Homeಕರ್ನಾಟಕಕಡೂರಿನಲ್ಲಿ 17ರ ಬಾಲಕನನ್ನು ಮದುವೆಯಾದ 20ರ ಯುವತಿ: ಪ್ರಕರಣ ದಾಖಲು

ಕಡೂರಿನಲ್ಲಿ 17ರ ಬಾಲಕನನ್ನು ಮದುವೆಯಾದ 20ರ ಯುವತಿ: ಪ್ರಕರಣ ದಾಖಲು

- Advertisement -
- Advertisement -

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ 20 ವರ್ಷದ ಯುವತಿಯೊಬ್ಬಳು ತನಗಿಂತ ಮೂರು ವರ್ಷ ಕಿರಿಯ ಯುವಕನನ್ನ ಮದುವೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಮೂಲದ 20 ವರ್ಷದ ಯುವತಿ ಮಡಿಕೇರಿಯ ವಿರಾಜಪೇಟೆಯಲ್ಲಿ ನರ್ಸಿಂಗ್ ಮಾಡುತ್ತಿದ್ದರು. ಈ ಸಮಯದಲ್ಲಿ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷದ ಬಾಲಕನ ಜೊತೆ ಫೇಸ್‌ಬುಕ್‌ ಮೂಲಕ ಸ್ನೇಹವಾಗಿತ್ತು. ಬಾಲಕ ಆಕೆಗೆ ನನಗೆ 21 ವರ್ಷ ಎಂದು ಹೇಳಿಕೊಂಡಿದ್ದನು. ಫೇಸ್‌ಬುಕ್‌ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿತ್ತು.

ಇಬ್ಬರೂ ವಿವಾಹವಾಗಲು ನಿರ್ಧರಿಸಿ, ಹುಡುಗಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಫೋಷಕರು ವಿವಾಹಕ್ಕೆ ಸಮ್ಮತಿ ನೀಡಿಲ್ಲ. ಆದರೆ, ಹುಡುಗನ ತಾಯಿ ಸಂಬಂಧಿಕರ ಜೊತೆ ಸೇರಿ ಬ್ರಹ್ಮಸಮುದ್ರ ಗ್ರಾಮದ ಅಂತರಘಟ್ಟಮ್ಮನ ದೇವಸ್ಥಾನದಲ್ಲಿ ಜೂನ್ 16ರಂದು ಮದುವೆ ಮಾಡಿದ್ದಾರೆ. ಈ ಬಗ್ಗೆ ಮಕ್ಕಳ ಸಹಾಯವಾಣಿಗೆ ಜೂನ್ 23 ರಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಮಾಹಿತಿ ದೊರೆತ ಬಳಿಕ ಸಖರಾಯಪಟ್ಟಣ ಪೋಲೀಸರೊಡನೆ ಅಂಗನವಾಡಿ ಮೇಲ್ವಿಚಾರಕಿ ಜಾಕೀರ್ ತಾಜ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೇಘರಾಜ್ ಮತ್ತು ಬಿಸಿಲೇಹಳ್ಳಿ ಗ್ರಾಮಪಂಚಾಯಿತಿ ಕಾರ್ಯದರ್ಶಿ ಇಂದ್ರಮ್ಮ ಸ್ಥಳಕ್ಕೆ ಭೇಟಿ ನೀಡಿ ಯುವತಿಯನ್ನ ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಕೊರೊನಾ ನಿಯಮ ಉಲ್ಲಂಘನೆ ಪ್ರಕರಣದಡಿ ಕೇಸ್ ದಾಖಲಿಸಿದ್ದಾರೆ.

ಯುವತಿಯನ್ನ ಜಿಲ್ಲೆಯ ಸ್ವಾಧಾರ ಕೇಂದ್ರದಲ್ಲಿ ಇರಿಸಲಾಗಿದೆ. ಸಖರಾಯಪಟ್ಟಣ ಪೊಲೀಸರು ವಿಷಯವನ್ನ ಯುವತಿಯ ಪೋಷಕರ ಗಮನಕ್ಕೆ ತಂದಿದ್ದಾರೆ. ಬಾಲಕನಿಗೆ ತಿಳಿ ಹೇಳಿ ವಾಪಸ್ ಮನೆಗೆ ಕಳಿಸಿದ್ದಾರೆ. ಇವರಿಬ್ಬರ ಫೇಸ್‌ಬುಕ್‌ ಪ್ರೀತಿಗೆ ಕಾನೂನಿನ ಅಡೆತಡೆ ಉಂಟಾಗಿದ್ದು ಬಾಲಕನನ್ನು ಮದುವೆಯಾದ ಯುವತಿ ಮೇಲೆ ಪ್ರಕರಣ ದಾಖಲಾಗಿದೆ.

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಈಗಾಗಲೇ ದೇಶದಲ್ಲಿ ಲಕ್ಷಾಂತರ ಬಾಲಕಿಯರು ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಬಾಲಕ ಸ್ವಇಚ್ಛೆಯಿಂದ ಮದುವೆಯಾಗಿದ್ದರೂ ಕೂಡ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಯುವತಿ ಮೇಲೆ ಕೇಸ್ ದಾಖಲಿಸಲಾಗಿದೆ.


ಇದನ್ನೂ ಓದಿ: ಸಿಂಧನೂರು: ಒಕ್ಕೂಟ ಸರ್ಕಾರದ ವಿರುದ್ದ ‘ರೈತಪರ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

0
ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮೋದಿಯ...