Homeಕರ್ನಾಟಕಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

ಶಿವದೀಕ್ಷೆ ಸ್ವೀಕರಿಸಿದವರಲ್ಲಿ ಆಹಾರದಿಂದ ಮೇಲು, ಕೀಳು ಭಾವ ಬರುವುದಿಲ್ಲ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಆಹಾರ ಸಂಸ್ಕೃತಿ ಎನ್ನುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟ ಸಂಗತಿ. ವಚನ ಚಳುವಳಿ ತನ್ನ ಒಟ್ಟಾರೆ ಆಶಯದಲ್ಲಿ ಇಂಥಾ ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಘನತೆಗಳನ್ನು ಎತ್ತಿಹಿಡಿದ ಒಂದು ಲಿಬರಲ್ ಮೂವ್‍ಮೆಂಟ್. ಹಾಗಾಗಿ ನಾವು ವಚನ ಸಾಹಿತ್ಯದ ಸಮಗ್ರ ಆಶಯದಿಂದ ಪ್ರಸ್ತುತ ಸವಾಲುಗಳಿಗೆ ಉತ್ತರಗಳನ್ನು ಅರ್ಥೈಸಿಕೊಳ್ಳಬೇಕೆ ವಿನಾಃ ಯಾವುದೋ ಒಂದು ವಚನದ ಅಥವಾ ಒಂದು ಸಾಲಿನ ಸುತ್ತ ಕೇಂದ್ರೀಕರಿಸಿ ಚರ್ಚೆ ಮಾಡುವಂತದ್ದಲ್ಲ. ಬಸವಣ್ಣ ಮತ್ತು ಆ ಕಾಲಘಟ್ಟದ ವಚನಕ್ರಾಂತಿಯ ಅಡಿಪಾಯವೇ ಎಲ್ಲಾ ವರ್ಗಗಳ ಒಳಗೊಳ್ಳುವಿಕೆ. ಅಂತದ್ದರಲ್ಲಿ ಆಹಾರ ಆಯ್ಕೆ’ಯ ಕುರಿತಾದ ಒಂದು ವಚನವನ್ನು ಇಟ್ಟುಕೊಂಡು ಆ ಒಳಗೊಳ್ಳುವಿಕೆ ಆಶಯವನ್ನೇ ಅನುಮಾನಿಸಿದರೆ, ಆ ಚಳವಳಿಯ ಸಮಗ್ರ ಆಶಯವನ್ನು ನಾವು ಅರ್ಥ ಮಾಡಿಕೊಂಡಂತೆ ಆಗುವುದಿಲ್ಲ. ವಚನಕಾರರು ಗೂಢಾರ್ಥಗಳ ಮೂಲಕ, ಉಪಮಾನ-ಉಪಮೇಯಗಳ ಮೂಲಕ ನೀತಿಬೋಧೆಗಳನ್ನು ಮಾಡಿದಂತವರು. ಹಾಗಾಗಿ ಹನ್ನೆರಡನೇ ಶತಮಾನದಷ್ಟು ಹಿಂದೆ ಅವರು ಬಳಸಿದ ಪದಗಳನ್ನು ಆಶಯಪೂರ್ವಕವಾಗಿ ಮತ್ತು ಐತಿಹಾಸಿಕ ಒಳನೋಟದಿಂದ ನೋಡಬೇಕು. ಯಥಾವತ್ ಅರ್ಥ ರೂಪದಲ್ಲಿ ಗ್ರಹಿಸುವುದು ಅಷ್ಟೊಂದು ಸಮಂಜಸವಲ್ಲ.

ಇನ್ನು ಆಹಾರ ಸಂಸ್ಕøತಿಯ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಅದು ಅವರವರ ವ್ಯಕ್ತಿಗತ ಆಯ್ಕೆಗೆ ಬಿಟ್ಟದ್ದು. ಅದರಿಂದ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ನಿಮ್ಮ ತಟ್ಟೆಯಲ್ಲಿ ಏನಿದೆ ಎಂದು ಪಕ್ಕದವನು ಇಣುಕಿನೋಡಿ, ಕಮೆಂಟ್ ಮಾಡುವುದೇ ಅಸಹ್ಯದ ವಿಷಯ. ಆದರೆ ಬಸವಣ್ಣನ ಚಳುವಳಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಈ ದಿನಮಾನಗಳ ಸಮಕಾಲೀನ ಲಿಂಗಾಯತ ಮಠಗಳೇನಿವೆಯಲ್ಲ, ಅವು ಸಸ್ಯಾಹಾರವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿವೆ. ಇದೇ ಸಮುದಾಯದೊಳಗೆ ಹುಟ್ಟಿ ಇವತ್ತು ಮಾಂಸಾಹಾರ ಸೇವಿಸುತ್ತಿರುವ ಎಷ್ಟು ಜನರಿಲ್ಲ, ದೊಡ್ಡದೊಡ್ಡ ವ್ಯಕ್ತಿಗಳೇ, ರಾಜಕಾರಣಿಗಳೇ ಅಂತವರಿದ್ದಾರೆ. ಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಳ್ಳದ ಸಮಕಾಲೀನ ಮಠಗಳು ಇತರರ ಆಹಾರಕ್ರಮ ಕೀಳು ಎನ್ನುವಂತೆ ಸಸ್ಯಾಹಾರ ಶ್ರೇಷ್ಠತೆಯನ್ನು ಪ್ರತಿಪಾದಿಸುತ್ತಿರುವುದು ವಿಪರ್ಯಾಸ. ಆದರೆ ಶಿವದೀಕ್ಷೆ ಅಥವಾ ಲಿಂಗದೀಕ್ಷೆ ಸ್ವೀಕರಿಸಿದ ಯಾರಲ್ಲೂ ಕೇವಲ ಸೇವಿಸುವ ಆಹಾರದಿಂದ ಮೇಲು, ಕೀಳು ಎಂಬ ಭಾವ ಬರುವುದಿಲ್ಲ.

ಕೆ.ಮರುಳಸಿದ್ದಪ್ಪ, ಚಿಂತಕರು-ಸಾಹಿತಿಗಳು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...