Homeಕರ್ನಾಟಕಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಲೇಜೊಂದರ ಆವರಣದಲ್ಲಿ ಓದುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ವಿದ್ಯಾರ್ಥಿಯೋರ್ವ ಆ್ಯಸಿಡ್ ದಾಳಿ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಂತ್ರಸ್ತ ವಿದ್ಯಾರ್ಥಿನಿಯರನ್ನು ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ ಅಲೀನಾ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ. ಇವರು ಪಿಯುಸಿ ಪರೀಕ್ಷೆ ಹಿನ್ನೆಲೆ ಕಾಲೇಜು ಆವರಣದಲ್ಲಿ ಓದುತ್ತಿದ್ದಾಗ ಘಟನೆ ನಡೆದಿದೆ. ಓರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ದಾಳಿ ನಡೆಸಲು ಮುಂದಾಗಿದ್ದು, ಆಕೆಯ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎನ್ನಲಾಗಿದೆ.

ಆರೋಪಿಯು ಮಾಸ್ಕ್, ಹ್ಯಾಟ್ ಧರಿಸಿದ್ದು, ಕೇರಳದ ಮಲಪ್ಪುರಂ ಮೂಲದ ಅಭೀನ್‌ ಎಂದು ಗುರುತಿಸಲಾಗಿದೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ ಎನ್ನಲಾಗುತ್ತಿದೆ. ಕೃತ್ಯಕ್ಕೆ ಪ್ರೇಮ ವೈಫಲ್ಯ ಕಾರಣ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಕುರಿತು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದ್ದು, ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿಯನ್ನು ಮುಂದಕ್ಕೆ ನೀಡಲಾಗುವುದು ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯರಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನು ಓದಿ: ಸುಪ್ರೀಂನಿಂದ ಮತ್ತೊಂದು ಮಹತ್ವದ ತೀರ್ಪು; ಲಂಚ ಪ್ರಕರಣಗಳಲ್ಲಿ ಶಾಸಕರು ಮತ್ತು ಸಂಸದರಿಗಿಲ್ಲ ವಿನಾಯಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...