Homeಮುಖಪುಟ'ಸ್ವಲ್ಪ ತಾಳ್ಮೆಯಿಂದಿರಿ, ನಿರೀಕ್ಷಿಸಿ..'; ನಿತೀಶ್‌ ಜತೆಗಿನ ವಿಮಾನ ಪ್ರಯಾಣದ ಕುರಿತು ತೇಜಸ್ವಿ ಪ್ರತಿಕ್ರಿಯೆ

‘ಸ್ವಲ್ಪ ತಾಳ್ಮೆಯಿಂದಿರಿ, ನಿರೀಕ್ಷಿಸಿ..’; ನಿತೀಶ್‌ ಜತೆಗಿನ ವಿಮಾನ ಪ್ರಯಾಣದ ಕುರಿತು ತೇಜಸ್ವಿ ಪ್ರತಿಕ್ರಿಯೆ

- Advertisement -
- Advertisement -

ಒಂದೆ ವಿಮಾನದಲ್ಲಿ ಪ್ರತಿಸ್ಪರ್ಧಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಿಂದ ದೆಹಲಿಗೆ ಪ್ರಯಾಣಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, ಜೆಡಿ-ಯು ಮುಖ್ಯಸ್ಥರೊಂದಿಗಿನ ಮಾತುಕತೆಗೆ ಸಂಬಂಧಿಸಿದ ಪ್ರಶ್ನೆಗೆ ‘ಸ್ವಲ್ಪ ತಾಳ್ಮೆಯಿಂದಿರಿ’ ಎಂದು ಸುದ್ದಿಗಾರರಿಗೆ ತಿಳಿಸಿದರು. ನಂತರ, ಅವರು ಇಂಡಿಯಾ ಬ್ಲಾಕ್‌ ನಾಯಕರನ್ನು ಭೇಟಿಯಾಗಲು ತೆರಳಿದರು.

“ಸ್ವಲ್ಪ ತಾಳ್ಮೆಯಿಂದಿರಿ; ನಿರೀಕ್ಷಿಸಿ,ವೀಕ್ಷಿಸಿ” ಎಂದು ಅವರು ಸುದ್ದಿಗಾರರಿಗೆ ಹೇಳಿದರು, “ನಾವು ಪರಸ್ಪರ ಶುಭಾಶಯ ಕೋರಿದ್ದೇವೆ. ಬಾಕಿ ಕ್ಯಾ ಹೋತಾ ಹೈ, ಆಗೇ ದೇಖ್ತೇ ದೇಖ್ತೆ ರಹಿಯೇ” ಎಂದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಗೆ ತೇಜಸ್ವಿ ಯಾದವ್, “ಸ್ವಲ್ಪ ತಾಳ್ಮೆಯಿಂದಿರಿ, ಏನಾಗುತ್ತದೆ ಕಾದು ನೋಡಿ…” ಎಂದು ಹೇಳಿದರು.

ಒಂದೆ ವಿಮಾನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ದೆಹಲಿ ತಲುಪಿದಾಗ, ನಾನು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಬಂದಿದ್ದೇನೆ, ಸಂಜೆ 6 ಗಂಟೆಗೆ ಸಭೆ ಇದೆ, ಸಭೆಯಲ್ಲಿ ಎಲ್ಲರ ಅಭಿಪ್ರಾಯ ಏನು ಎಂದು ನೋಡೋಣ ಎಂದು ಹೇಳಿದರು.

“ದೇಶದಲ್ಲಿ ದೌರ್ಜನ್ಯದ ವಿರುದ್ಧ ಮತದಾನ ಮಾಡಲಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು ಮತದಾನ ಮಾಡಲಾಗಿದೆ. ‘ಜನತಾ ಮಾಲಿಕ್’ ಎಂದು ನಾನು ಭಾವಿಸುತ್ತೇನೆ. ಇಂದು ಸಂಜೆ ಸಭೆಯ ನಂತರ ಏನು ನಿರ್ಧರಿಸುತ್ತದೆ ಎಂದು ನೋಡೋಣ” ಎಂದು ಅವರು ಹೇಳಿದರು.

ನಿತೀಶ್ ಕುಮಾರ್ ನಡೆಯತ್ತ ಎಲ್ಲರ ಚಿತ್ತ:

ಪಕ್ಷಗಳನ್ನು ಬದಲಾಯಿಸುವ ಕುಮಾರ್ ಅವರ ದಾಖಲೆಯನ್ನು ಪರಿಗಣಿಸಿ, ಅವರು ಇಂಡಿಯಾ ಬ್ಲಾಕ್‌ಗೆ ಸೇರಬಹುದು ಎಂಬ ಊಹಾಪೋಹ ಹೆಚ್ಚಾಗಿದೆ. ಇಂದು ಬೆಳಗ್ಗೆ ಪಟ್ನಾದಿಂದ ದೆಹಲಿಗೆ ಒಂದೆ ವಿಮಾನದಲ್ಲಿ ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರೊಂದಿಗೆ ಪ್ರಯಾಣಿಸಿದ ನಂತರ ಊಹಾಪೋಹಗಳು ಮತ್ತಷ್ಟು ಬಲಗೊಂಡವು.

ಈ ಮಧ್ಯೆ, ಲೋಕಸಭಾ ಚುನಾವಣಾ ಫಲಿತಾಂಶಗಳು ಪ್ರಕಟವಾದ ಒಂದು ದಿನದ ನಂತರ ಎನ್‌ಡಿಎ ಮತ್ತು ಇಂಡಿಯಾ ಬ್ಲಾಕ್ ಸಭೆಗಳು ನವದೆಹಲಿಯಲ್ಲಿ ನಡೆಯಲಿವೆ. ಇದರಲ್ಲಿ ಭಾರತೀಯ ಜನತಾ ಪಕ್ಷವು ತನ್ನದೇ ಆದ ಬಹುಮತವನ್ನು ಸಾಧಿಸಲು ವಿಫಲವಾಗಿದೆ. 543 ಸ್ಥಾನಗಳ ಪೈಕಿ 240ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದ್ದು, 2019ಕ್ಕೆ ಹೋಲಿಸಿದರೆ 60ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡಿದೆ.

ಇದನ್ನೂ ಓದಿ; ಜೈಲಿನಿಂದಲೆ ಚುನಾವಣೆ ಗೆದ್ದ ಇಬ್ಬರು ಅಭ್ಯರ್ಥಿಗಳು; ಪ್ರಮಾಣ ವಚನ ಸ್ವೀಕರಿಸುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...