Homeಮುಖಪುಟಉತ್ತರಪ್ರದೇಶ: ತುರ್ತು ಚಿಕಿತ್ಸೆ ನೀಡುವಂತೆ ಕೋರಿದವರಿಗೆ ಥಳಿಸಿದ ವೈದ್ಯರು

ಉತ್ತರಪ್ರದೇಶ: ತುರ್ತು ಚಿಕಿತ್ಸೆ ನೀಡುವಂತೆ ಕೋರಿದವರಿಗೆ ಥಳಿಸಿದ ವೈದ್ಯರು

- Advertisement -
- Advertisement -

ಉತ್ತರಪ್ರದೇಶದ ಮೀರತ್‌ನ ಎಲ್‌ಎಲ್‌ಆರ್‌ಎಂ ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮೇವಿನ ಯಂತ್ರಕ್ಕೆ ಬಿದ್ದು ಗಂಭೀರವಾಗಿದ್ದ 5 ವರ್ಷದ ಮಗುವಿಗೆ ಚಿಕಿತ್ಸೆ ನೀಡುವ ಬದಲು ತುರ್ತು ಚಿಕಿತ್ಸೆಗೆ ಆಗ್ರಹಿಸಿದ ಮಗುವಿನ ಕಟುಂಬಸ್ಥರ ಮೇಲೆ ವೈದ್ಯರು ಹಲ್ಲೆ ನಡೆಸಿದ್ದಾರೆ ಎಂದು FREE PRESS JOURNAL ವರದಿ ಮಾಡಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ.

ಆಕಸ್ಮಿಕವಾಗಿ ಮೇವಿನ ಯಂತ್ರಕ್ಕೆ ಬಿದ್ದು 5 ವರ್ಷದ ಮಗುವಿನ ಕೈ ತುಂಡಾಗಿದೆ. ತಕ್ಷಣದ ವೈದ್ಯಕೀಯ ನೆರವಿಗಾಗಿ ಕುಟುಂಬವು ಸಹಾಯ ಕೋರಿ LLRM ವೈದ್ಯಕೀಯ ಕಾಲೇಜಿಗೆ ಧಾವಿಸಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುವ ಬದಲು ಮಗುವಿನ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿದ್ದ ಮಗು ಚೀರಾಡುತ್ತಿತ್ತು. ಆದರೆ ವೈದ್ಯರು ಗೂಂಡಾಗಿರಿ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಕಿರಿಯ ವೈದ್ಯರು  ಮಗುವಿನ ಕುಟುಂಬದವರ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿದೆ. ಈ ಘಟನೆಯ ಬೆನ್ನಲ್ಲೇ ಆರೋಪಿತ ಮೂವರು ವೈದ್ಯರನ್ನು ಅಮಾನತುಗೊಳಿಸಿ ಅವರ ವಿರುದ್ಧ ತನಿಖೆಗೆ ಸೂಚಿಸಲಾಗಿದೆ ಎಂದು LLRM ವೈದ್ಯಕೀಯ ಕಾಲೇಜಿನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದ ಮಿಜೋರಾಂ ಸಿಎಂ; ಬಿಜೆಪಿಗೆ ಶಾಕ್ ಕೊಟ್ಟ ಮೈತ್ರಿ ಪಕ್ಷ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

0
ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಧ್ಯಂತರ...