Homeಕರ್ನಾಟಕಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

- Advertisement -
- Advertisement -

‘ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ಒಳ ಮೀಸಲಾತಿಗಾಗಿ ಸಮೀಕ್ಷೆ ನಡೆಸಲು ಮುಂದಾಗಿದ್ದು, ಅದನ್ನು ವೈಜ್ಞಾನಿಕವಾಗಿ ನಡೆಸಬೇಕು. ಸಮುದಾಯ ಯಾವುದೇ ವ್ಯಕ್ತಿ ಈ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ನಾವು ಮನವಿ ಮಾಡುತ್ತಿದ್ದೇವೆ” ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾಗಮೋಹನ್ ದಾಸ್ ಸಮಿತಿಯು ತನ್ನ ಪ್ರಶ್ನಾವಳಿಗಳನ್ನು ಬಹಳ ಎಚ್ಚರಿಕೆ ಹಾಗೂ ಜವಾಬ್ದಾರಿಯಿಂದ ರೂಪಿಸಬೇಕಿದೆ. ಯಾವುದಾರೂ ಒಂದು ಸಮುದಾಯವು ತನ್ನ ಜಾತಿ ಹೆಸರೇಳುವುದರಿಂದ ತಪ್ಪಿಸಿಕೊಂಡರೆ ಅಥವಾ ವ್ಯತ್ಯಾಸವಾದರೆ, ಅವರ ಮೂಲ ಜಾತಿ ಹೆಸರನ್ನು ತಿಳಿದುಕೊಂಡು ನಮೂದಿಸುವ ಹಾಗೆ ಮಾದರಿ ರೂಪಿಸಬೇಕಾಗಿರುವುದು ಬಹಳ ಮುಖ್ಯವಾದ ಅಂಶ. ಸುಪ್ರೀಂಕೋರ್ಟ್‌ ಹೇಳಿರುವಂತೆ, ಅಂತರ್ ಹಿಂದುಳಿದಿರುವಿಕೆಯನ್ನು ಸಾಬೀತು ಮಾಡಿ, ಆ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿದೆ. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಅವರು ಈ ಬಗ್ಗೆ ಹೆಚ್ಚುವರಿ ಎಚ್ಚರಿಕೆ ವಹಿಸಬೇಕು” ಎಂದು ಮನವಿ ಮಾಡಿದರು.

“ಅಲೆಮಾರಿ ಸಮುದಾಯಗಳು ಸಮೀಕ್ಷಾ ತಂಡಕ್ಕೆ ಸಿಗದೆ ಇರುವ ಸಾಧ್ಯತೆಗಳು ಹೆಚ್ಚಿವೆ. ಏಕೆಂದರೆ, ಅವರು ಸದಾ ಸಂಚಾರದಲ್ಲಿರುತ್ತಾರೆ. ಬೆಳಗ್ಗೆ ಒಂದು ಊರಿನಲ್ಲಿ ಇದ್ದರೆ, ಮಧ್ಯಾಹ್ನ ಮತ್ಯಾವುದೋ ಊರಿನಲ್ಲಿ ಇರುತ್ತಾರೆ. ಎಲ್ಲೋ ಮಲಗಿ ಮತ್ತಿನ್ನೆಲ್ಲೋ ಎದ್ದೇಳುತ್ತಾರೆ. ಅಗೋಚರ ಸ್ಥಿತಿಯಲ್ಲಿರುವ ಅಲೆಮಾರಿಗಳನ್ನು ಹೇಗೆ ಹುಡುಕುತ್ತಾರೆ ಎಂಬುದು ಮುಖ್ಯವಾಗುತ್ತದೆ. ಸ್ವಾತಂತ್ರ್ಯ ನಂತರ ಅಲೆಮಾರಿಗಳು ಕನಿಷ್ಠ ಸೌಲಭ್ಯ ಪಡೆದುಕೊಂಡಿದ್ದಾರೆ. ಹಾಗಾಗಿ, ಆ ಸಮುದಾಯಕ್ಕೆ ಸಮರ್ಪಕ ನ್ಯಾಯ ಸಿಗುವಂತೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

“ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಸರ್ಕಾರ ಹಲವಾರು ಕಾರಣಗಳನ್ನು ನೀಡಿ ಮುಂದೂಡಿದೆ. ಯಾವುದೇ ಕಾರಣಕ್ಕೂ ಮತ್ತಷ್ಟ ವಿಳಂಬ ಮಾಡಬಾರದು. ಸರ್ಕಾರ ನಿಗದಿಪಡಿಸಿರುವ 60 ದಿನಗಳ ಕಾಲಾವಧಿಯಲ್ಲಿ ಸಮೀಕ್ಷೆ ಮುಗಿಸಿ ವರದಿ ಕೊಡಬೇಕು. ಸರ್ಕಾರ ಮೀನಾಮೇಷ ಎಣಿಸದೆ ತಕ್ಷಣ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಮಾಡುತ್ತಿದೆ” ಎಂದರು.

40% ಕಮಿಷನ್ ಆರೋಪ ಕುರಿತ ಆಯೋಗದ ವರದಿಯಲ್ಲಿ ಇಬ್ಬರು ಮಾಜಿ ಬಿಜೆಪಿ ಶಾಸಕರ ಹೆಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...