Homeಮುಖಪುಟಬೆಂಗಳೂರು ಗಲಭೆಯ ಪ್ರಮುಖ ಆರೋಪಿ ನವೀನ್‌ಗೆ ನ್ಯಾಯಾಂಗ ಬಂಧನ

ಬೆಂಗಳೂರು ಗಲಭೆಯ ಪ್ರಮುಖ ಆರೋಪಿ ನವೀನ್‌ಗೆ ನ್ಯಾಯಾಂಗ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು.

- Advertisement -
- Advertisement -

ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪಿ ನವೀನ್‌ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್‌ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ್ದರು. ಪ್ರಕರಣದ ಗಂಭೀರತೆಯನ್ನು ಅರಿತು ನ್ಯಾಯಾಲಯವು, ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

ಆರೋಪಿ ನವೀನ್, ಮಹಮ್ಮದ್ ಪೈಂಗಬರ್ ವಿರುದ್ಧ ಅಶ್ಲೀಲಕರವಾದ ಪೋಸ್ಟ್ ಒಂದನ್ನು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದರು. ಇದು ಕೆಲ ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆರೋಪಿ ನವೀನ್ ಸಂಬಂಧಿ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಳೆದ ಮಂಗಳವಾರ ತಡರಾತ್ರಿ ದಾಳಿ ನಡೆಸಿತ್ತು.

ಈ ದಾಳಿಯಲ್ಲಿ ಅಖಂಡ ಶ್ರೀನಿವಾಸ್ ಮನೆ ಮತ್ತು ಕಚೇರಿಗೆ ಬೆಂಕಿ ಹಚ್ಚಿದ್ದರಿಂದ, ಶಾಸಕಕ ಮನೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದಲ್ಲದೆ ಗಲಭೆಕೋರರು ಪೊಲೀಸ್ ಠಾಣೆ ಮತ್ತು ಸುತ್ತಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಈ ಗಲಭೆಯಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು.

ಗಲಭೆ ನಿಯಂತ್ರಿಸುವ ಸಲುವಾಗಿ ನಡೆಸಲಾಗಿದ್ದ ಗೋಲಿಬಾರ್‌ನಲ್ಲಿ ನಾಲ್ಕು ಜನ ಮೃತಪಟ್ಟಿದ್ದರು. ಗಲಭೆ ಸಂಬಂಧ 200ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 12ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ.

ಈ ನಡುವೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣ ಆಡಳಿತ ಮತ್ತು ವಿರೋಧ ಪಕ್ಷಗಳ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಮುಂದಾಗಿದ್ದಾರೆ.


ಇದನ್ನೂ ಓದಿ: ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...