ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಸಂಜೆ 6 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.
ಅಮಿತ್ ಶಾ ಮತ್ತು ಪಿಎಂ ಮೋದಿ ಅವರೊಂದಿಗಿನ ಜ್ಯೋತಿರಾದಿತ್ಯ ಸಿಂಧಿಯಾ ಸಭೆಯಲ್ಲಿ ಏನಾಯಿತು ಎಂಬುದರ ಕುರಿತು ಯಾವುದೇ ಮಾಹಿತಿಗಳಿಲ್ಲ ಎನ್ನಲಾಗಿದೆ.
ಮುಂಬರುವ ಮಾರ್ಚ್ 26ರ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಇಂದು ಸಂಜೆ ಸಭೆ ಸೇರಬೇಕಿತ್ತು.
“ಅವರು ಔಪಚಾರಿಕವಾಗಿ ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಮತ್ತು ಅವರ ಹೆಸರನ್ನು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಸ್ತಾಪಿಸಬಹುದು” ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ರಾಜ್ಯದಿಂದ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ.
19 ಮಧ್ಯಪ್ರದೇಶದ ಶಾಸಕರು ತಮ್ಮ ರಾಜೀನಾಮೆಯನ್ನು ಈಗಾಗಲೇ ರಾಜ್ ಭವನಕ್ಕೆ ಕಳುಹಿಸಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 114 ಶಾಸಕರನ್ನು ಹೊಂದಿದ್ದು, 230 ಸ್ಥಾನದ ವಿಧಾನ ಸಭೆಯಲ್ಲಿ ಎರಡು ಸ್ಥಾನ ಖಾಲಿಯಿದೆ.


