Homeಮುಖಪುಟಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

- Advertisement -
- Advertisement -

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಎ.ಎಂ.ಖಾನ್ವಿಲ್ಕರ್ ಅವರು ಸುಪ್ರೀಂಕೋರ್ಟ್‌ನಿಂದ ನಿವೃತ್ತರಾದ ಒಂದೂವರೆ ವರ್ಷಗಳ ನಂತರ ಲೋಕಪಾಲ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಜುಲೈ 2022ರಲ್ಲಿ ಸುಪ್ರೀಂಕೋರ್ಟ್‌ನಿಂದ ನಿವೃತ್ತರಾಗಿದ್ದರು. ಅವರನ್ನು ಫೆಬ್ರವರಿ 27, 2024ರಂದು ಲೋಕಪಾಲ್‌ ಆಗಿ ನೇಮಕ ಮಾಡಲಾಗಿದೆ. ಇವರು ಎರಡನೇ ಲೋಕಪಾಲ್‌ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ. ಇದಲ್ಲದೆ ರಾಷ್ಟ್ರಪತಿಗಳು ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಲಿಂಗಪ್ಪ ನಾರಾಯಣ ಸ್ವಾಮಿ, ಸಂಜಯ್ ಯಾದವ್ ಮತ್ತು ರಿತು ರಾಜ್ ಅವಸ್ತಿ ಅವರನ್ನು ಲೋಕಪಾಲ್‌ಗೆ  ನ್ಯಾಯಾಂಗ ಸದಸ್ಯರನ್ನಾಗಿ ನೇಮಿಸಿದೆ. ನ್ಯಾಯಾಂಗೇತರ ಸದಸ್ಯರಾಗಿ ಸುಶೀಲ್ ಚಂದ್ರ, ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಅವರನ್ನು ನೇಮಕ ಮಾಡಲಾಗಿದೆ.

ಜಾರ್ಖಂಡ್ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಮೊಹಾಂತಿ ಅವರು ಲೋಕಪಾಲ್‌ನ ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರಲ್ಲಿ ಲೋಕಪಾಲ್‌ ನ್ಯಾಯಾಂಗ ಸದಸ್ಯರಾಗಿ ನೇಮಕಗೊಂಡ ಅವರನ್ನು ಮೇ.2022ರಲ್ಲಿ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ನೇಮಕಾತಿಯು ನಿವೃತ್ತಿಯ ನಂತರದ ಉನ್ನತ ಹುದ್ದೆಗಳು ನೀಡುವ ಸಂಪ್ರದಾಯಕ್ಕೆ ನಿದರ್ಶನವಾಗಿದೆ. ನರೇಂದ್ರ ಮೋದಿ ಸರ್ಕಾರವು, ಬಾಬರಿ ಮಸೀದಿ- ರಾಮಜನ್ಮ ಭೂಮಿ ವಿವಾದದ ತೀರ್ಪು ನೀಡಿದ್ದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಸುಪ್ರೀಂಕೋರ್ಟ್‌ನಿಂದ ಸಿಜೆಐ ಆಗಿ ನಿವೃತ್ತರಾದ ನಾಲ್ಕು ತಿಂಗಳಲ್ಲಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಜುಲೈ 2021ರಲ್ಲಿ ನಿವೃತ್ತರಾದ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರು ಅದೇ ವರ್ಷದ ನಂತರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ ಮುಖ್ಯಸ್ಥರಾದರು. 2021ರಲ್ಲಿ ಮೋದಿ ಸರ್ಕಾರವು ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಅರುಣ್ ಕುಮಾರ್ ಮಿಶ್ರಾ ಅವರ ಹೆಸರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆಗೆ ಶಿಫಾರಸ್ಸು ಮಾಡಿತ್ತು. 2023ರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ಗವರ್ನರ್ ಆಗಿ ನೇಮಿಸಿದ್ದರು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ನರೇಂದ್ರ ಮೋದಿ ಸರ್ಕಾರದ ನಿರ್ಧಾರಗಳ ಮೇಲೆ ವ್ಯಾಪಕ ಪರಿಣಾಮ ಬೀರುವ ಪ್ರಮುಖ ತೀರ್ಪುಗಳನ್ನು ಬರೆದಿದ್ದಾರೆ.

377, ಆಧಾರ್, ಶಬರಿಮಲೆ

2018ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು. ಪೀಠದಲ್ಲಿ ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್, ಡಿವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಇದ್ದರು. ಈ ಪೀಠ ಸಲಿಂಗಕಾಮವನ್ನು ಅಪರಾಧವಲ್ಲ ಎಂದು ತೀರ್ಪು ನೀಡಿತ್ತು.

ಅದೇ ವರ್ಷ 2018ರಲ್ಲಿ, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪೀಠವು ಆಧಾರ್ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ನ್ಯಾಯಮೂರ್ತಿ ಸಿಕ್ರಿ ಅವರು ಬರೆದ ಬಹುಮತದ ಅಭಿಪ್ರಾಯವು ಅಂದಿನ ಸಿಜೆಐ ಮಿಶ್ರಾ ಮತ್ತು ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪರವಾಗಿತ್ತು. ಆಧಾರ್‌ ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದರು, ಇದನ್ನು ನ್ಯಾಯಾಲಯವು ಒಪ್ಪಿರಲಿಲ್ಲ.

2018ರಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ಅನುಮತಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಖಾನ್ವಿಲ್ಕರ್, ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ನಿಷೇಧಿಸುವುದು ಲಿಂಗ ತಾರತಮ್ಯ ಮತ್ತು ಆಚರಣೆಯು ಹಿಂದೂ ಮಹಿಳೆಯರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಗುಜರಾತ್ ಗಲಭೆ

2002ರ ಗುಜರಾತ್‌ ಗಲಭೆಗೆ ಸಂಬಂಧಿಸಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹತ್ಯೆಯಾದ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿದ ಪೀಠದಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರಿದ್ದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಆಧಾರದ ಮೇಲೆ, ಗುಜರಾತ್ ಪೊಲೀಸರು ಮರುದಿನ, ಗಲಭೆಗೆ ಸಂಬಂಧಿಸಿದ ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಆರ್.ಬಿ.ಶ್ರೀಕುಮಾರ್ ಅವರನ್ನು ಬಂಧಿಸಿದ್ದರು.

2022ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ  ಪೀಠ, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ- 2020ನ್ನು ಎತ್ತಿಹಿಡಿದಿತ್ತು.

ಅದೇ ವರ್ಷದಲ್ಲಿ, ಅವರ ನಿವೃತ್ತಿಗೆ ಎರಡು ದಿನಗಳ ಮೊದಲು, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಅಗಾಧ ಅಧಿಕಾರವನ್ನು ನೀಡುವ ತೀರ್ಪನ್ನು ನೀಡಿದ್ದರು.

ಇದನ್ನು ಓದಿ: ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 20,000 ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

0
ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಸುಮಾರು 20,000 ಮಂದಿ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ಪತ್ರಗಳನ್ನು...