Homeಕರ್ನಾಟಕಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರ ಆಪಾದಿತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪರವಾಗಿ ಹಾಕಿದ್ದ ಜಾಮಿನು ಅರ್ಜಿಯನ್ನು ಮಂಡ್ಯ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಎಎಸ್‌ಐ ಕುಮಾರ್ ಅವರನ್ನು ಜೂನ್‌ 5ದಂದು ಅಮಾನತು ಮಾಡಿತ್ತು. ಕೆ.ಆರ್.ಪೇಟೆ ದಲಿತ

ಆರೋಪಿ ಅನಿಲ್ ಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ, ಹಿರಿಯ ವಕೀಲರಾದ ಬಿ.ಟಿ. ವೆಂಕಟೇಶ್ ಸವಿಸ್ತಾರವಾಗಿ ವಾದ ಮಂಡಿಸಿ, ನ್ಯಾಯಾಧೀಶರು ಮತ್ತು ಎದುರಾಳಿ ವಕೀಲರುಗಳಿಗೆ ಜಯಕುಮಾರ್ ಅವರನ್ನು ಸುಟ್ಟು ಕೊಲೆ ಮಾಡಿದ್ದ ವಿಡಿಯೊ ತೋರಿಸಿದ್ದರು.

ಮಂಡ್ಯದ ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ದೂಡಿ ಸಜೀವವಾಗಿ ಸುಟ್ಟಿರುವ ಆರೋಪವಿದೆ. ಜಯಕುಮಾರ್‌ ಜಮೀನಿನಲ್ಲಿ ಕಳೆದ ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲುಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ, ಮೇ 16ರಂದು ಜಯಕುಮಾರ್ ಕೆ.ರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್‌ ಕುಮಾರ್ ಎಂಬಾತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ದೂರು ನೀಡಿದ್ದರು. ಮರುದಿನವೇ ಅವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ರೌಡಿಶೀಟರ್ ಹಾಗೂ ಪೋಕ್ಸೋ ಕಾಯ್ದೆಯಡಿ ಸೆರೆವಾಸ ಕಂಡಿದ್ದ ಅನಿಲ್‌ ಕುಮಾರ್ ಬಗ್ಗೆ ಅರಿವಿದ್ದ ಸ್ಥಳೀಯ ಪೊಲೀಸರು ಸಕಾಲಿಕ ಮುನ್ನೆಚರಿಕೆ ವಹಿಸದ ಕಾರಣ ಅಮಾಯಕ ದಲಿತನೊಬ್ಬನ ದಾರುಣ ಹತ್ಯೆ ನಡೆದಿದೆ ಎಂದು ದಲಿತ, ಜನಪರ, ಪ್ರಗತಿಪರ ಸಂಘಟನೆಗಳು ಆರೋಪ ಮಾಡಿವೆ. ಜಯಕುಮಾರ್ ಅವರ ಸಾವಿನ ನ್ಯಾಯಕ್ಕೆ ಆಗ್ರಹಿಸಿ ಮೇ 27ರಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ‘ಕೆ.ಆರ್ ಪೇಟೆ’ ಚಲೋ ಕೂಡ ನಡೆದಿತ್ತು.

ಮೃತ ಜಯಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂಬ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಎಎಸ್‌ಐ ಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್‌ಪಿ ತಿಮ್ಮಯ್ಯ ನಾನುಗೌರಿ.ಕಾಂಗೆ ತಿಳಿಸಿದ್ದರು.

ಅದಾಗ್ಯೂ, ಹೋರಾಟಗಾರರು ಕೆಲ ಹಂತದ ಅಧಿಕಾರಿಯ ಅಮಾನತ್ತಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಲ್ ಇನ್‌ಸ್ಟೆಕ್ಟರ್ ಆನಂದೆಗೌಡ, ಸಬ್ ಇನ್‌ಸ್ಟೆಕ್ಟರ್ ಸುಬ್ಬಯ್ಯ ಮತ್ತು ಡಿವೈಎಸ್‌ಪಿ ಚೆಲುವರಾಜು ಅವರನ್ನು ಅಮಾನತು ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಕೆ.ಆರ್.ಪೇಟೆ ದಲಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...