Homeಮುಖಪುಟಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

ಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

- Advertisement -
- Advertisement -

ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಳಿಗ್ಗೆ ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ಸಿನ ಪ್ರಭಾವಿ ನಾಯಕರಾದ ಸಿಂಧಿಯಾ ಬಿಜೆಪಿಗೆ ಸೇರುತ್ತಾರೆ ಎಂದು ಉಹಾಪೋಹಗಳನ್ನು ಅವರು ನಿಜಮಾಡಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರದೇಶದ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು 20 ಕಾಂಗ್ರೆಸ್ ಶಾಸಕರು ಮಧ್ಯಪ್ರದೇಶದ ವಿಧಾನಸಭೆಯ ಸ್ಪೀಕರ್‌ಗೆ ರಾಜೀನಾಮೆ ಪತ್ರಗಳನ್ನು ಸಲ್ಲಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಟಕೀಯ ಬದಲಾವಣೆ ಪ್ರಾರಂಭವಾದಾಗಿನಿಂದ ಸಿಂಧಿಯಾ ಅವರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸೋಮವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು. “ನಾವು ಸಿಂಧಿಯಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆವು ಆದರೆ ಅವರಿಗೆ ಹಂದಿ ಜ್ವರವಿದೆ ಎಂದು ಹೇಳಲಾಗುತ್ತಿದೆ, ಆದ್ದರಿಂದ ಅವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ” ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಶಕ್ತಿ ಪ್ರದರ್ಶನಕ್ಕಾಗಿ ತನ್ನ ಶಾಸಕರನ್ನು ಭೋಪಾಲ್‌ಗೆ ಕರೆಸಿಕೊಂಡಿದ್ದ ಬಿಜೆಪಿ ಸಂಜೆ 6 ಗಂಟೆಗೆ ನಗರದ ಹೋಟೆಲ್‌ವೊಂದರಲ್ಲಿ ಸಭೆ ನಡೆಸಲಿದೆ.

ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್ ಮತ್ತು ಕರಣ್ ಸಿಂಗ್ ಅವರು ಪಕ್ಷದ ಬಿಕ್ಕಟ್ಟು ಶಮನ ಮಾಡಲು ಶ್ರಮಿಸುತ್ತಿದ್ದಾರೆ. “ನಾಯಕರು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಸಮರ್ಥರಾಗಿದ್ದಾರೆ ಮಧ್ಯಪ್ರದೇಶದ ಬಿಕ್ಕಟ್ಟು ಶೀಘ್ರದಲ್ಲೇ ಕೊನೆಗೊಳ್ಳುತ್ತದೆ” ಎಂದು ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದ ಸಿಂಧಿಯಾ ಕೆಲವು ಸಮಯದಿಂದ ಹಿರಿಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಹಿರಂಗವಾಗಿ ಬೆಂಬಲಿಸಿದ್ದರು.

230 ಸದಸ್ಯರಿರುವ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಸರ್ಕಾರವು ಒಟ್ಟು 120 ಶಾಸಕರ ಬೆಂಬಲವನ್ನು ಹೊಂದಿದೆ. ಇದರಲ್ಲಿ 114 ಮಂದಿ ಕಾಂಗ್ರೆಸ್ ಮೂಲದವರಾದರೆ, ಇಬ್ಬರು ಬಿಎಸ್ಪಿ, ಒಬ್ಬ ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರಾಗಿದ್ದಾರೆ. ಬಿಜೆಪಿಯಲ್ಲಿ 107 ಶಾಸಕರು ಇದ್ದಾರೆ ಹಾಗು ಎರಡು ಸ್ಥಾನಗಳು ಖಾಲಿ ಇವೆ. ಕಾಗ್ರೇಸ್ ನ 17-20 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಕಮಲ್ ನಾಥ್ ಸರಕಾರವನ್ನು ಉರುಳಿಸಲು 10 ಶಾಸಕರು ಕಳೆದವಾರ ದೆಹಲಿಯ ರೆಸಾರ್ಟ್ ಒಂದರಲ್ಲಿ ಬೀಡು ಬಿಟ್ಟಿದ್ದರು. ಅದರಲ್ಲಿ ದಿಗ್ವಿಜಯ ಸಿಂಗ್ ಆರು ಜನರನ್ನು ಮರಳಿ ಕರೆಸುವಲ್ಲಿ ಸಫಲಾಗಿದ್ದರು. ಆದರೆ ಉಳಿದಿದ್ದ ನಾಲ್ವರಲ್ಲಿ ಒಬ್ಬರಾದ ಹರ್ದೀಪ್ ಡಾಂಗ್ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಕಳುಹಿಸಿದ ನಂತರ ಕಮಲ್ ನಾಥ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...