Homeಮುಖಪುಟವಯನಾಡ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮೇಲಿದೆ 242 ಕೇಸ್!

ವಯನಾಡ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಮೇಲಿದೆ 242 ಕೇಸ್!

- Advertisement -
- Advertisement -

ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ (ಎನ್‌ಡಿಎ) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳಿವೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ಚುನಾವಣೆ ಹಿನ್ನೆಲೆ ತನ್ನ ವಿರುದ್ಧ ಇರುವ ಪ್ರಕರಣಗಳ ಮಾಹಿತಿಯನ್ನು ಸುರೇಂದ್ರನ್ ಪಕ್ಷದ ಮುಖವಾಣಿಯ ಮೂರು ಪುಟಗಳಲ್ಲಿ ಪ್ರಕಟಿಸಿದ್ದಾರೆ.

ಎರ್ನಾಕುಲಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ.ಎಸ್‌ ರಾಧಾಕೃಷ್ಣನ್ ವಿರುದ್ಧ ಸುಮಾರು 211 ಪ್ರಕರಣಗಳಿವೆ.

ಹೆಚ್ಚಿನ ಪ್ರಕರಣಗಳು 2018ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿವೆ ಮತ್ತು ನ್ಯಾಯಾಲಯದಲ್ಲಿವೆ. “ಪಕ್ಷದ ಮುಖಂಡರು ಮುಷ್ಕರ ಅಥವಾ ಪ್ರತಿಭಟನೆಗೆ ಕರೆ ನೀಡಿದಾಗ ಪೊಲೀಸರು ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುತ್ತಾರೆ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಪಿಟಿಐಗೆ ತಿಳಿಸಿದ್ದಾರೆ.

“ಸುರೇಂದ್ರನ್ ವಿರುದ್ದ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದಂತೆ 237 ಪ್ರಕರಣಗಳು ಮತ್ತು ಕೇರಳದಲ್ಲಿ ವಿವಿಧ ಆಂದೋಲನಗಳಿಗೆ ಸಂಬಂಧಿಸಿದಂತೆ ಐದು ಪ್ರಕರಣಗಳು ದಾಖಲಾಗಿವೆ” ಎಂದು ಜಾರ್ಜ್ ಕುರಿಯನ್ ಹೇಳಿದ್ದಾರೆ.

ಸುರೇಂದ್ರನ್, ರಾಧಾಕೃಷ್ಣನ್, ಅಲಪ್ಪುಝ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ಮತ್ತು ವಡಗರ ಕ್ಷೇತ್ರದ ಅಭ್ಯರ್ಥಿ ಪ್ರಫುಲ್ ಕೃಷ್ಣ ಅವರ ವಿರುದ್ಧದ ಪ್ರಕರಣಗಳ ಮಾಹಿತಿಯನ್ನು ಶುಕ್ರವಾರ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, “ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ” ಎಂದು ಹೇಳಿದ್ದಾರೆ.

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪ್ರಸಿದ್ದ ಶಬಮರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್ ಆದೇಶವನ್ನು 2018ರಲ್ಲಿ ಕೇರಳ ಸರ್ಕಾರ ಜಾರಿಗೊಳಿಸಲು ಮುಂದಾದಾಗ, ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳು ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಿದ್ದವು.

ಕೇರಳದಲ್ಲಿ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನಾಂಕವಾಗಿದೆ.

ಮಾರ್ಚ್‌ 29ರವರೆಗೆ ಚುನಾವಣಾ ಆಯೋಗಕ್ಕೆ 18 ನಾಮಪತ್ರಗಳನ್ನು ಸ್ವೀಕರಿಸಿವೆ. ಕೊಲ್ಲಂನಿಂದ ಎಡ ಅಭ್ಯರ್ಥಿ ಎಂ ಮುಖೇಶ್ ಮತ್ತು ಕಾಸರಗೋಡಿನಿಂದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ ನಾಮಪತ್ರ ಸಲ್ಲಿಸಿದ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ: ‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...