Homeಮುಖಪುಟನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು 'ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ' ಹೇರಿತ್ತು: ನ್ಯಾ. ಲೋಕೂರ್ ಆರೋಪ

ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ

- Advertisement -
- Advertisement -

ದೆಹಲಿ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ಪದೇ ಪದೇ ಒತ್ತಡ ಹೇರುತ್ತಿತ್ತು. ಆದರೆ, ವರ್ಗಾವಣೆಯನ್ನು ವಿರೋಧಿಸಿದ ಪ್ರಮುಖ ನ್ಯಾಯಾಧೀಶರು ನಿವೃತ್ತರಾಗುವವರೆಗೂ ಅದು ಸಾಧ್ಯವಾಗಿರಲಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಆರೋಪಿಸಿದ್ದಾರೆ.

“ತಾನು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ನ್ಯಾ. ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿತ್ತು. ಆದರೆ, ನಾನು ವಿರೋಧಿಸಿದ್ದರಿಂದ ಅದು ಕಾರ್ಯಸಾಧ್ಯ ಆಗಲಿಲ್ಲ ಎಂದು ನ್ಯಾ. ಮರಳೀಧರ್ ಸಂಗ್ರಹದ ಇತ್ತೀಚೆಗೆ ಪ್ರಕಟಗೊಂಡ “[ಇನ್]ಕಂಪ್ಲೀಟ್ ಜಸ್ಟೀಸ್? ಸುಪ್ರೀಂ ಕೋರ್ಟ್ ಅಟ್ 75” ಎಂಬ ಪುಸ್ತಕದಲ್ಲಿ ಬರೆದ ಪ್ರಬಂಧದಲ್ಲಿ ನ್ಯಾ.ಲೋಕೂರ್ ನೆನಪಿಸಿಕೊಂಡಿದ್ದಾರೆ ಎಂದು livelaw.in ವರದಿ ಮಾಡಿದೆ.

“ಡಿಸೆಂಬರ್ 2018ರಲ್ಲಿ ತಾನು ನಿವೃತ್ತಿ ಹೊಂದಿದ ನಂತರ ಮುರಳೀಧರ್ ಅವರ ವರ್ಗಾವಣೆ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿತ್ತು. ಆ ಕೊಲಿಜಿಯಂನಲ್ಲಿದ್ದ ನ್ಯಾ. ಎ.ಕೆ ಸಿಕ್ರಿ ಅವರು ಅದನ್ನು ವಿರೋಧಿಸಿದ್ದರು. ನ್ಯಾ. ಸಿಕ್ರಿ ಮಾರ್ಚ್ 2019ರಲ್ಲಿ ನಿವೃತ್ತರಾದ ನಂತರ, ಮುರಳೀಧರ್ ಅವರ ವರ್ಗಾವಣೆ ವಿಷಯ ಮತ್ತೆ ಚರ್ಚೆಗೆ ಬಂತು.  ಅಂತಿಮವಾಗಿ, ಫೆಬ್ರವರಿ 2020ರಲ್ಲಿ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ‘ನಿರಂಕುಶವಾಗಿ’ ವರ್ಗಾಯಿಸಲಾಯಿತು ಎಂದು ನ್ಯಾಯಮೂರ್ತಿ ಲೋಕೂರ್ ತಮ್ಮ ಪ್ರಬಂಧದಲ್ಲಿ ಬರೆದಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

“ಸುಪ್ರೀಂ ಕೋರ್ಟ್ ಕೊಲಿಜಿಯಂನ ಕಾರ್ಯನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ಹೇಳಲೇಬೇಕಾದ ವಿಷಯವಿದೆ. ಒಂದು ಸಂದರ್ಭದಲ್ಲಿ, ಕಾರ್ಯಾಂಗವು ಸಿಜೆಐ ಅವರಿಗೆ ವರ್ಗಾವಣೆ ಮಾಡಲು ಸಲಹೆ ನೀಡಿದೆ ಎಂಬ ಸ್ಪಷ್ಟವಾದ ಅನಿಸಿಕೆ ನನಗೆ ಬಂತು. ಅದು ನ್ಯಾ. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ವರ್ಗಾವಣೆ ಮಾಡಿದ ವಿಷಯದಲ್ಲಿ. ಏನೋ ಒಂದು ವಿಷಯ ಖಂಡಿತವಾಗಿಯೂ ವರ್ಗಾವಣೆಗೆ ಆಧಾರವಾಗುವುದಿಲ್ಲ. ಹಾಗಾಗಿ, ನಾನು ವರ್ಗಾವಣೆ ಪ್ರಸ್ತಾವನೆಗೆ ನನ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೆ. ಸಿಜೆಐ ನನ್ನ ಅಭಿಪ್ರಾಯವನ್ನು ಸುಲಭವಾಗಿ ಒಪ್ಪಿಕೊಂಡಿದ್ದರು. ನಾನು ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿಯಾದ ನಂತರ, ವರ್ಗಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿತ್ತು. ಆದರೆ, ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಹೊಸದಾಗಿ ಸೇರ್ಪಡೆಯಾದ ನ್ಯಾ. ಸಿಕ್ರಿ ಕೂಡ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ಅವರು ಕೂಡ ಪ್ರಸ್ತಾವಿತ ವರ್ಗಾವಣೆಯನ್ನು ವಿರೋಧಿಸಿದ್ದರು. ಸಿಕ್ರಿ ಅವರ ನಿವೃತ್ತಿಯ ನಂತರ, ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ನಿರಂಕುಶವಾಗಿ ವರ್ಗಾಯಿಸಲಾಯಿತು” ಎಂದು ಲೋಕೂರ್ ಬರೆದಿದುಕೊಂಡಿದ್ದಾರೆ.

ಸ್ವತಂತ್ರ ಮತ್ತು ತೀಕ್ಷ್ಣ ತೀರ್ಪುಗಳಿಗೆ ಹೆಸರುವಾಸಿಯಾಗಿದ್ದ ನ್ಯಾಯಮೂರ್ತಿ ಮುರಳೀಧರ್ ಅವರನ್ನು ಅಂತಿಮವಾಗಿ ಫೆಬ್ರವರಿ 2020ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ನಿರ್ಧಾರವು ಆ ಸಮಯದಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಏಕೆಂದರೆ, 2020ರ ದೆಹಲಿ ಗಲಭೆಯ ಸಮಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತಿರುವ ರಾಜಕಾರಣಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ನಂತರ ಮುರಳೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು ಎಂದು livelaw.in ವಿವರಿಸಿದೆ. 

ದೆಹಲಿ ಗಲಭೆ ವಿಷಯದಲ್ಲಿ ನ್ಯಾಯಮೂರ್ತಿ ಮುರಳೀಧರ್ ಅವರು ನೀಡಿದ್ದ ದಿಟ್ಟ ಆದೇಶಗಳಿಂದಾಗಿ ಅವರು ಪರಿಣಾಮಗಳನ್ನು ಎದುರಿಸಿರಬಹುದು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಓಕಾ ಇತ್ತೀಚಿಗೆ ಹೇಳಿದ್ದರು ಎಂದು ವರದಿ ಹೇಳಿದೆ.

Courtesy :livelaw.in

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...