Homeಮುಖಪುಟಜುಲೈ 1 ಆದೇಶ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಚಾರ್ಜ್‌ಶೀಟ್ ಕುರಿತು...

ಜುಲೈ 1 ಆದೇಶ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಚಾರ್ಜ್‌ಶೀಟ್ ಕುರಿತು ದೆಹಲಿ ಕೋರ್ಟ್ ಹೇಳಿಕೆ

- Advertisement -
- Advertisement -

ಆರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್ ಅನ್ನು ಪರಿಗಣಿಸಬೇಕೆ ಎಂಬುದರ ಕುರಿತು ಜುಲೈ 1 ರಂದು ಆದೇಶವನ್ನು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಇಂದಿನ ವಿಚಾರಣೆಯ ನಂತರ ಮುಂದಿನ ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದ್ದಾರೆ.

“ಹೊಸ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಅದನ್ನು ಪರಿಶೀಲಿಸುತ್ತೇವೆ. ಇದು ಸುದೀರ್ಘ ಚಾರ್ಜ್ ಶೀಟ್ ಆಗಿರುವುದರಿಂದ ಒಂದೆರಡು ದಿನಗಳ ನಂತರ ಪರಿಗಣಿಸಲಾಗುವುದು” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದೇ ಸಮಯದಲ್ಲಿ, ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಕುಸ್ತಿಪಟುಗಳ ಪರವಾಗಿ ಈ ಹಿಂದೆ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಯಿತು.

ಬಿಜೆಪಿ ಸಂಸದ ಸಿಂಗ್ ವಿರುದ್ಧದ ಎಫ್‌ಐಆರ್‌ಗಳಲ್ಲಿ ಅವರು ಕನಿಷ್ಠ ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ವೃತ್ತಿಪರ ಸಹಾಯ ಮಾಡುವುದಾಗಿ ಲೈಂಗಿಕತೆಗೆ ಸಹಕರಿಸುವ ಬೇಡಿಕೆಯಿಟ್ಟಿದ್ದಾರೆ ಮತ್ತು ಅರ್ಧ ಡಜನ್‌ಗಿಂತಲೂ ಹೆಚ್ಚು ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಲೈಂಗಿಕ ಕಿರುಕುಳದ ಆರೋಪಿ ಸಿಂಗ್‌ನನ್ನು ಬಂಧಿಸುವಂತೆ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಏಪ್ರಿಲ್‌ನಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ನಂತರ ತಮ್ಮ ಹೋರಾಟವನ್ನು ನ್ಯಾಯಾಲಯದಲ್ಲಿ ಮುಂದುವರೆಸಲು ನಿರ್ಧಿರಿಸಿದ್ದಾರೆ.

ಇದನ್ನೂ ಓದಿ; ಬಿಜೆಪಿಗೆ ಬೇಕಿರುವ ಏಕರೂಪ ನಾಗರಿಕ ಸಂಹಿತೆ ನ್ಯಾಯಸಮ್ಮತವಾದದ್ದೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...