Homeಸಿನಿಮಾಕ್ರೀಡೆಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

ಕಬಡ್ಡಿ ಎಲಿಮಿನೇಟರ್ ಪಂದ್ಯ ಇಂದು: ಸೆಮಿಫೈನಲ್ ಪ್ರವೇಶಿಸಲು ಬೆಂಗಳೂರು ಬುಲ್ಸ್ ಗೆಲ್ಲಲೇಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ 8ನೇ ಆವೃತ್ತಿಯ ಪ್ಲೇಆಫ್ ಪಂದ್ಯಗಳು ಇಂದು ನಡೆಯಲಿವೆ. ಇಂದು ಸಂಜೆ 7.30ಕ್ಕೆ ಆರಂಭವಾಗುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಯು.ಪಿ ಯೋಧ ಮತ್ತು ಪುಣೇರಿ ಪಲ್ಟನ್ ಸೆಣಸಲಿದ್ದು ಗೆದ್ದವರು ಫೆಬ್ರವರಿ 23 ರಂದು ನಡೆಯುವ ಮೊದಲ ಸೆಮಿಫೈನಲ್‌ನಲ್ಲಿ ಪಟ್ನಾ ಪೈರೇಟ್ಸ್ ವಿರುದ್ಧ ಕಾದಾಡಲಿವೆ.

ಅದೇ ರೀತಿ ಇಂದು ರಾತ್ರಿ 8.30ಕ್ಕೆ ಆರಂಭವಾಗುವ ಎರಡನೇ ಎಲಿಮಿನೇಟರ್ ಪಂದ್ಯ ಬೆಂಗಳೂರು ಬುಲ್ಸ್ v/s ಗುಜರಾತ್ ಗೈಂಟ್ಸ್ ನಡುವೆ ನಡೆಯಲಿದೆ. ಇಲ್ಲಿ ಗೆದ್ದರಷ್ಟೆ ಬೆಂಗಳೂರು ಬುಲ್ಸ್ ಸೆಮಿಫೈನಲ್‌ನಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಕಾದಾಡಲು ಅವಕಾಶ. ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಗುಜರಾತ್‌ ಸೆಮಿಫೈಣಲ್ ಪ್ರವೇಶಿಸುತ್ತದೆ. ಫೈನಲ್ ಪಂದ್ಯ ಫೆಬ್ರವರಿ 25ರ ಶುಕ್ರವಾರ ನಡೆಯಲಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಟ್ನಾ ಪೈರೇಟ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ತಂಡಗಳು ನೇರವಾಗಿ ಸೆಮಿಫೈನಲ್ ತಲುಪಿವೆ. ಉಳಿದಂತೆ ಹರ್ಯಾಣ ಸ್ಟೀಲರ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಯು ಮುಂಬಾ, ತಮಿಳು ತಲೈವಾಸ್, ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟನ್ಸ್ ತಂಡಗಳು ಲೀಗ್ ಹಂತದಲ್ಲಿ ಹೊರಬಿದ್ದಿವೆ.

ಹೊರ ಹುರುಪಿನಲ್ಲಿ ಬೆಂಗಳೂರು ಬುಲ್ಸ್

ಪವನ್ ಕುಮಾರ್ ಶೆಹ್ರಾವತ್ ನಾಯಕತ್ವದಲ್ಲಿ ಬೆಂಗಳೂರು ತಂಡ ನಿರೀಕ್ಷೆಗೂ ಮೀರಿ ಆಟವಾಡುತ್ತಿದೆ. ತನ್ನ ಕೊನೆಯ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ವಿರುದ್ಧ 22 ಪಾಯಿಂಟ್‌ಗಳ ಬೃಹತ್ ಗೆಲುವು ದಾಖಲಿಸಿತ್ತು. ಲೀಗ್ ಹಂತದ 22 ಪಂದ್ಯಗಳಲ್ಲಿ 11 ರಲ್ಲಿ ಜಯಗಳಿಸಿ 09 ರಲ್ಲಿ ಸೋತು 02 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. 274 ರೈಡ್ ಪಾಯಿಂಟ್‌ಗಳೊಂದಿಗೆ ಪವನ್ ಕುಮಾರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸೂಪರ್ ಟೆನ್‌ಗಳನ್ನು ಗಳಿಸಿಕೊಂಡಿದ್ದಾರೆ. ರೈಡಿಂಗ್‌ನಲ್ಲಿ ಭರತ್ ಅವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಡಿಫೆಂಡಿಂಗ್ ವಿಭಾಗದಲ್ಲಿ ಸೌರಬ್ ನಂದಲ್, ಅಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ಪ್ರೊ ಕಬಡ್ಡಿ ಇತಿಹಾಸ

2014ರಲ್ಲಿ ಪ್ರೊ ಕಬಡ್ಡಿ ಲೀಗ್ ಆರಂಭವಾಗಿದೆ. ಮೊದಲ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿದ್ದರು. ಎರಡನೇ ಬಾರಿ ಯು ಮುಂಬಾ ಕಪ್ ಎತ್ತಿ ಹಿಡಿದಿತ್ತು. 3, 4, 5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಆಗಿತ್ತು. 6ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಪಟ್ಟಕ್ಕೇರಿತ್ತು. ಕಳೆದ 7ನೇ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಫೈನಲ್ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಜಯಗಳಿಸಿ ಚಾಂಪಿಯನ್ ಆಗಿತ್ತು.

2019ರ 7ನೇ ಆವೃತ್ತಿಯಲ್ಲಿ ಇದೇ ರೀತಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು.ಪಿ ಯೋಧ ವಿರುದ್ಧ ಟೈ ಬ್ರೇಕರ್‌ನಲ್ಲಿ ರೋಚಕ 3 ಪಾಯಿಂಟ್‌ಗಳ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮಿಯಲ್ಲಿ ದಬಾಂಗ್ ಡೆಲ್ಲಿ ವಿರುದ್ಧ ಎಡವಿತ್ತು. ಈ ಬಾರಿ ಏನಾಗಲಿದೆ ಕಾದು ನೋಡಬೇಕಿದೆ.


ಇದನ್ನೂ ಓದಿ; ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...