Homeಕರ್ನಾಟಕ‘ಇಡೀ ನ್ಯಾಯಾಂಗ ವ್ಯವಸ್ಥೆಗೆ ನಾಚಿಕೆಗೇಡು’ | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಳಂಬಕ್ಕೆ ಹೈಕೋರ್ಟ್...

‘ಇಡೀ ನ್ಯಾಯಾಂಗ ವ್ಯವಸ್ಥೆಗೆ ನಾಚಿಕೆಗೇಡು’ | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ

- Advertisement -
- Advertisement -

ಒಂದು ವರ್ಷದಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿಸುವ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ- 2012’ ರ ಹೊರತಾಗಿಯೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ಪ್ರಕ್ರಿಯೆಯಲ್ಲಿ ದೀರ್ಘ ವಿಳಂಬ ಮಾಡುವುದು ಇಡೀ ನ್ಯಾಯಾಂಗ ವ್ಯವಸ್ಥೆಗೆ ನಾಚಿಕೆಗೇಡಿನ ವಿಚಾರ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆಂಗಳೂರಿನ ಐದು ವರ್ಷದ ಮಗುವಿನ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಆರೋಪದ ಏಳು ವರ್ಷಗಳಿಂದ ಬಾಕಿ ಉಳಿದಿರುವ ಪೋಕ್ಸೋ ಪ್ರಕರಣದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಈ ಅಭಿಪ್ರಾಯ ಪಟ್ಟಿದೆ.ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ

“ಪೋಕ್ಸೊ ಕಾಯಿದೆಯ ಸೆಕ್ಷನ್ 35(2) ಅಪರಾಧ ನಡೆದಿದ್ದು ತಿಳಿದ ದಿನಾಂಕದಿಂದ ಒಂದು ವರ್ಷದ ಅವಧಿಯೊಳಗೆ ಸಾಧ್ಯವಾದಷ್ಟು ಮಟ್ಟಿಗೆ ವಿಚಾರಣೆಯನ್ನು ಮುಕ್ತಾಯಗೊಳಿಸುವುದು/ಮುಗಿಸುವುದು ಕಡ್ಡಾಯಗೊಳಿಸುತ್ತದೆ. 2017ರಲ್ಲಿ ಈ ಪ್ರಕರಣ ನಡೆದಿರುವುದು ತಿಳಿದು ಬಂದಿದೆ. ಅದಾಗಿ ಏಳು ವರ್ಷಗಳು ಕಳೆದಿದ್ದರೂ ಈ ಕಾನೂನು ಅಪರಾಧಿಗಳನ್ನು ಇನ್ನೂ ನ್ಯಾಯಾಂಗಕ್ಕೆ ತರಲಾಗಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

“ಘೋರ ಅಪರಾಧ ಪ್ರಕರಣಗಳಲ್ಲಿ ವಿಳಂಬವಾಗುವುದು ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಬೇಸರದ ಸಂಗತಿಯಾಗಿದೆ. ಇಂತಹ ಸಂದರ್ಭಗಳಲ್ಲಿ ಇಡೀ ಕ್ರಿಮಿನಲ್ ನ್ಯಾಯ ವ್ಯವಸ್ಥೆಯೇ ನಾಚಿಕೆಪಡುವಂತಾಗುತ್ತದೆ” ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಟೀಕಿಸಿದ್ದಾರೆ.

“ಕಾನೂನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕೆಂದು ಆದೇಶಿಸಿದ್ದರೂ, ಹಲವಾರು ವರ್ಷಗಳ ಅಂಗೀಕಾರದ ಹೊರತಾಗಿಯೂ ಸಂಬಂಧಿಸಿದ ನ್ಯಾಯಾಲಯಗಳ ಮುಂದೆ ಅತ್ಯಾಚಾರದ ಅಪರಾಧಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ, 2012 ರ ನಿಬಂಧನೆಗಳ ಅಡಿಯಲ್ಲಿ ಹಲವಾರು ಪ್ರಕರಣಗಳು ಬಾಕಿ ಉಳಿದಿವೆ” ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...