Homeಮುಖಪುಟಹಿಂದೂಗಳಿಗೊಂದು ನ್ಯಾಯ, ಮುಸ್ಲಿಮರಿಗೊಂದು ನ್ಯಾಯ - ವಕ್ಫ್‌ ವಿಚಾರದ ಬಗ್ಗೆ ಮೋದಿ ವಿರುದ್ಧ ಓವೈಸಿ ಆಕ್ರೋಶ

ಹಿಂದೂಗಳಿಗೊಂದು ನ್ಯಾಯ, ಮುಸ್ಲಿಮರಿಗೊಂದು ನ್ಯಾಯ – ವಕ್ಫ್‌ ವಿಚಾರದ ಬಗ್ಗೆ ಮೋದಿ ವಿರುದ್ಧ ಓವೈಸಿ ಆಕ್ರೋಶ

- Advertisement -
- Advertisement -

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದು, ವಿವಿಧ ಸಂಸ್ಥೆಗಳಲ್ಲಿ ಅಳವಡಿಸಿಕೊಂಡಿರುವ ಧಾರ್ಮಿಕ ನೀತಿಗಳ ನಡುವಿನ ಅಸಂಗತತೆಯನ್ನು ಎತ್ತಿ ತೋರಿಸಿದ್ದಾರೆ. ಹಿಂದೂಗಳಿಗೊಂದು ನ್ಯಾಯ

ತಿರುಮಲ ದೇವಸ್ಥಾನದಲ್ಲಿ ಕೇವಲ ಹಿಂದೂ ಸಿಬ್ಬಂದಿ ಮಾತ್ರ ಎಂಬ ನೀತಿಯನ್ನು ಘೋಷಿಸಿದ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧ್ಯಕ್ಷರನ್ನು ಉಲ್ಲೇಖಿಸಿದ ಅವರು, ಕೇಂದ್ರದ ಎನ್‌ಡಿಎ ಸರ್ಕಾರವು ವಕ್ಫ್ ಬೋರ್ಡ್‌ಗಳಿಗೆ ಮುಸ್ಲಿಮೇತರರನ್ನು ಸೇರಿಸುವುದು ಕಡ್ಡಾಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ರಾತ್ರಿ X ನಲ್ಲಿ ಪೋಸ್ಟ್‌ ಮಾಡಿರುವ ಓವೈಸಿ ಅವರು, “ತಿರುಮಲ ತಿರುಪತಿ ದೇವಸ್ಥಾನದ ಅಧ್ಯಕ್ಷರು ತಿರುಮಲದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂದು ಹೇಳುತ್ತಾರೆ. ಆದರೆ ವಕ್ಫ್ ಬೋರ್ಡ್ ಮತ್ತು ವಕ್ಫ್ ಕೌನ್ಸಿಲ್‌ಗಳಲ್ಲಿ ಮುಸ್ಲಿಮೇತರರು ಇರಬೇಕು ಎಂಬುವುದನ್ನು ಕಡ್ಡಾಯಗೊಳಿಸಲು ಮೋದಿ ಸರ್ಕಾರ ಬಯಸುತ್ತಿದೆ” ಎಂದು ಅವರು ಹೇಳಿದ್ದಾರೆ. ಹಿಂದೂಗಳಿಗೊಂದು ನ್ಯಾಯ

ಹೆಚ್ಚಿನ ಹಿಂದೂ ದತ್ತಿ ನಿಯಮಗಳು ತಮ್ಮ ಸಂಸ್ಥೆಗಳಲ್ಲಿ ಹಿಂದೂಗಳು ಮಾತ್ರ ಸದಸ್ಯರಾಗಿರಬೇಕು ಎಂದು ಹೇಳುತ್ತವೆ. ಎಲ್ಲರನ್ನೂ ಒಂದೆ ರೀತಿ ನೋಡಬೇಕು ಅಲ್ಲವೆ? ಎಂದು ಓವೈಸಿ ಅವರು ಕೇಳಿದ್ದಾರೆ.

ಟಿಟಿಡಿ ಮಂಡಳಿಯ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಅವರು ಅಕ್ಟೋಬರ್ 31 ರಂದು ತಿರುಮಲದಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಘೋಷಿಸಿದ್ದಾರೆ.

ಇತರ ಧರ್ಮಗಳಿಗೆ ಸೇರಿದ ಸಿಬ್ಬಂದಿಯನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ನಿರ್ಧರಿಸಲು ಆಂಧ್ರಪ್ರದೇಶ ಸರ್ಕಾರದೊಂದಿಗೆ ಈ ವಿಷಯವಾಗಿ ಚರ್ಚಿಸುವುದಾಗಿ ನಾಯ್ಡು ಹೇಳಿದ್ದಾರೆ. ಅಂತಹ ವ್ಯಕ್ತಿಗಳು ಇದ್ದರೆ ಅವರನ್ನು ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾಯಿಸುವ ಅಥವಾ ಸ್ವಯಂ ನಿವೃತ್ತಿ ಯೋಜನೆಗಳನ್ನು (ವಿಆರ್‌ಎಸ್) ನೀಡುವ ಸಾಧ್ಯತೆಯನ್ನು ಅವರು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...