Homeಮುಖಪುಟಕೋರ್ಟ್ ಆವರಣದಲ್ಲಿಯೇ ರಾಜೀನಾಮೆ ಘೋಷಿಸಿದ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ರೋಹಿತ್ ಬಿ ದೇವ್

ಕೋರ್ಟ್ ಆವರಣದಲ್ಲಿಯೇ ರಾಜೀನಾಮೆ ಘೋಷಿಸಿದ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ರೋಹಿತ್ ಬಿ ದೇವ್

- Advertisement -
- Advertisement -

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ನ್ಯಾಯಮೂರ್ತಿ ರೋಹಿತ್ ಬಿ ದೇವ್‌ರವರು ನ್ಯಾಯಾಲಯದ ಆವರಣದಲ್ಲಿಯೇ ರಾಜೀನಾಮೆ ಘೋಷಿಸಿರುವ ಪ್ರಕರಣ ಜರುಗಿದೆ.

ತನಗೆ ಯಾರ ವಿರುದ್ಧವೂ ನಿಷ್ಠುರ ಭಾವನೆ ಇಲ್ಲ ಎಂದ ಅವರು, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ. ನಾನು ನನ್ನ ಸ್ವಾಭಿಮಾನಕ್ಕೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹೈಕೋರ್ಟ್‌ನ ನಾಗ್ಪುರ ಪೀಠದ ಹಿರಿಯ ನ್ಯಾಯಾಧೀಶರಾಗಿದ್ದ ಅವರು ಕಳೆದ ವರ್ಷ ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಅವರನ್ನು ಬಿಡುಗಡೆ ತೀರ್ಪು ನೀಡಿದ ಪೀಠದಲ್ಲಿ ಒಬ್ಬರಾಗಿದ್ದರು.

ತೀರಾ ಇತ್ತೀಚೆಗೆ ರೋಹಿತ್ ಬಿ ದೇವ್‌ ನೇತೃತ್ವದ ಪೀಠವು ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಕೆಲಸ ಮಾಡುವ ಗುತ್ತಿಗೆದಾರರ ವಿರುದ್ಧದ ದಂಡನಾತ್ಮಕ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಅಧಿಕಾರ ನೀಡುವ ಸರ್ಕಾರದ ನಿರ್ಣಯದ ವಿರುದ್ಧ ತೀರ್ಪು ನೀಡಿತ್ತು.

2017 ರಲ್ಲಿ ಜಸ್ಟಿಸ್ ದೇವ್ ಅವರನ್ನು ಹೈಕೋರ್ಟ್ ಪೀಠಕ್ಕೆ ಆಯ್ಕೆ ಮಾಡಲಾಗಿತ್ತು. ಅವರು ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ರಾಜ್ಯದ ಅಡ್ವೊಕೇಟ್ ಜನರಲ್ ಆಗಿದ್ದರು. ಅವರು ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಡಿಸೆಂಬರ್ 4, 2025 ರವರೆಗೂ ಅವರ ಸೇವಾವದಿ ಇದ್ದರೂ ಮುಂಚಿತವಾಗಿ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ; ಸುಪ್ರೀಂ ತೀರ್ಪು: ರಾಹುಲ್‌ಗೆ ಮರಳಿ ಸಂಸದ ಸ್ಥಾನ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...