Homeಮುಖಪುಟತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

- Advertisement -
- Advertisement -

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ ಕುರಿತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಮಾಹಿತಿ ಮೂಲಗಳು ಸೋಮವಾರ ತಿಳಿಸಿವೆ. ಕವಿತಾ ತೆಲಂಗಾಣ ಜಾಗೃತಿ, ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ ಕವಿತಾ ಮಾತುಕತೆ ನಡೆಸಿದ್ದಾರೆ. ಹೊಸ ಪಕ್ಷ ಸ್ಥಾಪನೆ, ಅದಕ್ಕೆ ತೆಲಂಗಾಣದಲ್ಲಿ ರಾಜಕೀಯ ನೆಲೆ, ಮತ್ತಿತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಆರ್‌ಎಸ್ ಸಂಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ರಾವ್ ಅವರ ಪುತ್ರಿ ಕವಿತಾ ಅವರನ್ನು ಸೆಪ್ಟೆಂಬರ್, 2025 ರಲ್ಲಿ ಪಕ್ಷದಿಂದ ಉಚ್ಛಾಟಿಸಲಾಗಿತ್ತು.

ಆಗಿನಿಂದಲೂ ತೆಲಂಗಾಣ ಜಾಗೃತಿ , ಸಾಂಸ್ಕೃತಿಕ ಸಂಘಟನೆಯಡಿ ಸಾರ್ವಜನಿಕ ಸಮಸ್ಯೆಗಳ ಮೇಲೆ ಕವಿತಾ ಗಮನ ಕೇಂದ್ರೀಕರಿಸಿದ್ದಾರೆ. 

ಇತ್ತೀಚಿಗೆ ಅವರು ವಿಧಾನಪರಿಷತ್ ಸದಸ್ಯತ್ವಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಗುತಾ ಸುಖೇಂದರ್ ರೆಡ್ಡಿ ಅವರು ಅಂಗೀಕರಿಸಿದ್ದಾರೆ.

ಕಳೆದ ವರ್ಷ ಬಿಆರ್ ಎಸ್ ಹಾಗೂ ಆಡಳಿತಾರೂಢ ಕಾಂಗ್ರೆಸ್ ಎರಡೂ ಭ್ರಷ್ಟಾಚಾರ ಪಕ್ಷಗಳೆಂದು ಆರೋಪಿಸಿದ್ದ ಕವಿತಾ, ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತೇನೆ ಮತ್ತು 2014 ರಲ್ಲಿ ತೆಲಂಗಾಣ ರಚನೆಯಾದ ನಂತರ ನಡೆದ ಎಲ್ಲಾ “ಅನ್ಯಾಯ”ಗಳ ಬಗ್ಗೆ ತನಿಖೆ ನಡೆಸುತ್ತೇನೆ ಎಂದು ಹೇಳಿದ್ದರು.

ಈ ತಿಂಗಳ ಆರಂಭದಲ್ಲಿ ಬಿಆರ್ ಎಸ್ ಆಡಳಿತ ಅವಧಿಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದ ಕವಿತಾ ಬಿಆರ್‌ಎಸ್ ಸಂವಿಧಾನವನ್ನು “ಜೋಕ್” ಎಂದೂ ಕರೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...