Homeಮುಖಪುಟಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

ಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

- Advertisement -
- Advertisement -

ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಡಿಸೆಂಬರ್ 1, 2014 ರಂದು ನ್ಯಾಯಾಧೀಶ ಲೋಯಾ ಅವರು ಮರಣಹೊಂದಿದ್ದರು. ಅವರು ಆ ಸಮಯದಲ್ಲಿ ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣವನ್ನು ನಿರ್ವಹಿಸುತ್ತಿದ್ದು, ಅದರಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಯಾಗಿದ್ದರು.

ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಿದ್ದು ಆ ಜಾಗಕ್ಕೆ ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಇದರಲ್ಲಿ ಶರದ್‌ ಪವಾರ್‌ರವರ ಪಾತ್ರ ಬಹುಮುಖ್ಯವಾಗಿದ್ದು ಅವರು ಮನಸ್ಸು ಮಾಡಿದರೆ ಜಸ್ಟೀಸ್‌ ಲೋಯ ಕೇಸು ರೀಓಪನ್‌ ಆಗುವುದರಲ್ಲಿ ಸಂದೇಹವೇ ಇಲ್ಲ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವುದು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂದು ಹಲವರು ಮಾತಡುತ್ತಿದ್ದಾರೆ.

ಇದನ್ನೂ ಓದಿ: ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ನವೆಂಬರ್ 2017 ರಲ್ಲಿ ’ದಿ ಕಾರವಾನ್’ ಪತ್ರಿಕೆಯು ಈ ಕುರಿತು ವರದಿಯನ್ನು ಪ್ರಕಟಿಸಿದ ನಂತರ ಲೋಯಾ ಅವರ ಸಾವು ಸ್ವಾಭಾವಿಕವಾಗಿದೆಯೇ ಎಂಬ ಪ್ರಶ್ನೆಗಳು ಕೇಳಿಬಂದವು. ಇದರಲ್ಲಿ ಲೋಯಾ ಅವರ ಕುಟುಂಬವು ಅವರ ಸಾವಿನ ಸಂದರ್ಭಗಳು ಅನುಮಾನಾಸ್ಪದವಾಗಿವೆ ಮತ್ತು ಅವರು ಕೆಲವರ ಪರವಾಗಿ ಅನುಕೂಲಕರ ತೀರ್ಪು ನೀಡುವ ಒತ್ತಡದಲ್ಲಿದ್ದರು ಎಂದು ಹೇಳಿದ್ದರು. ಈ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ತಕ್ಷಣದ ಒತ್ತಾಯಗಳು ಕೇಳಿಬಂದಿದ್ದವು.

“ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಕೆಲವು ಪತ್ರಿಕೆಗಳ ಲೇಖನಗಳಲ್ಲಿ ಈ ಬಗ್ಗೆ ಓದಿದ್ದೇನೆ. ಮಹಾರಾಷ್ಟ್ರದ ಜನರಲ್ಲಿ ನ್ಯಾಯಮೂರ್ತಿ ಲೋಯಾ ಅವರ ಸಾವಿನ ಬಗ್ಗೆ ಆಳವಾಗಿ ತನಿಖೆ ನಡೆಸಲು ಚರ್ಚೆಯಿದೆ ಎಂದು ಪವಾರ್ ಹೇಳಿದ್ದಾರೆ.

“ಯಾರಾದರು ಒಬ್ಬರು ಮರು ತನಿಖೆಗೆ ತೀವ್ರ ಬೇಡಿಕೆಯಿದ್ದರೆ, ಅವರು ಈ ಬೇಡಿಕೆಯನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆ, ಅದರಲ್ಲಿನ ಸತ್ಯವೇನು, ಇದರ ಬಗ್ಗೆ ತನಿಖೆ ಮಾಡಬೇಕು. ಅದರಲ್ಲಿ ಏನಾದರೂ ಮಹತ್ವದ್ದು ಸಿಕ್ಕರೆ ಖಂಡಿತ ಪ್ರಕರಣದ ಮರು ತನಿಖೆ ನಡೆಸಬೇಕು. ಇಲ್ಲದಿದ್ದರೆ, ಯಾರ ಮೇಲೂ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಲೋಯಾ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಮನವಿಯನ್ನು ವಜಾಗೊಳಿಸಿ ಉನ್ನತ ನ್ಯಾಯಾಲಯವು 2018 ಏಪ್ರಿಲ್ 19ರಂದು ತೀರ್ಪು ನೀಡಿತ್ತು. ಈ ಕುರಿತು ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ಜುಲೈ 2018 ರಲ್ಲಿ ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...