HomeಮುಖಪುಟJustice For Manipur: ಮಣಿಪುರದಲ್ಲಿ ಹಿಂಸಾಚಾರ-ಅತ್ಯಾಚಾರ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

Justice For Manipur: ಮಣಿಪುರದಲ್ಲಿ ಹಿಂಸಾಚಾರ-ಅತ್ಯಾಚಾರ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಕಳೆದ ಎರಡೂವರೆ ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ-ಅತ್ಯಾಚಾರ ಖಂಡಿಸಿ ಇಂದು ಬೆಂಗಳೂರಿನ ಟೌನ್ ಹಾಲ್ ಎದುರು Justice For Manipur ಹೆಸರಿನಲ್ಲಿ ಪ್ರತಿಭಟನೆ ನಡೆಯಿತು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ, ಸಂವಿಧಾನ ಉಳಿಸಿ – ಹೆಣ್ಣನ್ನು ರಕ್ಷಿಸಿ, ಆಳುವವರು ಅಳಿಸುತ್ತಿದ್ದಾರೆ, ಮಣಿಪುರದ ಜನರಿಗಾಗಿ ನಮ್ಮ ಮೌನ ಕಣ್ಣೀರು ಹೆಸರಿನ ಬಿತ್ತಿ ಫಲಕಗಳನ್ನು ಹಿಡಿದ ನೂರಾರು ಜನರು ಮಣಿಪುರದಲ್ಲಿ ಶಾಂತಿಗಾಗಿ ಒತ್ತಾಯಿಸಿ ಪ್ರತಿಭಟಿಸಿದರು.

ಮಣಿಪುರದಲ್ಲಿ ಇಂಟರ್ನೆಟ್ ಸೇವೆಯನ್ನು ಮರುಸ್ಥಾಪಿಸಬೇಕು. ಹಿಂಸಾಚಾರ ನಿಯಂತ್ರಿಸಲು ವಿಫಲರಾದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು. ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂಬ ಒತ್ತಾಯಗಳು ಕೇಳಿಬಂದವು.

ಹೋರಾಟಗಾರ್ತಿ ಅಕೈ ಪದ್ಮಶಾಲಿ, ಕೆಆರ್‌ಎಸ್ ಪಕ್ಷದ ನಾಯಕಿ ಜನನಿ ವತ್ಸಲ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದ್ನನೂ ಓದಿ: ಮಣಿಪುರದಲ್ಲಿ ಶಾಂತಿ-ಭದ್ರತೆ ಸ್ಥಾಪಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರಲು ಹಕ್ಕಿಲ್ಲ: ಮೋದಿ ಹಳೆಯ ಟ್ವೀಟ್ ವೈರಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read