HomeUncategorizedಕೆ.ಆರ್.ಪೇಟೆ ದಲಿತ ಯುವಕನ ಹತ್ಯೆ ಪ್ರಕರಣ; ಮೇ 27ಕ್ಕೆ ಬೃಹತ್ ಪ್ರತಿಭಟನೆ

ಕೆ.ಆರ್.ಪೇಟೆ ದಲಿತ ಯುವಕನ ಹತ್ಯೆ ಪ್ರಕರಣ; ಮೇ 27ಕ್ಕೆ ಬೃಹತ್ ಪ್ರತಿಭಟನೆ

- Advertisement -
- Advertisement -

ಕೋಮು ಆಯಾಮದಲ್ಲಿ ಕೊಲೆಗಳಾದಾಗ 25 ಲಕ್ಷ ರೂ. ಪರಿಹಾರ ನೀಡಿರುವಂತೆ, ದಲಿತ ಯುವಕನ ಸಾವಿಗೂ ಪರಿಹಾರ ದೊರಕಿಸಬೇಕು ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ

ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅವರ ಅನುಮಾನಾಸ್ಪದ ಸಾವನ್ನು ಆತ್ಮಹತ್ಯೆಯೆಂದು ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿ, ಆತ್ಮಹತ್ಯೆಯನ್ನು ಕೊಲೆ ಪ್ರಕರಣವಾಗಿ ದಾಖಲು ಮಾಡುವಂತೆ ಆಗ್ರಹಿಸಿ, ಕೆ.ಆರ್.ಪೇಟೆ ದಲಿತ ಸಂಘಟನೆಗಳ ಒಕ್ಕೂಟ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಮೇ 27ರಂದು ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕೆ.ಆರ್.ಪೇಟೆಯ ಟಿ.ಬಿ. ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ತಾಲ್ಲೂಕು ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಯಲಿದೆ.

ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ದೂಡಿ ಸಜೀವವಾಗಿ ಸುಟ್ಟಿರುವ ದುರ್ಘಟನೆ ದಿನಾಂಕ 17-05-2025ರಂದು ನಡೆದಿದ್ದು, ಸದರಿ ಪ್ರಕರಣವನ್ನು ಆತ್ಯಹತ್ಯೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸ್ ಇಲಾಖೆಯ ಕರ್ತವ್ಯಲೋಪವನ್ನು ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ಜಯಕುಮಾರ್‌ ಜಮೀನಿನಲ್ಲಿ ಕಳೆದ ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲುಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮೇ 16ರಂದು ಜಯಕುಮಾರ್ ಕೆ.ರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್‌ ಕುಮಾರ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ದೂರು ನೀಡಿದ ಮರುದಿನವೇ ಈ ಅಮಾನುಷ ಕೊಲೆ ನಡೆದಿದೆ. ರೌಡಿಶೀಟರ್ ಹಾಗೂ ಪೋಕ್ಸೋ ಕಾಯ್ದೆಯಡಿ ಸೆರೆವಾಸ ಕಂಡಿದ್ದ ಅನಿಲ್‌ ಕುಮಾರ್ ಬಗ್ಗೆ ಅರಿವಿದ್ದ ಸ್ಥಳೀಯ ಪೊಲೀಸರು ಸಕಾಲಿಕ ಮುನ್ನೆಚರಿಕೆ ವಹಿಸದ ಕಾರಣ ಅಮಾಯಕ ದಲಿತನೊಬ್ಬನ ದಾರುಣ ಹತ್ಯೆ ನಡೆದಿದೆ ಎಂದು ಸಂಘಟನೆಗಳು ಬೇಸರ ವ್ಯಕ್ತಪಡಿಸಿವೆ.

ಜಯಕುಮಾರ್‌ ಅವರ ಅನಕ್ಷರಸ್ಥ ಪತ್ನಿ ಲಕ್ಷ್ಮಿಯವರು ಗಂಡನ ಕೊಲೆಯಿಂದ ಆಘಾತಗೊಂಡು ಆರೋಪಿಯ ಬಂಧನಕ್ಕೆ ಆಗ್ರಹಿಸಿ ಕೊಟ್ಟಿರುವ ದೂರನ್ನು “ನನ್ನ ಗಂಡ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿರುಚಿ ಕೇಸು ದಾಖಲಿಸಿರುವ ಪೊಲೀಸರ ಈ ಕುಕೃತ್ಯಕ್ಕೆ ಕ್ಷಮೆ ಎಂಬುದು ಇರಬಾರದು. ಜಯಕುಮಾರ್‌ ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವ ಪ್ರಬಲ ಕಾರಣಗಳೂ ಇರಲಿಲ್ಲ. ಅಲ್ಲದೆ ಶವ ಸಿಕ್ಕ ಸ್ಥಳ ಮತ್ತು ಅದರ ಸ್ಥಿತಿಗತಿಗಳನ್ನು ಪರಿಶೀಲಿಸಿದರೆ ಸ್ವಯಂ ಆತ್ಮಹತ್ಯೆಗೆ ಯತ್ನಿಸಿರುವ ಯಾವ ಕುರುಹು – ಗುರುತುಗಳೂ ಕಂಡು ಬರುವುದಿಲ್ಲ. ಸುಟ್ಟು ಆರೆಬೆಂದ ಶವದ ದುರವಸ್ಥೆಯ ದೃಶ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ವಿಶ್ಲೇಷಿಸಿದರೆ ಕೊಲೆ ಮಾಡಿ ಹುಲ್ಲಿನ ಮೆದೆಯ ಬೆಂಕಿಗೆ ಎಸೆಯಲಾಗಿದೆ ಎಂಬ ಅಂಶ ಕಣ್ಣಿಗೆ ರಾಚುವಂತಿದೆ ಎಂದು ತಿಳಿಸಿವೆ.

ಈ ದುರ್ಘಟನೆಯ ಹಿಂದಿರುವ ನಿಜ ಸಂಗತಿಗಳನ್ನು ಸ್ಥಳ ಮಹಜರಿನ ಮೂಲಕ ಗೋಚರಿಸುವ ಪುರಾವೆಗಳನ್ನು ಸರಿಯಾಗಿ ತಿಳಿದುಕೊಂಡು ಮೃತ ಜಯಕುಮಾರ್‌ ಪತ್ನಿಯ ದೂರನ್ನು ಗಂಭೀರವಾಗಿ ಪರಿಗಣಿಸದೆ ಪೊಲೀಸ್ ಅಧಿಕಾರಿಗಳು ಕೊಲೆಯನ್ನು ಆತ್ಮಹತ್ಯೆ ಪ್ರಕರಣವೆಂದು ದೂರು ದಾಖಲು ಮಾಡಿಕೊಂಡಿರುವುದು ಆಘಾತಕ್ಕೊಳಗಾಗಿರುವ ಮೃತನ ಪತ್ನಿ ಲಕ್ಷ್ಮಿಯ ಕುಟುಂಬಕ್ಕಷ್ಟೇ ಅಲ್ಲದೆ ಇಡೀ ದಲಿತ ಸಮುದಾಯಕ್ಕೆ ಉದ್ದೇಶಪೂರ್ವಕವಾಗಿ ಮಾಡುತ್ತಿರುವ ಘೋರ ಅನ್ಯಾಯವಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಸಾರ್ವಜನಿಕರ ಆಕ್ರೋಶ, ದಲಿತ ಸಂಘಟನೆಗಳ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಆರು ದಿನಗಳ ತರುವಾಯ ಮೇ, 22ರ ರಾತ್ರಿ ಆರೋಪಿ ಅನಿಲ್‌ಕುಮಾರ್‌ನನ್ನು ಬಂಧಿಸಲಾಗಿದೆ. ಆದರೆ ಆತ್ಮಹತ್ಯೆ ಎಂದು ದಾಖಲಾಗಿರುವ ದೂರನ್ನು ಕೊಲೆ ಎಂದು ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಿದಾಗ ಮಾತ್ರ ನಿಜಸಂಗತಿ ಏನೆಂದು ಸಮಾಜಕ್ಕೆ ತಿಳಿಸಲು ಪೊಲೀಸರಿಗೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಾಗ ಮಾತ್ರ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಲು ಸಾಧ್ಯವಾಗುತ್ತದೆ ಎಂದಿವೆ.

ಬಂಧಿತ ಅನಿಲ್‌ ಕುಮಾರ್‌ನನ್ನು ತೀವ್ರ ತನಿಖೆಕ್ಕೊಳಪಡಿಸಿ ಹೊರಬಂದ ಸತ್ಯಾಂಶದ ಆಧಾರದ ಮೇಲೆ ಕೊಲೆ ಮೊಕದ್ದಮೆ ದಾಖಲಿಸಬೇಕು. ದಲಿತರ ದೂರುಗಳನ್ನು ಗಂಭೀರವಾಗಿ ತೆಗೆದುಕೊಳ್ಳದೆ ಕರ್ತವ್ಯಲೋಪ ಎಸಗಿರುವ ಪೊಲೀಸರನ್ನು ಅಮಾನತು ಮಾಡಬೇಕು. ಫಾರಂ ನಂ. 57ರಲ್ಲಿ ಎರಡೂವರೆ ಎಕರೆ ಬಗರ್‌ಹುಕುಂ ಭೂಮಿ ಮಂಜೂರಾತಿಗೆ ಅರ್ಜಿ ಸಲ್ಲಿಸಿರುವ ಜಯಕುಮಾರ್ ಕುಟುಂಬಕ್ಕೆ ಸದರಿ ಭೂಮಿಯನ್ನು ಮಂಜೂರು ಮಾಡಿಕೊಡಬೇಕು. ಈ ಹಿಂದೆ ಕೋಮು ಆಯಾಮದಲ್ಲಿ ಕೊಲೆಗಳಾದ ಸಂದರ್ಭದಲ್ಲಿ ಯಾವುದೇ ತನಿಖೆ ಮಾಡದೆ ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರವನ್ನು ನೀಡಿದೆ. ಇದೇ ಮಾದರಿಯಲ್ಲಿ ಸಂತ್ರಸ್ತ ದಲಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ಬಿಡುಗಡೆ ಮಾಡಬೇಕು ಹಾಗೂ ಎರಡು ಎಳೆಯ ಮಕ್ಕಳ ತಾಯಿಯಾಗಿರುವ ಸಂತ್ರಸ್ತೆ ಲಕ್ಷ್ಮಿ ಅವರಿಗೆ ಸರ್ಕಾರಿ ಕೆಲಸವನ್ನು ನೀಡಬೇಕು ಎಂದು ಆಗ್ರಹಿಸಲಾಗಿದೆ.

 ಡಿಜೆ ಹಾಕಿದ್ದಕ್ಕೆ ದಲಿತರ ಮದುವೆ ಮೆರವಣಿಗೆಗೆ ಜಾಟ್ ವ್ಯಕ್ತಿಗಳಿಂದ ಅಡ್ಡಿ: ಗುಂಡು ಹಾರಿಸುವ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...