ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದು, ವಿವಿಧ ಸಂಸ್ಥೆಗಳಲ್ಲಿ ಅಳವಡಿಸಿಕೊಂಡಿರುವ ಧಾರ್ಮಿಕ ನೀತಿಗಳ ನಡುವಿನ ಅಸಂಗತತೆಯನ್ನು ಎತ್ತಿ ತೋರಿಸಿದ್ದಾರೆ. ಹಿಂದೂಗಳಿಗೊಂದು ನ್ಯಾಯ
ತಿರುಮಲ ದೇವಸ್ಥಾನದಲ್ಲಿ ಕೇವಲ ಹಿಂದೂ ಸಿಬ್ಬಂದಿ ಮಾತ್ರ ಎಂಬ ನೀತಿಯನ್ನು ಘೋಷಿಸಿದ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧ್ಯಕ್ಷರನ್ನು ಉಲ್ಲೇಖಿಸಿದ ಅವರು, ಕೇಂದ್ರದ ಎನ್‌ಡಿಎ ಸರ್ಕಾರವು ವಕ್ಫ್ ಬೋರ್ಡ್‌ಗಳಿಗೆ ಮುಸ್ಲಿಮೇತರರನ್ನು ಸೇರಿಸುವುದು ಕಡ್ಡಾಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಶುಕ್ರವಾರ ರಾತ್ರಿ X ನಲ್ಲಿ ಪೋಸ್ಟ್ ಮಾಡಿರುವ ಓವೈಸಿ ಅವರು, “ತಿರುಮಲ ತಿರುಪತಿ ದೇವಸ್ಥಾನದ ಅಧ್ಯಕ್ಷರು ತಿರುಮಲದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂದು ಹೇಳುತ್ತಾರೆ. ಆದರೆ ವಕ್ಫ್ ಬೋರ್ಡ್ ಮತ್ತು ವಕ್ಫ್ ಕೌನ್ಸಿಲ್‌ಗಳಲ್ಲಿ ಮುಸ್ಲಿಮೇತರರು ಇರಬೇಕು ಎಂಬುವುದನ್ನು ಕಡ್ಡಾಯಗೊಳಿಸಲು ಮೋದಿ ಸರ್ಕಾರ ಬಯಸುತ್ತಿದೆ” ಎಂದು ಅವರು ಹೇಳಿದ್ದಾರೆ. ಹಿಂದೂಗಳಿಗೊಂದು ನ್ಯಾಯ
ಹೆಚ್ಚಿನ ಹಿಂದೂ ದತ್ತಿ ನಿಯಮಗಳು ತಮ್ಮ ಸಂಸ್ಥೆಗಳಲ್ಲಿ ಹಿಂದೂಗಳು ಮಾತ್ರ ಸದಸ್ಯರಾಗಿರಬೇಕು ಎಂದು ಹೇಳುತ್ತವೆ. ಎಲ್ಲರನ್ನೂ ಒಂದೆ ರೀತಿ ನೋಡಬೇಕು ಅಲ್ಲವೆ? ಎಂದು ಓವೈಸಿ ಅವರು ಕೇಳಿದ್ದಾರೆ.
Tirumala Tirupati Devasthanams’ chairman says that only Hindus should work in Tirumala. But Modi govt wants to make it mandatory for there to be non-Muslims in Waqf Boards & Waqf Council. Most Hindu Endowment laws insist that only Hindus should be its members. What is good for…
— Asaduddin Owaisi (@asadowaisi) November 1, 2024
ಟಿಟಿಡಿ ಮಂಡಳಿಯ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಅವರು ಅಕ್ಟೋಬರ್ 31 ರಂದು ತಿರುಮಲದಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಘೋಷಿಸಿದ್ದಾರೆ.
ಇತರ ಧರ್ಮಗಳಿಗೆ ಸೇರಿದ ಸಿಬ್ಬಂದಿಯನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ನಿರ್ಧರಿಸಲು ಆಂಧ್ರಪ್ರದೇಶ ಸರ್ಕಾರದೊಂದಿಗೆ ಈ ವಿಷಯವಾಗಿ ಚರ್ಚಿಸುವುದಾಗಿ ನಾಯ್ಡು ಹೇಳಿದ್ದಾರೆ. ಅಂತಹ ವ್ಯಕ್ತಿಗಳು ಇದ್ದರೆ ಅವರನ್ನು ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾಯಿಸುವ ಅಥವಾ ಸ್ವಯಂ ನಿವೃತ್ತಿ ಯೋಜನೆಗಳನ್ನು (ವಿಆರ್‌ಎಸ್) ನೀಡುವ ಸಾಧ್ಯತೆಯನ್ನು ಅವರು ಪ್ರಸ್ತಾಪಿಸಿದ್ದಾರೆ.
ಇದನ್ನೂ ಓದಿ: ವಕ್ಫ್ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್ ತಕ್ಷಣವೆ ವಾಪಸ್ – ಸಿಎಂ ಸಿದ್ದರಾಮಯ್ಯ
ವಕ್ಫ್ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್ ತಕ್ಷಣವೆ ವಾಪಸ್ – ಸಿಎಂ ಸಿದ್ದರಾಮಯ್ಯ


