Homeಮುಖಪುಟಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಮುಂದಿನ ಸಿಜೆಐ ಸ್ಥಾನಕ್ಕೆ ಜಸ್ಟೀಸ್ ಚಂದ್ರಚೂಡ್‌ ಹೆಸರು ಶಿಫಾರಸ್ಸು

ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಜಸ್ಟೀಸ್‌ ಡಿ.ವೈ.ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರ ಸಮ್ಮುಖದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ.

ಸಿಜೆಐ ಯು.ಯು.ಲಲಿತ್ ಅವರು ಶಿಫಾರಸ್ಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸಿಜೆಐ ಅವರ ಶಿಫಾರಸನ್ನು ಪರಿಗಣಿಸುವುದರ ಜೊತೆಗೆ, ಮುಂದಿನ ಸಿಜೆಐ ಅನ್ನು ಹೆಸರಿಸುವ ಮೊದಲು ಭಾರತದ ರಾಷ್ಟ್ರಪತಿಯವರಿಗೆ ಪ್ರಧಾನಿ ಸಲಹೆ ನೀಡುತ್ತಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್ ಅವರು ಪ್ರಸ್ತುತ ಸಿಜೆಐ ನಂತರದಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆದ್ದರಿಂದ ಹಿರಿತನದ ಆಧಾರದಲ್ಲಿ ಅವರನ್ನು ಸಂಪ್ರದಾಯದಂತೆ ಸಿಜೆಐ ಆಗಿ ನೇಮಿಸಲು ಶಿಫಾರಸ್ಸು ಮಾಡಲಾಗಿದೆ.

ಸಿಜೆಐ ನೇಮಕವನ್ನು ಸರ್ಕಾರ ಮತ್ತು ನ್ಯಾಯಾಂಗವು ಒಪ್ಪಿಗೆ ನೀಡುವ ಮೆಮೊರಾಂಡಮ್ ಆಫ್ ಪ್ರೊಸೀಜರ್ (ಎಂಒಪಿ) ಮೂಲಕ ನಿರ್ಧರಿಸಲಾಗುತ್ತದೆ. 1981, 1993 ಮತ್ತು 1998ರ ಮೂರು ನ್ಯಾಯಾಧೀಶರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ತಾಳಿದ ನಿರ್ಧಾರಗಳನ್ನು ಆಧರಿಸಿ ಎಂಒಪಿ ರೂಪುಗೊಂಡಿದೆ. ಹಿರಿಯ ನ್ಯಾಯಮೂರ್ತಿಯನ್ನು ನೇಮಿಸುವಂತೆ ಎಂಒಪಿ ಸೂಚಿಸುತ್ತದೆ.

ಸಿಜೆಐ ನೇಮಕಾತಿಯಲ್ಲಿ ಸಾಂಪ್ರದಾಯಿಕವಾಗಿ ಹಿರಿತನವನ್ನು ಪರಿಗಣಿಸಲಾಗುತ್ತದೆ. ಆದರೆ ಹಿರಿತನವನ್ನು ವಯಸ್ಸಿನಿಂದ ನಿರ್ಧರಿಸಲಾಗುವುದಿಲ್ಲ ಎಂಬುದು ಗಮನಾರ್ಹ. ಸುಪ್ರೀಂಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ನೇಮಕವಾದ ದಿನಾಂಕದಿಂದ ಪರಿಗಣಿಸಿ, ಸೇವೆಯ ಅವಧಿಯ ಆಧಾರದಲ್ಲಿ ಹಿರಿತನವನ್ನು ನಿರ್ಧರಿಸಲಾಗುತ್ತದೆ.

ಒಂದು ವೇಳೆ ಇಬ್ಬರು ನ್ಯಾಯಾಧೀಶರು ಒಂದೇ ರೀತಿಯ ಹಿರಿತನವನ್ನು ಹೊಂದಿದ್ದರೆ, ಇಬ್ಬರಲ್ಲಿ ಯಾರಿಗೆ ಹೈಕೋರ್ಟ್‌ನಲ್ಲಿ ಹೆಚ್ಚಿನ ವರ್ಷಗಳ ಅನುಭವವಿದೆ ಅಥವಾ ಮೊದಲು ಪ್ರಮಾಣ ವಚನ ಸ್ವೀಕರಿಸಿದವರು ಯಾರು ಎಂಬ ಕೆಲವು ಅಂಶಗಳನ್ನು ಪರಿಗಣಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಉದಯ್ ಯು.ಯು.ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಂಡರು. ಅವರಿಗಿಂತ ಮೊದಲು ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರು ಯು.ಯು.ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.

ಸುಪ್ರೀಂ ಕೋರ್ಟ್‌ನ ಕಾರ್ಯನಿರ್ವಹಣೆಯಲ್ಲಿ ಸಿಜೆಐ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನ್ಯಾಯಾಲಯದ ಆಡಳಿತವನ್ನು ಮೇಲ್ವಿಚಾರಣೆ ಮಾಡುತ್ತಾರೆ, ನ್ಯಾಯಾಧೀಶರಿಗೆ ಪ್ರಕರಣಗಳನ್ನು ಹಂಚುತ್ತಾರೆ ಮತ್ತು ಭಾರತದಾದ್ಯಂತ ನ್ಯಾಯಾಧೀಶರನ್ನು ನೇಮಿಸುವ ಕೊಲಿಜಿಯಂನ ಮುಖ್ಯಸ್ಥರಾಗಿರುತ್ತಾರೆ. ಬಹಳ ಮುಖ್ಯವಾಗಿ ಮುಖ್ಯ ನ್ಯಾಯಮೂರ್ತಿಯವರು ತಮ್ಮ ಅಧಿಕಾರಾವಧಿಯಲ್ಲಿ ಒಂದು ಸಂಸ್ಥೆಯಾಗಿ ಸುಪ್ರೀಂ ಕೋರ್ಟ್‌ನ ಭವಿಷ್ಯವನ್ನು ನಿರ್ಧರಿಸುತ್ತಾರೆ.

ಕೊಲಿಜಿಯಂ ಎಂದರೇನು?

ಇದು ನ್ಯಾಯಾಧೀಶರ ನೇಮಕಾತಿ ಮತ್ತು ವರ್ಗಾವಣೆಗಾಗಿ ಮಾಡಲಾಗಿರುವ ಒಂದು ವ್ಯವಸ್ಥೆಯಾಗಿದೆ. ಅದು ಸುಪ್ರೀಂ ಕೋರ್ಟ್‌ನ ತೀರ್ಪುಗಳ ಮೂಲಕ ರೂಪುಗೊಂಡಿದ್ದು, ಸಂಸತ್ತಿನ ಕಾಯಿದೆಯಿಂದ ಅಥವಾ ಸಂವಿಧಾನದ ವಿಧಿಗಳ ಮೂಲಕ ಅಲ್ಲ.

ಸು‌ಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ಬೇರೆ ಬೇರೆ ಕೊಲಿಜಿಯಂ ಇರುತ್ತದೆ. ಸುಪ್ರೀಂಕೋರ್ಟ್‌ ಕೊಲಿಜಿಯಂ ಸಿಜೆಐ ನೇತೃತ್ವದಲ್ಲಿ ಇರುತ್ತದೆ. ಇದು ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರನ್ನು ಒಳಗೊಂಡಿದೆ. ಹೈಕೋರ್ಟ್‌ ಕೊಲಿಜಿಯಂ ಅನ್ನು ಅಲ್ಲಿನ ಮುಖ್ಯ ನ್ಯಾಯಾಧೀಶರು ಮತ್ತು ಆ ನ್ಯಾಯಾಲಯದ ಇತರ ನಾಲ್ಕು ಹಿರಿಯ ನ್ಯಾಯಾಧೀಶರು ಮುನ್ನಡೆಸುತ್ತಾರೆ.

ಸಿಜೆಐ ಮತ್ತು ಸುಪ್ರೀಂಕೋರ್ಟ್‌ ಕೊಲಿಜಿಯಂನ ಅನುಮೋದನೆಯ ನಂತರವೇ ಹೈಕೋರ್ಟ್‌ ಕೊಲಿಜಿಯಂನಿಂದ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳು ಸರ್ಕಾರವನ್ನು ತಲುಪುತ್ತವೆ. ಆದರೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರನ್ನು ಕೊಲಿಜಿಯಂ ವ್ಯವಸ್ಥೆಯ ಮೂಲಕ ಮಾತ್ರ ನೇಮಕ ಮಾಡಲಾಗುತ್ತದೆ. ಕೊಲಿಜಿಯಂ ಹೆಸರುಗಳನ್ನು ನಿರ್ಧರಿಸಿದ ನಂತರವೇ ಸರ್ಕಾರ ಅದರಲ್ಲಿ ಪಾತ್ರವಹಿಸಬಹುದಾಗಿದೆ.

ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ 

ಸಿಜೆಐ ನೇಮಕದಲ್ಲಿ ಸರ್ಕಾರದ ಪಾತ್ರವೇನು?

ಒಕ್ಕೂಟ ಸರ್ಕಾರದ ಕಾನೂನು ಸಚಿವರು ಪ್ರಧಾನಿಗೆ ಕಳುಹಿಸುವ ಮೊದಲು ಹಾಲಿ ಸಿಜೆಐ ಅವರಿಂದ ಶಿಫಾರಸು ಪಡೆಯುವುದನ್ನು ಹೊರತುಪಡಿಸಿ ಸಿಜೆಐ ನೇಮಕದಲ್ಲಿ ಸರ್ಕಾರದ ಯಾವುದೆ ಪಾತ್ರವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...