Homeಮುಖಪುಟಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

ಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

- Advertisement -
- Advertisement -

ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರು ಗುರುವಾರ (ಜ. 25) ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ವರಾಳೆ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

ವರಾಳೆ ಅವರ ಪ್ರಮಾಣ ವಚನ ಸ್ವೀಕಾರದೊಂದಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ಪರಿಶಿಷ್ಟ ಜಾತಿಯ ಮೂವರು ನ್ಯಾಯಾಧೀಶರನ್ನು ಹೊಂದಿದಂತಾಗಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಸಿ.ಟಿ ರವಿಕುಮಾರ್ ಮತ್ತು ವರಾಳೆ ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಲಿತ ಸಮುದಾಯದ ನ್ಯಾಯಮೂರ್ತಿಗಳಾಗಿದ್ದಾರೆ.

ಹೈಕೋರ್ಟ್ ನ್ಯಾಯಾಧೀಶರಲ್ಲಿ ವರಾಳೆ ಅವರು ಪರಿಶಿಷ್ಟ ಜಾತಿಗೆ ಸೇರಿದ ಅತ್ಯಂತ ಹಿರಿಯ ನ್ಯಾಯಾಧೀಶರು ಮತ್ತು ಇಡೀ ದೇಶದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ ಎಂಬ ಅಂಶವನ್ನು ವರಾಳೆ ಅವರ ನೇಮಕದ ವೇಳೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಹೇಳಿತ್ತು.

ನ್ಯಾಯಮೂರ್ತಿ ವರಾಳೆ ಅವರು ಇದುವರೆಗೆ ನೀಡಿದ ತೀರ್ಪುಗಳು ಸಮಾಜದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿದೆ. ಇದುವರೆಗಿನ ವೃತ್ತಿ ಬದುಕನ್ನು ಅವರು ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ಐದು ಮಂದಿ ಸದಸ್ಯರ ಕೊಲಿಜಿಯಂ ಕೊಂಡಾಡಿತ್ತು.

2008ರಲ್ಲಿ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ಪಿ.ಬಿ ವರಾಳೆ ಅವರು ಸಿವಿಲ್, ಕ್ರಿಮಿನಲ್, ಕಾರ್ಮಿಕ ಮತ್ತು ಆಡಳಿತಾತ್ಮಕ ಕಾನೂನು ವಿಷಯಗಳಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಗಳಲ್ಲಿ ಹಾಗೂ ಸಾಂವಿಧಾನಿಕ ವಿಷಯಗಳಲ್ಲಿ ಔರಂಗಾಬಾದ್‌ನಲ್ಲಿರುವ ಹೈಕೋರ್ಟ್ ಪೀಠದಲ್ಲಿ 23 ವರ್ಷಗಳ ಕಾಲ ಅಭ್ಯಾಸ ಮಾಡಿದ್ದರು. ಅಕ್ಟೋಬರ್ 2022ರಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ಕಳೆದ ವರ್ಷ ಡಿಸೆಂಬರ್ 25ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ನಿವೃತ್ತರಾದ ಕಾರಣ ಒಂದು ಹುದ್ದೆ ಖಾಲಿಯಾಗಿತ್ತು. ಆ ಜಾಗಕ್ಕೆ ವರಾಳೆ ಅವರನ್ನು ನೇಮಕ ಮಾಡಲಾಗಿದೆ.

1962ರ ಜೂನ್ 23ರಂದು ಬೆಳಗಾವಿಯ ನಿಪ್ಪಾಣಿಯಲ್ಲಿ ಜನಿಸಿದ್ದ ವರಾಳೆ, ಔರಂಗಾಬಾದ್‌ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠಾವಾಡ ವಿವಿಯಲ್ಲಿ ಕಾನೂನು ಪದವಿ ಪಡೆದಿದ್ದರು. ಆಗಸ್ಟ್ 12 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ಹಲವು ವರ್ಷಗಳ ಕಾಲ ವಕೀಲರಾಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ : ಮೂಲಭೂತ ಹಕ್ಕುಗಳನ್ನು ಪ್ರಶ್ನಿಸಿದ್ದ PIL ಹಿಂಪಡೆಯಲು ಅನುಮತಿ ನೀಡಿದ ಸುಪ್ರೀಂಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

0
ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ. ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು...