Homeಚಳವಳಿದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

ದಲಿತ ಚಳವಳಿಯ ಬಕಾಲ ಕವಿ ಕೆ.ಬಿ.ಸಿದ್ದಯ್ಯ ಇನ್ನಿಲ್ಲ..

- Advertisement -
- Advertisement -

ಬಕಾಲ ಕವಿಯೆಂದೇ ಪ್ರಸಿದ್ದಿಯಾಗಿದ್ದ ಕೆ.ಬಿ.ಸಿದ್ದಯ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ವಿಶಿಷ್ಟ ಬರಹಗಳಿಂದಲೇ ಅವರು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿದ್ದರು. ಅವರು ಕಡಿಮೆ ಬರೆದರೂ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಖಂಡಕಾವ್ಯವನ್ನೇ ವಿಶಿಷ್ಟವಾಗಿ ಆಯ್ಕೆ ಮಾಡಿಕೊಂಡು ದೇಶೀಯತೆಯ ಮೂಲಕ ವಿಶ್ವವನ್ನು ಕಾಣಲು ಬಯಸಿದ್ದರು. ಮೊದಲಿಗೆ ಕಾವ್ಯದಲ್ಲಿ ಆಧ್ಯಾತ್ಮವನ್ನು ತಂದ ಹೆಗ್ಗಳಿಕೆ ಕಬಿ ಅವರದ್ದು.

ಇತ್ತೀಚೆಗೆ ನಡೆದ ಅಪಘಾತದಿಂದ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 18ರಂದು ಬೆಳಗಿನಜಾವ 4 ಗಂಟೆಗೆ ನಿಧನರಾದರೆಂಬ ಸುದ್ಧಿ ಸಾಹಿತ್ಯ ಮತ್ತು ಹೋರಾಟದ ವಲಯದಲ್ಲಿ ದಿಗ್ಬ್ರಮೆ ಮತ್ತು ದುಃಖವನ್ನು ಮೂಡಿಸಿದೆ.

ಕೆ.ಬಿ.ಸಿದ್ದಯ್ಯ ಭಾಷಣಕ್ಕೆ ನಿಂತರೆ ಅಲ್ಲೇನಾದರೂ ಹೊಸ ವಿಷಯ ಪ್ರಸ್ತಾಪವಾಗುತ್ತಿತ್ತು. ಅದು ಗಂಭೀರ ವಾಗ್ವಾದಕ್ಕೂ ಕಾರಣವಾಗುತ್ತಿತ್ತು. ಹಾಗಿದ್ದರು ಕೆಬಿ.

ದಕ್ಲಕಥಾದೇವಿ, ಬಕಾಲ, ಅನಾತ್ಮ ಗಲ್ಲೇಬಾನೆ ಈ ನಾಲ್ಕು ಖಂಡಕಾವ್ಯಗಳಾದರೆ, ಕತ್ತಲೊಡನೆ ಮಾತುಕತೆ, ಬುದ್ದನ ನಾಲ್ಕು ಸತ್ಯಗಳು ಗದ್ಯಬರಹಗಳು. ದಲಿತ ಚಳವಳಿಯೊಂದಿಗೆ ಮುನ್ನಡೆದು ಬಂದಿದ್ದ ಕೆಬಿ ರಾಜ್ಯದ ಉದ್ದಕ್ಕೂ ಸಾಹಿತ್ಯ ವಲಯದಲ್ಲಿ ಪ್ರಭಾವ ಬೀರಿದ್ದರು. ಕಿರಿದರೊಳ್ ಪಿರಿದರ್ಥ ಎಂಬಂತೆ ಕಡಿಮೆ ಕೃತಿಗಳನ್ನು ಬರೆದರೂ ಅವೆಲ್ಲವೂ ಗಮನ ಸೆಳೆದವು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಕೆಯಲ್ಲಿ ಬೈಲಪ್ಪ ಮತ್ತು ಅಂತೂರಮ್ಮನವರ ಪುತ್ರರಾಗಿ 1954 ಮಾರ್ಚ್ 2 ರಂದು ಜನಿಸಿದ ಕೆ.ಬಿ.ಸಿದ್ದಯ್ಯ ಅಲ್ಲಿಂದ ತುಮಕೂರಿಗೆ ಬಂದು ನೆಲೆಸಿದರು. ಮೈಸೂರು ವಿಶ್ವವಿದ್ಯಾಲಯಲ್ಲಿ ಇಂಗ್ಲೀಷ್ ಎಂ.ಎ. ಪದವಿ ಪಡೆದ ಅವರು ನಂತರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ತುಮಕೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭವೇ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರು ಒಳಮೀಸಲಾತಿ ಪರ ಇಲ್ಲ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಪರಮೇಶ್ವರ್ ವಿರುದ್ಧ ಮತ ಚಲಾಯಿಸುವಂತೆ ಹೇಳಿಕೆ ನೀಡಿ ವಿವಾದ ಮೇಲೆಳೆದುಕೊಂಡಿದ್ದರು.

ಸಾಹಿತಿ ಕೆ.ಬಿ.ಸಿದ್ದಯ್ಯ ಅವರು ತಮ್ಮ ಮನೆಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯನ್ನು ಕರೆಸಿಕೊಂಡು ಟೀಕೆಗೂ ಗುರಿಯಾಗಿದ್ದರು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇವನೂರು ಮಹಾದೇವ ಅವರನ್ನು ತೀವ್ರ ಟೀಕೆಗೆ ಗುರಿಮಾಡಿದ್ದ ಕೆಬಿ ಸಂಘರ್ಷಕ್ಕೆ ಕಾರಣರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಸದಸ್ಯರಾಗಿದ್ದ ಕೆಬಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರು. ಬಳಿಕ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಇದು ಕೂಡ ಚರ್ಚೆಗೆ ಅನುವು ಮಾಡಿಕೊಟ್ಟಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಶಿಷ್ಯರಾಗಿದ್ದ ಕೆ.ಬಿ.ಸಿದ್ದಯ್ಯ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಕೆಬಿ ಮಣಿಪಾಲ್ ಆಸ್ಪತ್ರೆ ಸೇರಿದಾಗ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಿದ್ದರಾಮಯ್ಯ ಅವರ ಮೇಲೆ ಗಾಢವಾದ ಪ್ರೀತಿ ಇಟ್ಟುಕೊಂಡಿದ್ದ ಕೆಬಿ ಮೊದಲ ಬಾರಿಗೆ ದರೈಸ್ತ್ರೀ(ದಲಿತ, ರೈತ, ಸ್ತ್ರೀ) ಪ್ರಶಸ್ತಿ ನೀಡಿ ಗೌರವಿಸಿದರು. ಆ ಮೂಲಕ ಕನ್ನಡ ಶಬ್ದಕೋಶಕ್ಕೆ ದರೈಸ್ತ್ರೀ ಎಂಬ ಹೊಸ ಪದವನ್ನು ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಯಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರನ್ನು ತುಮಕೂರಿಗೆ ಕರೆಸಿ ಉಪನ್ಯಾಸ ಕೊಡಿಸಿದ್ದರು. ತಮ್ಮದೇ ಪುಸ್ತಕ ಬಿಡುಗಡೆಗೂ ಅವರನ್ನು ಕರೆಸಿದ್ದರು. ದಿವಂಗತ ಕಿ.ರಂ. ನಾಗರಾಜ್ ಅವರು ಕೂಡ ಅನಾತ್ಮ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಕೆಬಿ ಕಾವ್ಯದ ಆಳಅಗಲವನ್ನು ವಿಮರ್ಶಿಸಿದ್ದರು. ಬುದ್ಧ ಮತ್ತು ಅಲ್ಲಮನ ಕುರಿತು ಗಂಭೀರವಾಗಿ ಓದಿಕೊಂಡಿದ್ದರು. ಅಲ್ಲಮನ ವಚನಗಳನ್ನು ಸಭಿಕರಿಗೆ ಮನವರಿಕೆಯಾಗುವಂತೆ ವಿವರಿಸುತ್ತಿದ್ದರು. ಒಳಮೀಸಲಾತಿಯ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಆಪ್ತವಾಗಿದ್ದ ಕೆಬಿ ಇಲ್ಲ ಎಂಬ ಸುದ್ಧಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಅವರಿಲ್ಲದೆ ಸಾಹಿತ್ಯ ಲೋಕಕ್ಕೆ ನಷ್ಟವಂತೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...