Homeಮುಖಪುಟಅಮಾನತು ಬೆನ್ನಲ್ಲೇ ಬಿಆರ್‌ಎಸ್‌ ತೊರೆದ ಕೆ. ಕವಿತಾ: ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಾಧ್ಯತೆ

ಅಮಾನತು ಬೆನ್ನಲ್ಲೇ ಬಿಆರ್‌ಎಸ್‌ ತೊರೆದ ಕೆ. ಕವಿತಾ: ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಾಧ್ಯತೆ

- Advertisement -
- Advertisement -

ತೆಲಂಗಾಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದಿಂದ, ಅದರ ಸ್ಥಾಪಕ ಕೆ. ಚಂದ್ರಶೇಖರ್ ರಾವ್ ಅವರ ಮಗಳನ್ನು ಅಮಾನತುಗೊಳಿಸಲಾಗಿದೆ. ಅಪ್ಪ ಸ್ಥಾಪಿಸಿದ, ಸಹೋದರ ಅಧ್ಯಕ್ಷನಾಗಿರುವ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಕೆ.ಕವಿತಾ ಅಮಾನತುಗೊಂಡಿದ್ದಾರೆ.

ಅಮಾನತುಗೊಂಡ ಬೆನ್ನಲ್ಲೇ, ಬುಧವಾರ (ಸೆ.3) ಹೈದಾರಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕವಿತಾ ಅವರು, ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಬಿಆರ್‌ಎಸ್‌ 2014ರಿಂದ 2024ರವರೆಗೆ 10 ವರ್ಷಗಳ ಕಾಲ ತೆಲಂಗಾಣದಲ್ಲಿ ಆಡಳಿತ ನಡೆಸಿತ್ತು. ತೆಲಂಗಾಣ ಪ್ರತ್ಯೇಕ ರಾಜ್ಯದ ಹೋರಾಟದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ ಬಿಆರ್‌ಎಸ್‌. ಆರಂಭದಲ್ಲಿ ಟಿಆರ್‌ಎಸ್‌ (ತೆಲಂಗಾಣ ರಾಷ್ಟ್ರ ಸಮಿತಿ) ಎಂದಿದ್ದ ಪಕ್ಷದ ಹೆಸರನ್ನು, 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಆರ್‌ಎಸ್‌ ಎಂದು ಬದಲಾಯಿಸಲಾಯಿತು. ಬಿಆರ್‌ಎಸ್‌ ಪಕ್ಷದ ಸ್ಥಾಪಕ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) 10 ವರ್ಷದ ತೆಲಂಗಾಣದ ಮುಖ್ಯಮಂತ್ರಿ ಆಗಿದ್ದರು. ಅವರ ಮಗ ಕೆ.ಟಿ ರಾಮರಾವ್ (ಕೆಟಿಆರ್‌) ಪೌರಾಡಳಿತ ಮತ್ತು ಐಟಿಬಿಟಿ ಸಚಿವರಾಗಿದ್ದರು. ಪ್ರಸ್ತುತ ಕೆಟಿಆರ್ ಬಿಆರ್‌ಎಸ್‌ ಪಕ್ಷದ ತೆಲಂಗಾಣ ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿದ್ದಾರೆ. ಕೆಸಿಆರ್‌ ಪಕ್ಷದ ರಾಷ್ಟ್ರೀಯ ನಾಯಕ ಎನಿಸಿಕೊಂಡಿದ್ದಾರೆ.

ಕವಿತಾ ಅವರು ಬಿಆರ್‌ಎಸ್‌ ತೊರೆದ ಬಳಿಕ ತಮ್ಮದೇ ಹೊಸ ಪಕ್ಷ ಕಟ್ಟುತ್ತಾರೆಯೇ ಎಂದು ಸ್ಪಷ್ಟವಾಗಿಲ್ಲ. ಆದರೆ, “ತಾನು ಬೇರೆ ಪಕ್ಷಕ್ಕೆ ಸೇರುವ ಬಗ್ಗೆ ಯೋಚನೆ ಮಾಡುವುದಿಲ್ಲ. ನನ್ನ ಜೀವನದ ಕಳೆದ 20 ವರ್ಷಗಳಿಂದ ನಾನು ತೆಲಂಗಾಣ ಮತ್ತು ಬಿಆರ್‌ಎಸ್‌ಗಾಗಿ ಕೆಲಸ ಮಾಡಿದ್ದೇನೆ. ನಾನು ತೆಲಂಗಾಣ ಆಂದೋಲನಕ್ಕೆ ಬಂದಾಗ 27 ವರ್ಷ ವಯಸ್ಸಾಗಿತ್ತು, ಈಗ 47 ವರ್ಷ. ನಾನು ನನ್ನ ಜೀವನದ ಬಹುಭಾಗವನ್ನು ತೆಲಂಗಾಣ ಮತ್ತು ಬಿಆರ್‌ಎಸ್‌ಗಾಗಿ ನೀಡಿದ್ದೇನೆ” ಎಂದು ಕವಿತಾ ಹೇಳಿದ್ದಾರೆ.

“ಕಲ್ವಕುಂಟ್ಲ ಕುಟುಂಬ (ಕೆಸಿಆರ್‌ ಕುಟುಂಬ) ಮತ್ತು ಬಿಆರ್‌ಎಸ್ ಅನ್ನು ಒಡೆಯಲು ಪಿತೂರಿ ನಡೆಯುತ್ತಿದೆ” ಎಂದ ಕವಿತಾ, “ನಿಮ್ಮನ್ನು ಯಾರು ಸುತ್ತುವರಿದಿದ್ದಾರೆ ಎಂದು ಪರಿಶೀಲಿಸಿಕೊಳ್ಳಿ” ಎಂದು ತಂದೆ ಕೆಸಿಆರ್ ಅವರಿಗೆ ಮನವಿ ಮಾಡಿದ್ದಾರೆ. ಪಕ್ಷದಿಂದ ತನ್ನನ್ನು ಹೊರಹಾಕುವಲ್ಲಿ ತನ್ನ ಸೋದರಸಂಬಂಧಿಗಳು ಮತ್ತು ಬಿಆರ್‌ಎಸ್ ನಾಯಕರಾದ ಟಿ. ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಪಾತ್ರವಿದೆ ಎಂದು ಆರೋಪಿಸಿದ್ದಾರೆ.

ಈ ಇಬ್ಬರ ವಿರುದ್ದ ದೊಡ್ಡ ಮಟ್ಟದ ಭ್ರಷ್ಟಾಚಾರದ ಆರೋಪ ಹೊರಿಸಿದ ಕವಿತಾ, “ಸುವರ್ಣ ತೆಲಂಗಾಣ ಎಂದರೆ ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಅವರ ಮನೆಗಳಿಗೆ ಚಿನ್ನ ತಲುಪುವುದು ಎಂದಲ್ಲ” ಎಂದು ಕಿಡಿಕಾರಿದ್ದಾರೆ.

ಬಿಆರ್‌ಎಸ್‌ ಸರ್ಕಾರದಲ್ಲಿ ಹರೀಶ್ ರಾವ್ ತೆಲಂಗಾಣದ ನೀರಾವರಿ ಸಚಿವರಾಗಿದ್ದರು. ಸಂತೋಷ್ ಕುಮಾರ್ ಪಕ್ಷದ ಮಾಜಿ ರಾಜ್ಯಸಭಾ ಸಂಸದರಾಗಿದ್ದಾರೆ.

“ಇಂದು ನನ್ನನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ. ನಾಳೆ ಕೆಸಿಆರ್ ಸೇರಿದಂತೆ ಯಾರಿಗೂ ಬೇಕಾದರು ಇದೇ ಪರಿಸ್ಥಿತಿ ಎದುರಾಗಬಹುದು. ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲದಿದ್ದರೆ ಹರೀಶ್ ರಾವ್ ಸಂಪತ್ತು ಸಂಗ್ರಹಿಸಿದ್ದು ಹೇಗೆ? ಹರೀಶ್ ರಾವ್ ಭ್ರಷ್ಟಾಚಾರದ ಹಣವನ್ನು ತಮ್ಮ ಚುನಾವಣೆಗೆ ಬಳಸಿಕೊಂಡಿದ್ದಾರೆ” ಎಂದು ಕವಿತಾ ಗುಡುಗಿದ್ದಾರೆ.

ತನ್ನ ಸಹೋದರ ಹಾಗೂ ಬಿಆರ್‌ಎಸ್‌ನ ಕಾರ್ಯಾಧ್ಯಕ್ಷ ಕೆ.ಟಿ ರಾಮರಾವ್ ಅವರು ಪಕ್ಷದಲ್ಲಿನ ತನ್ನ ಸಮಸ್ಯೆಗಳೇನು ಎಂದು ಕೇಳಿಲ್ಲ. ಅವರ ತಂದೆ ಕೂಡ ಬಿಆರ್‌ಎಸ್‌ನಿಂದ ಮುಂದಿನ ಬಾರಿ ಉಚ್ಚಾಟನೆಗೆ ಒಳಗಾಗಬಹುದು ಎಂದು ಕವಿತಾ, “ಪಕ್ಷದ ಪ್ರಧಾನ ಕಚೇರಿಯಾದ ತೆಲಂಗಾಣ ಭವನದಲ್ಲಿ ಕುಳಿತು, ಪಕ್ಷದ ಮಹಿಳಾ ನಾಯಕಿಯಾಗಿ, ಪಕ್ಷದಲ್ಲಿ ನನ್ನನ್ನು ಗುರಿಯಾಗಿಸಿಕೊಂಡಿರುವ ದುಷ್ಟ ಶಕ್ತಿಗಳಿವೆ ಎಂದು ನಾನು ಹೇಳಿದ್ದೆ. ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಟಿಆರ್‌ ಈ ಬಗ್ಗೆ ನನಗೆ ಕರೆ ಮಾಡಿ ವಿಚಾರಿಸಬೇಕಿತ್ತು. ಅವರು ಏಕೆ ನನ್ನನ್ನು ಸಂಪರ್ಕಿಸಿಲ್ಲ? ನನ್ನನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ನಾನು ಮೊದಲ ಬಾರಿಗೆ ವಿಷಯ ಪ್ರಸ್ತಾಪಿಸಿ 103 ದಿನಗಳೇ ಕಳೆದಿವೆ ಆದರೂ ಅವರು ಒಂದು ಮಾತು ಏಕೆ ಕೇಳಿಲ್ಲ?” ಎಂದು ಕವಿತಾ ಪ್ರಶ್ನೆ ಹಾಕಿದ್ದಾರೆ.

“ಕೆಸಿಆರ್ ಮತ್ತು ಕೆಟಿಆರ್ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಎ. ರೇವಂತ್ ರೆಡ್ಡಿ ಅವರೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸ್ಥಾಪಿತ ಹಿತಾಸಕ್ತಿಗಳು ಸುತ್ತುವರೆದಿವೆ. ಕೆಟಿಆರ್ ಮತ್ತು ಕೆಸಿಆರ್ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗುತ್ತಿದ್ದರೂ, ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ಕಾಂಗ್ರೆಸ್ ಬೆಂಬಲವನ್ನು ಪಡೆಯುತ್ತಿದ್ದಾರೆ. ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ ಅವರ ವಿಷಯಕ್ಕೆ ಬಂದಾಗ ಮೌನವಾಗುತ್ತಿದೆ” ಎಂದು ಕವಿತಾ ಆರೋಪಿಸಿದ್ದಾರೆ.

ತಮ್ಮ ಎನ್‌ಜಿಒ ಮತ್ತು ಸಾಂಸ್ಕೃತಿಕ ಸಂಘಟನೆಯಾದ ತೆಲಂಗಾಣ ಜಾಗೃತಿಯ ಕಚೇರಿಯಲ್ಲಿ ಬೆಂಬಲಿಗರ ಗುಂಪುಗಳ ನಡುವೆ ಕುಳಿತು ಮಾತನಾಡಿದ ಕವಿತಾ, “ನಾನು ಪಕ್ಷಕ್ಕಾಗಿ ನಿರಂತರವಾಗಿ ಕೆಲಸ ಮಾಡಿದ್ದೇನೆ. ತಳಮಟ್ಟದಲ್ಲಿ ಪಕ್ಷವನ್ನು ಕಟ್ಟಿದ್ದೇನೆ. ಗುರುಕುಲ ಶಾಲೆಗಳು, ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಮಹಿಳೆಯರು ಮತ್ತು ಹಲವಾರು ದುರ್ಬಲ ವರ್ಗಗಳಿಗಾಗಿ ಕೆಲಸ ಮಾಡಿದ್ದೇನೆ. ನನ್ನ ಈ ಕೆಲಸಗಳಲ್ಲಿ ಪಕ್ಷ ವಿರೋಧಿ ಯಾವುದು?” ಎಂದು ಕವಿತಾ ಕೇಳಿದ್ದಾರೆ.

ಮಂಗಳವಾರ (ಸೆ.2) ಕವಿತಾ ಅವರಿಗೆ ನೀಡಲಾದ ಬಿಆರ್‌ಎಸ್‌ನ ಶಿಸ್ತು ಸಮಿತಿಯ ನೋಟಿಸ್‌ನಲ್ಲಿ, ಅವರ ಮೇಲೆ ‘ಪಕ್ಷ ವಿರೋಧಿ ಚಟುವಟಿಕೆಗಳ’ ಆರೋಪ ಹೊರಿಸಲಾಗಿತ್ತು. ತನ್ನ ತಂದೆ ಮಾರ್ಗದರ್ಶನ ನೀಡಿದಂತೆಯೇ ತಾನು ‘ಜನರ ತೆಲಂಗಾಣ’ ಮತ್ತು ‘ಸುವರ್ಣ ತೆಲಂಗಾಣ’ಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದಿರುವ ಕವಿತಾ, “ಇವುಗಳು ಪಕ್ಷ ವಿರೋಧಿ ಚಟುವಟಿಕೆಗಳಾಗಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ಭ್ರಷ್ಟಾಚಾರದ ಸಿಬಿಐ ತನಿಖೆ

ಕಾಳೇಶ್ವರಂ ಏತ ನೀರಾವರಿ ಯೋಜನೆ (Kaleshwaram Lift Irrigation Project – KLIP) ತೆಲಂಗಾಣದ ಅತಿದೊಡ್ಡ ಮತ್ತು ದುಬಾರಿ ಏತ ನೀರಾವರಿ ಯೋಜನೆಯಾಗಿದೆ. ಇದನ್ನು ಗೋದಾವರಿ ನದಿಯ ಮೇಲೆ ನಿರ್ಮಿಸಲಾಗಿದೆ. ಈ ಯೋಜನೆಯ ಉದ್ದೇಶ ತೆಲಂಗಾಣದ ವಿವಿಧ ಜಿಲ್ಲೆಗಳಿಗೆ ನೀರಾವರಿ, ಕುಡಿಯುವ ನೀರು ಮತ್ತು ಕೈಗಾರಿಕಾ ಬಳಕೆಗೆ ನೀರು ಒದಗಿಸುವುದಾಗಿದೆ. ಆದರೆ, ಈ ಯೋಜನೆಯು ತಾಂತ್ರಿಕ ದೋಷಗಳು, ಆರ್ಥಿಕ ಅಕ್ರಮಗಳು ಮತ್ತು ರಾಜಕೀಯ ವಿವಾದಗಳಿಂದಾಗಿ ಗಮನ ಸೆಳೆದಿದೆ.

ಬಿಆರ್‌ಎಸ್‌ ಸರ್ಕಾರ ಮಹತ್ವಕಾಂಕ್ಷಿ ಕಾಳೇಶ್ವರಂ ಏತ ನೀರಾವರಿಯ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಅದರಲ್ಲೂ, ಕವಿತಾ ಅವರು ತನ್ನ ವಿರುದ್ದ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿರುವ ಮಾಜಿ ನೀರಾವರಿ ಸಚಿವ ಹರೀಶ್ ರಾವ್ ವಿರುದ್ದ ಆರೋಪಗಳನ್ನು ಹೊರಿಸಲಾಗಿದೆ.

ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣದ ಹಾಲಿ ಸರ್ಕಾರವು ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ.

ಆಗಸ್ಟ್ 31, 2025 ರಂದು ತೆಲಂಗಾಣ ವಿಧಾನಸಭೆಯಲ್ಲಿ 10 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಚರ್ಚೆಯ ನಂತರ, ಸೆಪ್ಟೆಂಬರ್ 1, 2025 ರಂದು ಸಿಬಿಐ ತನಿಖೆಗೆ ಆದೇಶ ಹೊರಡಿಸಲಾಗಿದೆ. ಜುಲೈ 31, 2025 ರಂದು ನ್ಯಾಯಮೂರ್ತಿ ಪಿ.ಸಿ. ಘೋಷ್ ಆಯೋಗ ಸಲ್ಲಿಸಿದ ವರದಿಗಳನ್ನು ಆಧರಿಸಿ ತನಿಖೆಗೆ ಆದೇಶ ಮಾಡಲಾಗಿದೆ. ಆಗಸ್ಟ್ 31, 2025ರಂದು ವಿಧಾನಸಭೆಯಲ್ಲಿ ವರದಿಯನ್ನು ಮಂಡಿಸಲಾಗಿತ್ತು.

ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ನೇತೃತ್ವದ ಆಯೋಗವು, ಮೇಡಿಗಡ್ಡ, ಅಣ್ಣಾರಾಮ್ ಮತ್ತು ಸುಂಡಿಲ್ಲಾ ಬ್ಯಾರೇಜ್‌ಗಳ ನಿರ್ಮಾಣದಲ್ಲಿ ನಿರ್ಲಕ್ಷ್ಯ, ಆರ್ಥಿಕ ಅಕ್ರಮಗಳು ಮತ್ತು ಕಳಪೆ ಯೋಜನೆ ಸೇರಿದಂತೆ ಗಮನಾರ್ಹ ಲೋಪಗಳನ್ನು ಗುರುತಿಸಿದೆ. ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ (NDSA) ವಿನ್ಯಾಸ ದೋಷಗಳು, ಕಳಪೆ ಗುಣಮಟ್ಟದ ನಿಯಂತ್ರಣ ಮತ್ತು ನಿರ್ಮಾಣ ನ್ಯೂನತೆಗಳನ್ನು ವರದಿ ಮಾಡಿದೆ, ವಿಶೇಷವಾಗಿ ಅಕ್ಟೋಬರ್ 21, 2023 ರಂದು ಮೇಡಿಗಡ್ಡ ಬ್ಯಾರೇಜ್‌ನಲ್ಲಿ ಆರು ಕಂಬಗಳು ಮುಳುಗಿದ್ದ ವಿಷಯವನ್ನು ಉಲ್ಲೇಖಿಸಿದೆ ಎಂದು ವರದಿಯಾಗಿದೆ.

ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಕವಿತಾ ಬಂಧನ

ದೆಹಲಿ ಮದ್ಯ ನೀತಿ ಅಥವಾ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಹೊಂದಿಕೊಂಡಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೆ. ಕವಿತಾ ಅವರನ್ನು ಮಾರ್ಚ್ 15, 2024ರಂದು ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಅವರ ನಿವಾಸದಿಂದ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ನಂತರ, ದೆಹಲಿ ಮದ್ಯ ನೀತಿ ಹಗರಣಕ್ಕೆ ಹೊಂದಿಕೊಂಡಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಕೆ. ಕವಿತಾ ಅವರನ್ನು ತಿಹಾರ್ ಜೈಲಿನಿಂದ ಬಂಧಿಸಿತ್ತು. ಇಡಿ ಬಂಧನದ ನಂತರ  ನ್ಯಾಯಾಂಗ ಬಂಧನದಲ್ಲಿದ್ದ ಕವಿತಾ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು.

ಸರಿಸುಮಾರು ಐದು ತಿಂಗಳುಗಳ ಕಾಲ ಬಂಧನದಲ್ಲಿದ್ದ ನಂತರ, ಆಗಸ್ಟ್ 27, 2024 ರಂದು ಸುಪ್ರೀಂ ಕೋರ್ಟ್ ಕವಿತಾ ಅವರಿಗೆ ಜಾಮೀನು ನೀಡಿತ್ತು.

ಎಐಎಡಿಎಂಕೆ ನಾಯಕರ ನಡುವಿನ ಮಾತುಕತೆ ವಿಫಲ; ಎನ್‌ಡಿಎ ತೊರೆಯುವುದಾಗಿ ಘೋಷಿಸಿದ ಟಿಟಿವಿ ದಿನಕರನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...