Homeಕರ್ನಾಟಕಕೆ.ಆರ್‌ ಪೇಟೆ ದಲಿತನ ಸಜೀವ ದಹನ ಪ್ರಕರಣ: ಕೆಳ ಹಂತದ ಪೊಲೀಸ್ ಅಧಿಕಾರಿ ಅಮಾನತು

ಕೆ.ಆರ್‌ ಪೇಟೆ ದಲಿತನ ಸಜೀವ ದಹನ ಪ್ರಕರಣ: ಕೆಳ ಹಂತದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರ ಆಪಾದಿತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಓರ್ವ ಕೆಳ ಹಂತದ ಅಧಿಕಾರಿಯನ್ನು ಅಮಾನತು ಮಾಡಿದೆ.

ಪ್ರಕರಣದ ಎನ್‌ಸಿಆರ್ ದಾಖಲಿಸಿದ ಎಎಸ್‌ಐ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಮೃತ ಜಯಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂಬ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್‌ಪಿ ತಿಮ್ಮಯ್ಯ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಸರ್ಕಲ್ ಇನ್‌ಸ್ಟೆಕ್ಟರ್ ಆನಂದೆಗೌಡ, ಸಬ್ ಇನ್‌ಸ್ಟೆಕ್ಟರ್ ಸುಬ್ಬಯ್ಯ ಮತ್ತು ಡಿವೈಎಸ್‌ಪಿ ಚೆಲುವರಾಜು ಅವರನ್ನು ಅಮಾನತು ಮಾಡುವಂತೆ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿದ ಎಎಸ್‌ಪಿ,”ಪ್ರಕರಣದಲ್ಲಿ ಸದ್ಯಕ್ಕೆ ಅನಿಲ್‌ ಕುಮಾರ್ ಎಂಬವರ ವಿರುದ್ದ ಮಾತ್ರ ದೂರು ದಾಖಲಾಗಿದೆ. ಅದರ ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಲೋಪ ಕಂಡು ಬಂದರೆ ಮುಂದಿನ ದಿನಗಳಲ್ಲಿ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಎಎಸ್‌ಐ ಕುಮಾರ್ ಅವರು ಕೆಳ ಹಂತದ ಅಧಿಕಾರಿ ಜೊತೆಗೆ ಎಸ್‌ಟಿ ಸಮುದಾಯದವರು ಎಂಬ ಕಾರಣಕ್ಕೆ ಅಮಾನತುಗೊಳಿಸಿ ಕೈತೊಳೆದುಕೊಳ್ಳಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇಲ್ಲ ಆ ರೀತಿಯಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಕುಮಾರ್ ಅವರ ನಿರ್ಲಕ್ಷ್ಯ ಕಂಡು ಬಂದಿದೆ. ಹಾಗಾಗಿ, ನಮ್ಮ ವ್ಯಾಪ್ತಿಯಲ್ಲಿ ಕ್ರಮ ಕೈಗೊಂಡಿದ್ದೇವೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ನಾಯಕ ಗುರುಪ್ರಸಾದ್ ಕೆರೆಗೋಡು ಅವರು, “ಎಎಸ್‌ಐ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ದೊರೆತಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ. ಅಗತ್ಯವಿದ್ದರೆ ಪತ್ರಿಕಾ ಪ್ರಕಟನೆ ಮೂಲಕ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ಡಿಎಸ್‌ಎಸ್‌ ಮುಖಂಡ ಬಸ್ತಿ ರಂಗಯ್ಯ ಅವರು ಮಾತನಾಡಿ, “ವಾಡಿಕೆಯಂತೆ ಕೆಳ ಹಂತದ ಅಧಿಕಾರಿಯನ್ನು ಅಮಾನತು ಮಾಡಿ ಪೊಲೀಸರು ಕೈ ತೊಳೆದುಕೊಂಡಿದ್ದಾರೆ. ಮೇಲಾಧಿಕಾರಿಗಳಿಗೆ ಮಾಹಿತಿಯಿಲ್ಲದೆ ಕೆಳ ಹಂತದವರು ಏನೂ ಮಾಡಲು ಸಾಧ್ಯವಿಲ್ಲ. ಹಾಗಾಗಿ, ಜಯಕುಮಾರ್ ಅವರಿಗೆ ಬೆದರಿಕೆ ಇರುವ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ಇತ್ತು. ಆದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಆದ್ದರಿಂದ ಡಿವೈಎಸ್‌ಪಿ ಆದಿಯಾಗಿ ಸಂಬಂಧಿಸಿದ ಎಲ್ಲರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಪ್ರಕರಣದ ತನಿಖೆ ನಾವು ಆರೋಪ ಮಾಡುತ್ತಿರುವ ಅಧಿಕಾರಿಗಳ ವ್ಯಾಪ್ತಿಯಲ್ಲೇ ನಡೆಯುತ್ತಿದೆ. ಅವರು ತಮ್ಮ ಮೇಲಿನ ಆರೋಪ ಮುಚ್ಚಿ ಹಾಕಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಾರೆ. ಆದ್ದರಿಂದ ವಿಶೇಷ ತಂಡದಿಂದ ತನಿಖೆ ಮಾಡಿಸಬೇಕು ಎಂಬುವುದು ನಮ್ಮ ಒತ್ತಾಯವಾಗಿದೆ” ಎಂದಿದ್ದಾರೆ.

ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ದೂಡಿ ಸಜೀವವಾಗಿ ಸುಟ್ಟಿರುವ ಆರೋಪವಿದೆ. ಜಯಕುಮಾರ್‌ ಜಮೀನಿನಲ್ಲಿ ಕಳೆದ ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲುಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ, ಮೇ 16ರಂದು ಜಯಕುಮಾರ್ ಕೆ.ರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್‌ ಕುಮಾರ್ ಎಂಬಾತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ದೂರು ನೀಡಿದ್ದರು. ಮರುದಿನವೇ ಅವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ರೌಡಿಶೀಟರ್ ಹಾಗೂ ಪೋಕ್ಸೋ ಕಾಯ್ದೆಯಡಿ ಸೆರೆವಾಸ ಕಂಡಿದ್ದ ಅನಿಲ್‌ ಕುಮಾರ್ ಬಗ್ಗೆ ಅರಿವಿದ್ದ ಸ್ಥಳೀಯ ಪೊಲೀಸರು ಸಕಾಲಿಕ ಮುನ್ನೆಚರಿಕೆ ವಹಿಸದ ಕಾರಣ ಅಮಾಯಕ ದಲಿತನೊಬ್ಬನ ದಾರುಣ ಹತ್ಯೆ ನಡೆದಿದೆ ಎಂದು ದಲಿತ, ಜನರಪರ, ಪ್ರಗತಿಪರ ಸಂಘಟನೆಗಳು ಆರೋಪ ಮಾಡಿವೆ. ಜಯಕುಮಾರ್ ಅವರ ಸಾವಿನ ನ್ಯಾಯಕ್ಕೆ ಆಗ್ರಹಿಸಿ ಮೇ 27ರಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ‘ಕೆ.ಆರ್ ಪೇಟೆ’ ಚಲೋ ಕೂಡ ನಡೆದಿದೆ.

ಕೆ.ಆರ್.ಪೇಟೆ ಚಲೋ: ಸರಕಾರಕ್ಕೆ ದಲಿತ ಜಯಕುಮಾರ್‌ ಹತ್ಯೆಯ ಕುರಿತು ಕೆಲ ಬೇಡಿಕೆ ಸಲ್ಲಿಸಿದ ಪ್ರತಿಭಟನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...