ಯೆಮನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ರದ್ದಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್‌ನ ಸಂಸ್ಥಾಪಕ ಡಾ. ಕೆ.ಎ ಪೌಲ್ ಹೇಳಿದ್ದಾರೆ.
ಆದರೆ, ಈ ಕುರಿತು ಭಾರತ ಸರ್ಕಾರ, ನಿಮಿಷಾ ಪ್ರಿಯಾ ಕುಟುಂಬಸ್ಥರು ಮತ್ತು ಮರಣದಂಡನೆ ಮುಂದೂಡಿಕೆ ಕಾರಣರಾದ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಕಚೇರಿಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಇದುವರೆಗೂ ಹೊರ ಬಂದಿಲ್ಲ.
ಸೋಮವಾರ (ಜು.21) ರಾತ್ರಿ ಯೆಮೆನನ್‌ನ ಸನಾದಿಂದ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ಪೌಲ್ ಅವರು, ಯೆಮೆನ್ ನಾಯಕತ್ವದ ಶಕ್ತಿಯುತ ಮತ್ತು ಪ್ರಾರ್ಥನಾಪೂರ್ವಕ ಪ್ರಯತ್ನಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದಿದ್ದಾರೆ.
“ಇದನ್ನು ದೊಡ್ಡ ಯಶಸ್ಸಿಗೆ ಕೊಂಡೊಯ್ಯುವಲ್ಲಿ ಸಹಕರಿಸಿದ ಎಲ್ಲಾ ನಾಯಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ದೇವರ ದಯೆಯಿಂದ, ನಿಮಿಷಾ ಪ್ರಿಯಾ ಅವರ ಮರಣದಂಡನೆ ರದ್ದುಗೊಳಿಸಲಾಗಿದೆ. ಅವರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆದೊಯ್ಯಲಾಗುವುದು. ನಿಮಿಷಾ ಅವರನ್ನು ಸುರಕ್ಷಿತವಾಗಿ ಕರೆದೊಯ್ಯಲು ರಾಜತಾಂತ್ರಿಕರನ್ನು ಕಳುಹಿಸಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ,” ಎಂದು ಹೇಳಿದ್ದಾರೆ.
BIG BREAKING NEWS. Indian Nurse Nimisha Priya from Sanaa , Yemen Prison will be released . English & Telugu . pic.twitter.com/oAbX5LABly
— Dr KA Paul (@KAPaulOfficial) July 21, 2025
ನಿಮಿಷಾ ಅವರ ಮರಣದಂಡನೆ ರದ್ದಾಗಿರುವುದನ್ನು ಖಚಿತಪಡಿಸಿ ಯಾವುದೇ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿಲ್ಲ.
ಇಸ್ರೇಲ್ ದಿಗ್ಬಂಧನ ಪರಿಣಾಮ: ಗಾಜಾದಲ್ಲಿ 24 ಗಂಟೆಗಳಲ್ಲಿ ಹಸಿವಿನಿಂದ 19 ಸಾವುಗಳು


