Homeಮುಖಪುಟಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

- Advertisement -
- Advertisement -

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ (ಜ.6) ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಿದ ತಕ್ಷಣ ಅಧಿಕಾರವನ್ನು ತೊರೆಯುವುದಾಗಿ ಹೇಳಿದ್ದಾರೆ.

ಒಟ್ಟಾವಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಪಕ್ಷದ ನಾಯಕ ಹಾಗೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಆಡಳಿತರೂಢ ಲಿಬರಲ್‌ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಉಂಟಾದ ಹಿನ್ನೆಲೆ, ಹುದ್ದೆ ತೊರೆಯುವಂತೆ ಟ್ರುಡೊ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರ ರಾಜೀನಾಮೆ ಘೋಷಿಸಿದ್ದಾರೆ ಎಂದು ವರದಿಯಾಗಿದೆ.

“ನಾನು ಯಾವುದೇ ಹೋರಾಟದಲ್ಲಿ ಸುಲಭವಾಗಿ ಸೋಲಲು ಇಚ್ಚಿಸುವುದಿಲ್ಲ. ವಿಶೇಷವಾಗಿ ನಮ್ಮ ಪಕ್ಷ ಮತ್ತು ದೇಶಕ್ಕೆ ಸಂಬಂಧಿಸಿದ ವಿಷಯಗಳಲ್ಲಿ. ಆದರೂ, ನಾನು ಈ ಕೆಲಸ (ರಾಜೀನಾಮೆ) ಮಾಡುತ್ತೇನೆ. ಏಕೆಂದರೆ, ಕೆನಡಿಯನ್ನರ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವ ದೃಢವಾಗಿರಬೇಕು ಎನ್ನುವುದು ನನಗೆ ಬಹಳ ಮುಖ್ಯ” ಎಂದು ರಾಜೀನಾಮೆ ಘೋಷಣೆ ಬಳಿಕ ಟ್ರುಡೊ ಹೇಳಿದ್ದಾರೆ.

“ನಮ್ಮ ಮಹಾನ್ ದೇಶ ಮತ್ತು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕೆನಡಾದ ಲಿಬರಲ್ ಪಕ್ಷವು ಒಂದು ಪ್ರಮುಖ ಸಂಸ್ಥೆಯಾಗಿದೆ. ಹೊಸ ಪ್ರಧಾನಮಂತ್ರಿ ಮತ್ತು ಲಿಬರಲ್ ಪಕ್ಷದ ನಾಯಕ ಮುಂದಿನ ಚುನಾವಣೆಯಲ್ಲಿ ಅದರ ಮೌಲ್ಯಗಳು ಮತ್ತು ಆದರ್ಶಗಳನ್ನು ಮುಂದುವರೆಸಲಿದ್ದಾರೆ. ಮುಂದಿನ ತಿಂಗಳು ಆ ಪ್ರಕ್ರಿಯೆ ನಡೆಯುವುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ.

ಟ್ರುಡೊ ರಾಜೀನಾಮೆ ಘೋಷಣೆ ಹಿನ್ನೆಲೆ, ಜನವರಿ 27ರಂದು ಪುನರಾರಂಭಗೊಳ್ಳಬೇಕಿದ್ದ ಸಂಸತ್ ಅಧಿವೇಶನವನ್ನು ಮಾರ್ಚ್ 24ರವರೆಗೆ ಮುಂದೂಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಟ್ರುಡೊ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಲಿಬರಲ್ ಪಕ್ಷ ಯಾರನ್ನು ಆಯ್ಕೆ ಮಾಡಲಿದೆ ಎಂದು ತಿಳಿದು ಬಂದಿಲ್ಲ. ಆದರೂ, ಈ ಹುದ್ದೆಗಾಗಿ ಪಕ್ಷದಲ್ಲಿ ಆಂತರಿಕ ಪೈಪೋಟಿ ಏರ್ಪಡುವುದು ಖಚಿತ.

ಮತ್ತೊಂದೆಡೆ, ಸಂಸತ್ ಅಧಿವೇಶನ ಪುನರಾರಂಭಗೊಂಡರೆ ವಿಶ್ವಾಸ ಮತ ಯಾಚನೆ ವೇಳೆ ಲಿಬರಲ್‌ ಪಕ್ಷದ ನಾಯಕತ್ವವನ್ನು ಸೋಲಿಸಿ, ಸರ್ಕಾರ ಉರುಳಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಈ ಮೂಲಕ ರಾಜಕೀಯ ಅಸ್ಥಿರತೆ ಉಂಟಾಗುವ ಸಾಧ್ಯತೆ ಇದೆ.

ನಿಗದಿತ ವೇಳಾಪಟ್ಟಿಯಂತೆ ಕೆನಡಾದಲ್ಲಿ ಮುಂದಿನ ವರ್ಷದ ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ರಾಜಕೀಯ ಅಸ್ಥಿರತೆ ಉಂಟಾದರೆ ಅವಧಿಗೂ ಮುನ್ನವೇ ಚುನಾವಣೆ ನಡೆಯಬಹುದು.

ಹತ್ತು ವರ್ಷಗಳ ಕನ್ಸರ್ವೇಟಿವ್ ಪಕ್ಷದ ಆಡಳಿತದ ನಂತರ, 2015ರಲ್ಲಿ ಟ್ರುಡೊ ಅವರು ಕೆನಡಾ ಪ್ರಧಾನಿ ಹುದ್ದೆಗೇರಿದ್ದರು. ಅದಕ್ಕೂ ಮುನ್ನ 2013ರಲ್ಲಿ ಅವರು ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಪ್ರಧಾನಿಯಾಗಿ ಆಯ್ಕೆಯಾದ ಆರಂಭದಲ್ಲಿ ಜನಮನ್ನಣೆ ಗಳಿಸಿದ್ದ 53 ವರ್ಷದ ಜಸ್ಟಿನ್ ಟ್ರುಡೊ, ಆ ಬಳಿಕ ಆಹಾರ ಮತ್ತು ವಸತಿ ವೆಚ್ಚ ಹೆಚ್ಚಳ ಮತ್ತು ಅನಧಿಕೃತ ವಲಸೆ ಹೆಚ್ಚಳದಂತಹ ವಿಷಯಗಳಲ್ಲಿ ಜನರ ಆಕ್ರೋಶಕ್ಕೆ ಗುರಿಯಾದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳ ಪ್ರಸಿದ್ದಿಯನ್ನು ಪಡೆದಿರುವ ಟ್ರುಡೊ ಅವರು, ಆರಂಭದಲ್ಲಿ ಭಾರತದೊಂದಿಗೆ ಉತ್ತಮ ದ್ವಿಪಕ್ಷೀಯ ಸಂಬಂಧ ಮುಂದುವರೆಸಿದ್ದರು. ಆದರೆ, ಖಲಿಸ್ತಾನಿ ಪ್ರತ್ಯೇಕವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಎರಡು ರಾಷ್ಟ್ರಗಳ ಸಂಬಂಧ ಹಳಸಿದೆ. ಪ್ರಸ್ತುತ, ಭಾರತಕ್ಕೆ ಟ್ರುಡೊ ಶತ್ರುವಿನಂತೆ ಬಿಂಬಿತರಾಗಿದ್ದಾರೆ.

ಇದನ್ನೂ ಓದಿ : ಭಾರತ ಸೇರಿದಂತೆ ಜಾಗತಿಕವಾಗಿ ‘ಎಚ್‌ಎಂಪಿವಿ’ ಈಗಾಗಲೇ ಇದೆ: ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...