Homeಮುಖಪುಟರಾಷ್ಟೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಜಸ್ಟಿಸ್‌ ಅರುಣ್‌ ಮಿಶ್ರಾ ನೇಮಕ

ರಾಷ್ಟೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಜಸ್ಟಿಸ್‌ ಅರುಣ್‌ ಮಿಶ್ರಾ ನೇಮಕ

ಎಸ್‌ಸಿ ಎಸ್ಟಿ ವರ್ಗದಿಂದ ಅಧ್ಯಕ್ಷ ಅಥವಾ ಸದಸ್ಯರು ಯಾಕಿಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ

- Advertisement -
- Advertisement -

ಸುಪ್ರೀಂ ಕೋರ್ಟ್‌ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್‌ ಅರುಣ್‌ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜಸ್ಟಿಸ್‌ ಅರುಣ ಮಿಶ್ರಾ 2020ರ ಸೆಪ್ಟೆಂಬರ್‌ 3 ರಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದರು.

ಜಸ್ಟಿಸ್‌ ಅರುಣ್‌ ಮಿಶ್ರಾ 2014 ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಈ ಹಿಂದೆ ಅವರು ರಾಜಸ್ಥಾನ ಮತ್ತು ಕಲ್ಕತ್ತಾ ಹೈಕೋರ್ಟ್‌ ಗಳ ಮುಖ್ಯನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. ಜಸ್ಟಿಸ್‌ ಮಿಶ್ರಾ ಅವರ ಈಗಿನ ಹೊಸ ಹುದ್ದೆಯ ಅಧಿಕಾರಾವಧಿಯು 5 ವರ್ಷದ್ದಾಗಿದು 2026 ರಲ್ಲಿ ನಿವೃತ್ತರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಸಭೆಯ ಉಪಾಧ್ಯಕ್ಷ ಹರಿವಂಶ, ಲೋಕಸಭೆ ಸ್ಪೀಕರ್‌ ಓಮ್‌ ಬಿರ್ಲಾ ರಾಜ್ಯ ಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನೊಳಗೊಂಡ ಉನ್ನತ ಸಮಿತಿಯು ಅರುಣ್‌ ಮಿಶ್ರಾ ಅವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಜಸ್ಟಿಸ್‌ ಅರುಣ್‌ ಮಿಶ್ರಾ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು ಯಾರಾದರೂ ಎಸ್‌ಸಿ, ಎಸ್ಟಿ ಸಮುದಾಯದಿಂದ ಬಂದವರನ್ನು ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ. ಅಥವಾ ಎಸ್‌ಸಿ ಸ್ಟಿ ಸಮುದಾಯದವರೊಬ್ಬರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ ನೇಮಿಸುವಂತೆ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮನವಿ ಮಾಡಿದ್ದಾರೆ. ದೇಶದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಇತ್ತೀಚಿನ ವರ್ಷಗಳಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಆ ಸಂಬಂಧ ಹೆಚ್ಚು ಹೆಚ್ಚು ಪ್ರಕರಣಗಳು ಮಾನವ ಹಕ್ಕು ಆಯೋಗದ ಮುಂದೆ ಬರುತ್ತಿವೆ ಹಾಗಾಗಿ ಎಸ್‌ಸಿ ಎಸ್ಟಿ ಸಮುದಾಯದವರು ಆಯೋಗದಲ್ಲಿದ್ದರೆ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೂಲಗಳು ಹೇಳುವಂತೆ ಮಲ್ಲಿಕಾರ್ಜುನ ಖರ್ಗೆಯವರು ಸಮಿತಿಯ ಸಭೆಗೂ ಮೊದಲು ಪ್ರಧಾನಿಯವರಿಗೆ ಈ ಸಂಬಂಧ ಪತ್ರವನ್ನು ಬರೆದಿದ್ದಾರೆ. ನಿಯಮಾವಳಿಗಳಲ್ಲಿ ಅವಕಾಶವಿಲ್ಲ ಅಥವಾ ನಿಯಮಾವಳಿಗಳು ಎಸ್‌ಸಿ ಎಸ್ಟಿ ವರ್ಗದವರನ್ನು ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ ಆಯ್ಕೆ ಮಾಡಿ ಎಂದು ಹೇಳುವುದಿಲ್ಲ ಎಂಬ ಒಂದೇ ಕಾರಣಕ್ಕೆ ದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಎಸ್‌ಸಿ ಎಸ್ಟಿ ಸಮುದಾಯದವರೊಬ್ಬರನ್ನು ಆಯೋಗಕ್ಕೆ ಸದಸ್ಯರನ್ನಾಗಿ ಆಯ್ಕೆ ಮಾಡಿ ಎಂದು ಖರ್ಗೆಯವರು ತಮ್ಮ ಪತ್ರದಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರಧಾನಿಯವರಲ್ಲಿ ಮನವಿ ಮಾಡಿದ್ದರು.

ಕಳೆದ ಡಿಸೆಂಬರ್‌ ನಲ್ಲಿ ಮಾಜಿ ಸಿಜೆಐ ಹೆಚ್‌ ಎಲ್‌ ದತ್ತು ಅವರ ನಿವೃತಿಯ ನಂತರ 6 ತಿಂಗಳುಗಳಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆ ಖಾಲಿಯಾಗಿಯೇ ಉಳಿದಿತ್ತು. ಜೊತೆಗೆ ಆಯೋಗದ ಸದಸ್ಯರ ಹುದ್ದೆಗಳು ದೀರ್ಘಾವಧಿಯಿಂದ ತೆರವಾಗಿಯೇ ಉಳಿದಿವೆ. ಹಿಂದೆ ಮಾರ್ಚ್‌ ನಲ್ಲಿ ಮಾಜಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಮತ್ತು ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಜಸ್ಟಿಸ್‌ ಪ್ರಫುಲ್ಲ ಪಂತ್‌ ರಾಷ್ಟ್ರೀಯ ಆಯೋಗದಲ್ಲಿ ಖಾಲಿಯಾಗಿಯೇ ಉಳಿದಿರುವ ಅಧ್ಯಕ್ಷ ಮತ್ತು ಸದಸ್ಯರ ಹುದ್ದೆ ಕುರಿತು ಸರ್ಕಾರವನ್ನು ಪ್ರಶ್ನೆ ಮಾಡಿದ್ದರು.

ರಾಜ್ಯ ಮಾನವ ಹಕ್ಕುಗಳ ಆಯೋಗಗಳೂ ಕೂಡ ಸದಸ್ಯರು ಮತ್ತು ಅಧ್ಯಕ್ಷರಿಲ್ಲದೇ ಸ್ಥಗಿತ ಗೊಂಡಿವೆ. ಈ ವಿಷಯವನ್ನು ಜಸ್ಟಿಸ್‌ ಪ್ರಫುಲ್ಲ ಪಂತ್‌ ಅತ್ಯಂತ ಕಳವಳಕಾರಿ ಅಂಶ ಎಂದು ಮಾರ್ಚ್‌ ನಲ್ಲಿ ಹೇಳಿಕೆ ನೀಡಿದ್ದರು. ಅನೇಕ ರಾಜ್ಯಗಳಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗಳು ಅಧ್ಯಕ್ಷರು ಮತ್ತು ಅಗತ್ಯ ಸಂಖ್ಯೆಯ ಸದಸ್ಯರಿಲ್ಲದೇ ಕಾರ್ಯಾಚರಣೆಯನ್ನು ನಿಲ್ಲಿಸಿವೆ. ಉದಾಹರಣೆಗೆ ಮಹರಾಷ್ಟ್ರದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ 2018 ರಿಂದ ಈಚೆಗೆ ಪೂರ್ಣಾವಧಿಯ ಅಧ್ಯಕ್ಷರ ನೇಮಕವಾಗಿಲ್ಲ. ಇದರಿಂದಾಗಿ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಹೆಚ್ಚು ಹೆಚ್ಚು ಪ್ರಕರಣಗಳು ಹೈಕೋರ್ಟ್‌ ಮೆಟ್ಟಿಲೇರವಂತಾಗಿದೆ. ಮಹರಾಷ್ಟ್ರದ ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಕೊರತೆಯಿಂದ ಕಳೆದ ವರ್ಷ ಕೋವಿಡ್‌ ಮೊದಲ ಅಲೆಯ ಸಮಯದಲ್ಲಿ ವಲಸೆ ಕಾರ್ಮಿಕರ ಸಮಸ್ಯೆಯು ಉದ್ಭವಿಸಿತು. ಮಹರಾಷ್ಟ್ರವಲ್ಲದೇ ಇನ್ನೂ ಅನೇಕ ರಾಜ್ಯಗಳಲ್ಲಿ ಸದಸ್ಯರ ಮತ್ತು ಅಧ್ಯಕ್ಷರ ಅನುಪಸ್ಥಿತಿಯಿಂದ ಮಾನವಹಕ್ಕು ಆಯೋಗದ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ.


ಇದನ್ನೂ ಓದಿ: ದೇವೇಗೌಡರು ಪ್ರಧಾನಿಯಾಗಿ 25 ವ‍ರ್ಷದ ಸಂದರ್ಭದಲ್ಲಿ ಒಕ್ಕೂಟ ವ್ಯವಸ್ಥೆಯ ಸ್ಥಿತಿಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...