Homeಕರ್ನಾಟಕಮುಖ್ಯವಾಹಿನಿಗೆ ಬಂದಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಮುಖ್ಯವಾಹಿನಿಗೆ ಬಂದಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ಬೆಂಗಳೂರು: ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ಹೆಜ್ಜೆ ಇಟ್ಟಿರುವ ಕಾಂಗ್ರೆಸ್ ಸರ್ಕಾರದ ಮುಂದೆ ನಿನ್ನೆ (ಬುಧವಾರ) 6 ನಕ್ಸಲ್ ನಾಯಕರು ಮುಖ್ಯವಾಹಿನಿಗೆ ಬಂದಿದ್ದರು. ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆ ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.

ಶರಣಾದ 6 ನಕ್ಸಲರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದ NIA ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರು ಪಡಿಸಿರುವ ಹಿನ್ನೆಲೆಯಲ್ಲಿ ಖುದ್ದು ಡಿಸಿಪಿ ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗಿತ್ತು.

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಶರಣಾದ ನಕ್ಸಲರಲ್ಲಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರಿದ್ದಾರೆ. ಅವರಲ್ಲಿ ತಮಿಳುನಾಡು ಮೂಲದ ವಸಂತ್ ಎಂಬಾತ ಬಿಟೆಕ್ ಪದವೀಧರನಾಗಿದ್ದಾನೆ. ಶರಣಾದವರಲ್ಲಿ ಶೃಂಗೇರಿಯ ಮುಂಡಗಾರು ಲತಾ, ರಾಯಚೂರಿನ ಮಾರೆಪ್ಪ ಅರೋಲಿ, ದಕ್ಷಿಣ ಕನ್ನಡದ ಸುಂದರಿ ಕೊತ್ಲೂರು, ಚಿಕ್ಕಮಗಳೂರಿನ ವನಜಾಕ್ಷಿ ಬಾಳೆಹೊಳೆ, ಕೇರಳ ಮೂಲದ ಜಿಶಾ ಸೇರಿದ್ದಾರೆ.

ಮುಸ್ಲಿಂ ಯುವಕನಿಗೆ ಥಳಿಸಿ, ಹಂದಿ ಮಾಂಸ ತಿನ್ನುವಂತೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...