Homeಕರ್ನಾಟಕನಾಗಮೋಹನ ದಾಸ್‌ರವರ ’ರೈತರ ಭದ್ರತೆ, ದೇಶದ ಭದ್ರತೆ’ ಪುಸ್ತಕ ಬಿಡುಗಡೆ-ವಿಚಾರ ಗೋಷ್ಠಿ

ನಾಗಮೋಹನ ದಾಸ್‌ರವರ ’ರೈತರ ಭದ್ರತೆ, ದೇಶದ ಭದ್ರತೆ’ ಪುಸ್ತಕ ಬಿಡುಗಡೆ-ವಿಚಾರ ಗೋಷ್ಠಿ

ಪರಿಸರ ತಜ್ಞರಾದ ಡಾ. ಅ.ನಾ. ಯಲ್ಲಪ್ಪ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.

- Advertisement -
- Advertisement -

ಜನಪ್ರಕಾಶನ ಪ್ರಕಟಿಸುತ್ತಿರುವ ಕರ್ನಾಟಕ ಹೈಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಹೆಚ್‌‌. ಎನ್‌. ನಾಗಮೋಹನ ದಾಸ್‌ ಅವರು ಬರೆದಿರುವ ’ರೈತರ ಭದ್ರತೆ ದೇಶದ ಭದ್ರತೆ’ ಪುಸ್ತಕ ಬಿಡುಗಡೆ ಹಾಗೂ ವಿಚಾರ ಗೋಷ್ಠಿ ಸೆಪ್ಟೆಂಬರ್‌ 13 ರ ಭಾನುವಾರ 11 ಗಂಟೆಗೆ ಬೆಂಗಳೂರಿನ ಕುಮಾರ ಕೃಪ ರಸ್ತೆಯ ಗಾಂಧಿ ಭವನದಲ್ಲಿ ನಡೆಯಲಿದೆ.

ಪರಿಸರ ತಜ್ಞರಾದ ಡಾ. ಅ.ನಾ. ಯಲ್ಲಪ್ಪ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ವಿಚಾರ ಗೋಷ್ಠಿಯಲ್ಲಿ ಪುಸ್ತಕದ ಲೇಖಕರಾದ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ವಿಚಾರ ಮಂಡನೆ ಮಾಡಲಿದ್ದಾರೆ.

ಇದನ್ನೂ ಓದಿ: ಸಂವಿಧಾನದ ಮುನ್ನುಡಿಯಿಂದ ’ಸಮಾಜವಾದಿ’ ಪದವನ್ನು ಕಿತ್ತೊಗೆಯುವ ನಿರ್ಣಯ ಮಂಡನೆಗೆ ಬಿಜೆಪಿ ಸಜ್ಜು

ಮುಖ್ಯ ಅಥಿತಿಗಳಾಗಿ ಕರ್ನಾಟಕ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾದ ಎಸ್‌. ಆರ್‌. ಪಾಟಿಲ್‌ ಮತ್ತು ಮಾಜಿ ಮುಖ್ಯಮಂತ್ರಿಯಾದ ಹೆಚ್‌.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಅವರು ಸ್ವಾಗತ ಮಾಡಿಲಿದ್ದು, ಪ್ರಸ್ತಾವನೆಯನ್ನು ಕೃಷಿ ಆರ್ಥಿಕ ತಜ್ಞರಾದ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳೇ ಸಂದೇಶವಾದರೆ ಸಂವಿಧಾನದ ಆಶಯಗಳೇ ಪತನ!

ರಾಜ್ಯ ಕಬ್ಬು ಬೆಳೆಗಾರರ ಸಂಘದ ಕುರುಬೂರು ಶಾಂತಕುಮಾರ್‌, ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ್‌ ಕೆರಗೋಡು, ರಾಜ್ಯ ಪ್ರಾಂತ್ಯ ರೈತ ಸಂಘದ ಬಯ್ಯಾರೆಡ್ಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ದ ಮಾವಳ್ಳಿ ಶಂಕರ್‌, “ನಮ್ಮೂರ ಭೂಮಿ ನಮಗಿರಲಿ’ ಅಭಿಯಾನದ ವಿ. ಗಾಯತ್ರಿ, ಗ್ರಾಮೀಣ ಕೂಲಿಕಾರರ ಸಂಘಟನೆಯ ಸ್ವರ್ಣ ಭಟ್‌, ಸೆಂಟರ್‌ ಫಾರ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌‌ನ ಮೀನಾಕ್ಷಿ ಸುಂದರಂ ವಿಚಾರ ಮಂಡನೆಗೆ ಪ್ರತಿಕ್ರಿಯೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕಡಿದಾಳು ಶಾಮಣ್ಣ, ಡಾ. ವಿಜಯಮ್ಮ, ಮೈಕೆಲ್‌ ಬಿ ಫರ್ನಾಂಡಿಸ್‌, ಬಿ.ಆರ್‌ ಪಾಟೀಲ್‌, ಚಾಮರಸ ಮಾಲಿಪಾಟೀಲ್‌, ಲಕ್ಷ್ಮೀನಾರಾಯಣ ನಾಗವಾರ, ವಿ. ನಾಗರಾಜ್‌, ಎಂ. ಶಿವಪ್ರಕಾಶ್‌, ನಂದಿನಿ ಜಯರಾಮ್‌, ಬಿ. ರಾಜಶೇಖರ ಮೂರ್ತಿ, ಯಶೋದಮ್ಮ, ಟಿ. ಯಶವಂತ್‌, ಶಾರದ ಗೋಪಾಲ್‌, ನಾಗರತ್ನಮ್ಮ ಬಿ. ಪಾಟೀಲ್‌, ಚಂದ್ರಶೇಖರ ಮೇಟಿ, ವಿನಯ್‌ ಶ್ರೀನಿವಾಸ್‌ ಮುಂತಾದವರು ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮವನ್ನು ಕರ್ನಾಟಕದ ರೈತ, ದಲಿತ, ಕಾರ್ಮಿಕ ಚಳುವಳಿಗಳು ಮತ್ತು ಪ್ರಗತಿಪರ
ಸಂಘಟನೆಗಳ ಐಕ್ಯ ಹೋರಾಟ ವೇದಿಕೆ ಆಯೋಜಿಸಿದೆ.


ಇದನ್ನೂ ಓದಿ: ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...