ಮಹತ್ವದ ಬೆಳವಣಿಗೆಯಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತನ್ನ ಸ್ಥಾನಕ್ಕೆ ಸೋಮವಾರ (ಆ.11) ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ವಿಧಾನಸಭಾ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ನಡೆಯುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಗೆ ರಾಜಣ್ಣ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.
ಇತ್ತೀಚೆಗೆ ರಾಹುಲ್ ಗಾಂಧಿಯವರು ಮಾಡಿರುವ ಮತಗಳ್ಳತನದ ಆರೋಪ ಮತ್ತು ಈ ಹಿಂದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಚಿವರು, ಕಾಂಗ್ರೆಸ್ ಶಾಸಕರ ಸಭೆ ನಡೆಸಿದ್ದ ಬಗ್ಗೆ ರಾಜಣ್ಣ ವ್ಯತಿರಿಕ್ತ ಹೇಳಿಕೆಗಳನ್ನು ನೀಡಿದ್ದರು.
ಈ ಬಗ್ಗೆ ರಾಜ್ಯದ ಅನೇಕ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಣ್ಣ ತಲೆದಂಡಕ್ಕೆ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.
ಮಾಧ್ಯಮವೊಂದರೆ ಜೊತೆ ವಿಧಾನಸೌಧದಲ್ಲಿ ಮಾತನಾಡಿದ ರಾಜಣ್ಣ ಹೈಕಮಾಂಡ್ ಏಕೆ ಕೋಪಗೊಂಡಿದೆಯೋ ನನಗೆ ಗೊತ್ತಿಲ್ಲ. ನಾನು ಅಧಿಕಾರಕ್ಕೆ ಅಂಟಿಕೊಂಡು ಕೂತವನಲ್ಲ ಎಂದಿದ್ದಾರೆ.
ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು


