ್ನು ಉರುಳಿಸಿದ ದುಷ್ಕರ್ಮಿಗಳಿಗೆ ಬಹುಮಾನ ನೀಡಿದೆ ಎಂಬ ಭಾಸ್ಕರ್ ಅವರ ಹೇಳಿಕೆ ವಾಸ್ತವಿಕ ಹೇಳಿಕೆಯಂತೆ ಕಾಣುತ್ತದೆ ಎಂದು ವೇಣುಗೋಪಾಲ್ ತಮ್ಮ ಅರ್ಜಿದಾರೆ  ಉಷಾ ಶೆಟ್ಟಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಈ ಹೇಳಿಕೆಯು ಸುಪ್ರೀಂ ಕೋರ್ಟಿನ ತೀರ್ಪನ್ನು ಸೂಚಿಸುತ್ತದೆ. ಹಾಗಾಗಿ ಇದು ಆ ಸಂಸ್ಥೆಯ ಮೇಲಿನ ಆಕ್ರಮಣವಲ್ಲ. ಇದು ಸುಪ್ರೀಂ ಕೋರ್ಟ್‌ನ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಅಥವಾ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ನಿಂದಿಸುವ, ಕಡಿಮೆ ಮಾಡುವ ಯಾವುದನ್ನೂ ಹೇಳುವುದಿಲ್ಲ. ನನ್ನ ಅಭಿಪ್ರಾಯದಲ್ಲಿ, ಈ ಹೇಳಿಕೆಯು ನ್ಯಾಯಾಂಗ ನಿಂದನೆಯನ್ನು ಹೊಂದಿಲ್ಲ ಎಂದು ವೇಣುಗೋಪಾಲ್ ತಮ್ಮ ಪತ್ರದಲ್ಲಿ ತಿಳಿಸಿದ್ದರು.


Also Read: Swara Bhasker helps migrant workers reach home


ಈಗ ಮತ್ತೋರ್ವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಇದೇ ಕಾರಣವನ್ನು ನೀಡಿ, ಸ್ವರ ಭಾಸ್ಕರ್ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ನ್ಯಾಯಾಲಯಗಳ ನಿಂದನೆ ಕಾಯ್ದೆಯ ಸೆಕ್ಷನ್ 15 ಮತ್ತು ಸುಪ್ರೀಂ ಕೋರ್ಟ್‌ನ ಅವಹೇಳನಕ್ಕಾಗಿ ಕ್ರಮಗಳನ್ನು ನಿಯಂತ್ರಿಸುವ ನಿಯಮ 3 ರ ಪ್ರಕಾರ, ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ತಿರಸ್ಕಾರ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಎಜಿ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಮಾಜಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ನೀಡಿದ ಅಯೋಧ್ಯೆ ವಿವಾದದಲ್ಲಿ ನವೆಂಬರ್ 9 ರ ಸುಪ್ರೀಂ ಕೋರ್ಟ್ ನೀಡಿದ ತೀರ್ಪು 2.77 ಎಕರೆ ವಿವಾದಿತ ಸ್ಥಳವನ್ನು ರಾಮ್ ಲಲ್ಲಾ ವಿರಾಜ್ಮಾನ್ ಅವರಿಗೆ ನೀಡಿತ್ತು. ಹೊಸ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಸ್ಥಳದಲ್ಲಿ 5 ಎಕರೆ ಭೂಮಿಯನ್ನು ಮುಸ್ಲಿಮರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿತ್ತು.

ವಿವಾದಾತ್ಮಕ ಸ್ಥಳದಲ್ಲಿ ಮಸೀದಿಯ ಅಸ್ತಿತ್ವವನ್ನು ಉನ್ನತ ನ್ಯಾಯಾಲಯವು ಖಾತ್ರಿಪಡಿಸಿ ಒಪ್ಪಿಕೊಂಡಿತ್ತು. 1949 ರಲ್ಲಿ ಮಸೀದಿಯೊಳಗೆ ವಿಗ್ರಹಗಳನ್ನು ಇಟ್ಟು, 1992 ರಲ್ಲಿ ಮಸೀದಿಯ ಧ್ವಂಸವು ಕಾನೂನುಬಾಹಿರ ಕೃತ್ಯ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿತ್ತು.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...