Homeಮುಖಪುಟಅಯೋಧ್ಯೆ ತೀರ್ಪಿನ ಭಾಗವಾಗಿದ್ದ ಜಸ್ಟಿಸ್ ಅಬ್ದುಲ್‌ ನಜೀರ್‌ ಆಂಧ್ರ ರಾಜ್ಯಪಾಲರಾಗಿ ನೇಮಕ

ಅಯೋಧ್ಯೆ ತೀರ್ಪಿನ ಭಾಗವಾಗಿದ್ದ ಜಸ್ಟಿಸ್ ಅಬ್ದುಲ್‌ ನಜೀರ್‌ ಆಂಧ್ರ ರಾಜ್ಯಪಾಲರಾಗಿ ನೇಮಕ

- Advertisement -
- Advertisement -

ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಪ್ರಸ್ತುತ ರಾಜ್ಯಪಾಲರಾಗಿರುವ ಬಿಸ್ವಭೂಷಣ ಹರಿಚಂದನ್ ಅವರ ಸ್ಥಾನವನ್ನು ಅಬ್ದುಲ್‌ ನಜೀರ್‌‌ ತುಂಬಲಿದ್ದಾರೆ. ನ್ಯಾಯಮೂರ್ತಿ ನಜೀರ್ ಈ ವರ್ಷ ಜನವರಿ 4 ರಂದು ನಿವೃತ್ತರಾದರು. ಫೆಬ್ರವರಿ 12 ರ ಭಾನುವಾರದಂದು ರಾಜ್ಯಪಾಲರಾಗಿ ನೇಮಕಗೊಂಡ ಆರು ಹೊಸ ಮುಖಗಳಲ್ಲಿ ನಾಲ್ವರು ಬಿಜೆಪಿ ನಾಯಕರು ಸಹ ಸೇರಿದ್ದಾರೆ.

ಜನವರಿ 5, 1958 ರಂದು ಜನಿಸಿದ ನ್ಯಾಯಮೂರ್ತಿ ನಜೀರ್ ಅವರು 1983 ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು. ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲಿ ವೃತ್ತಿ ಮಾಡಿದರು, ಅಲ್ಲಿಯೇ 2003 ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 2004 ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. 2017 ರಲ್ಲಿ ಬಡ್ತಿ ಪಡೆದ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾದರು.

ಬಾಬರಿ ಮಸೀದಿಯ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದ ಅಯೋಧ್ಯೆ ತೀರ್ಪು, ಒಂಬತ್ತು ನ್ಯಾಯಾಧೀಶರ ಪೀಠವು ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕೆಂದು ಎತ್ತಿ ಹಿಡಿದ ಕೆ.ಎಸ್.ಪುಟ್ಟಸ್ವಾಮಿ ಪ್ರಕರಣ ಸೇರಿದಂತೆ ಹಲವಾರು ಪ್ರಮುಖ ತೀರ್ಪುಗಳಲ್ಲಿ ಅವರು ಭಾಗಿಯಾಗಿದ್ದಾರೆ. ನೋಟು ರದ್ದತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಸರ್ಕಾರ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಆ ಪೀಠದಲ್ಲಿಯೂ ಜಸ್ಟೀಸ್ ನಸೀರ್‌ ಇದ್ದರು.

ಬಿಜೆಪಿ ನಾಯಕರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ, ಸಿಪಿ ರಾಧಾಕೃಷ್ಣನ್, ಶಿವ ಪ್ರತಾಪ್ ಶುಕ್ಲಾ ಮತ್ತು ರಾಜಸ್ಥಾನದ ವಿರೋಧ ಪಕ್ಷದ ನಾಯಕರಾಗಿರುವ ಗುಲಾಬ್ ಚಂದ್ ಕಟಾರಿಯಾ ಅವರನ್ನು ಕ್ರಮವಾಗಿ ಸಿಕ್ಕಿಂ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಅಸ್ಸಾಂನ ರಾಜ್ಯಪಾಲರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಕೋಶ್ಯಾರಿ ಅವರ ಜಾಗಕ್ಕೆ ಜಾರ್ಖಂಡ್ ಗವರ್ನರ್ ರಮೇಶ್ ಬೈಸ್ ನೇಮಕವಾಗಿದ್ದಾರೆ. ಮಾಥುರ್ ಅವರ ಸ್ಥಾನಕ್ಕೆ ಅರುಣಾಚಲ ಪ್ರದೇಶದ ಗವರ್ನರ್ ಬ್ರಿಗ್ ಬಿಡಿ ಮಿಶ್ರಾ (ನಿವೃತ್ತ) ಅವರು ಬರಲಿದ್ದಾರೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ಮತ್ತು ಲೆಫ್ಟಿನೆಂಟ್ ಜನರಲ್ ಕೆಟಿ ಪರ್ನಾಯಕ್ (ನಿವೃತ್ತ) ಅವರನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಅಧಿಕಾರ ಬೇಕಾ? ಆದರ್ಶ ಬೇಕಾ?

    ಕೊನೆಗೂ ಅಧಿಕಾರಿವೇ ಗೆಲ್ಲುತ್ತೆ ಎನ್ನುವುದಕ್ಕೆ ಇದೊಂದು ನಿದರ್ಶನ.

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...