Homeಚಳವಳಿಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು, ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

- Advertisement -
- Advertisement -

ನಮ್ಮೂರಿಗೆ ಬಾರ್‌ ಬೇಡ ಎಂದು ಪ್ರತಿಭಟನೆ ನಡೆಸಿದ ಮಹಿಳೆಯರ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗೂಂಡಾಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಮುಂಜಾನೆ ಏಕಾಏಕಿ ಮಹಿಳೆಯರ ಮನೆಗೆ ನುಗ್ಗಿದ ಪೊಲೀಸರು ಬಾಗಿಲು ಮುರಿದು, ಹೆಂಚು ಹೊಡೆದು ಹಾಕಿ ಮಕ್ಕಳು, ಮಹಿಳೆಯರು ಸೇರಿದಂತೆ 7 ಮಹಿಳೆಯರನ್ನು ಎಳೆದೊಯ್ದು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮುಸ್ಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾರ್ ಒಂದನ್ನು ತೆರೆಯಲು ಮುಂದಾಗಿದ್ದರು. ಕೂಲಿ ಕಾರ್ಮಿಕರು, ಬಡವರೇ ಹೆಚ್ಚಿದ್ದು ನಮ್ಮೂರಿನಲ್ಲಿ ಬಾರ್ ತೆರೆದರೆ ಜನರೆಲ್ಲಾ ಕುಡಿದು ಹಾಳಾಗುವುದಲ್ಲದೆ ಮತ್ತಷ್ಟು ತಮ್ಮನ್ನು ಮತ್ತಷ್ಟು ಬಡತನಕ್ಕೆ ನೂಕಲಾಗುತ್ತದೆ ಎಂಬ ಆತಂಕದಿಂದ ಮಹಿಳೆಯರು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸಿದ್ದರು. ಹತ್ತಾರು ಪ್ರತಿಭಟನೆಗಳು ನಡೆದು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿಯೂ ಪ್ರತಿಭಟನೆ ದಾಖಲಾಗಿತ್ತು.

ಇತ್ತೀಚೆಗಷ್ಟೆ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು. ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾರ್ ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಮದ್ಯ ನೀಡುತ್ತಿದ್ದರು ಎಂದು ಮಹಿಳೆಯರು ಆರೋಪಿಸಿದ್ದರು.

ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಕೇವಲ ಸಿಎಲ್-7 ಪರವಾನಗಿ ಇದ್ದರೂ ಶುಕ್ರವಾರ ಬಾರ್ ತೆರೆಯಲಾಗಿತ್ತು ಎಂದು ಕ್ರೋಧಗೊಂಡ ಮಹಿಳೆಯರು ನವೆಂಬರ್ 12ರ ಶುಕ್ರವಾರದಂದು ಬಾರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾತಿಗೆ ಮಾತು ಬೆಳೆದು ಮಹಿಳೆಯರು ಬಾರ್ ಒಳಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದರು. ಈ ಚಕಮಕಿಯಲ್ಲಿ ಹಲವು ಮಹಿಳೆಯರು ಸಹ ಗಾಯಗೊಂಡು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದೂರು, ಪ್ರತಿದೂರು ದಾಖಲಾಗಿ ಪೊಲೀಸರು ಆಸ್ಪತ್ರೆಗೆ ತೆರಳಿ ಒಂದಷ್ಟು ಮಹಿಳೆಯರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಇದರಿಂದ ಕೋಪಗೊಂಡ ಹಲವು ಮಹಿಳೆಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಮದ್ಯದಂಗಡಿ ಮಾಲೀಕರ ಪರವಾಗಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು ಸಹ ಬಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಸಹ ಪೊಲೀಸ್ ಠಾಣೆಗ ಆಗಮಿಸಿ ಮಹಿಳೆಯರಿಗೆ ತೊಂದರೆ ಕೊಡಬೇಡಿ, ಮದ್ಯದಂಗಡಿ ಮುಚ್ಚಿಸಲು ಯತ್ನಿಸಿ ಎಂದು ಮನವಿ ಮಾಡಿದ್ದರು. ಈ ಕುರಿತು ಸಚಿವ ಗೋಪಾಲಯ್ಯರವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಇದಾದ ನಂತರ ಮಹಿಳೆಯರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದ್ದರು

ಪೊಲೀಸ್ ದೌರ್ಜನ್ಯ ಆರೋಪ

ಇಂದು ಬೆಳಿಗ್ಗೆ ಏಕಾಏಕಿ ಪಿಎಸ್‌ಐ ರಮ್ಯಾ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದ್ದ ಮಹಿಳೆಯರ ಮನೆಗಳಿಗೆ ನುಗ್ಗಿ ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಬೆಳಗ್ಗೆ ಆರು ಗಂಟೆಗೆ ಮನೆಗೆ ಬಂದ ಪೊಲೀಸರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ಮುರಿದು ಹಾಕಿದ್ದಾರೆ. ಬೂಟುಗಾಲಿನಿಂದ ಒದ್ದು ಬಾಗಿಲು ಮುರಿದಿದ್ದು, ಅಶ್ಲೀಲ ಪದಗಳಿಂದ ನಿಂದಿಸಿ, ಮನೆಯಲ್ಲಿದ್ದವರನ್ನು ಕಾರಣವನ್ನೂ ಹೇಳದೇ ಕರೆದುಕೊಂಡು ಹೋಗಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಘಟನೆಯನ್ನು ವಿವರಿಸಿದ್ದಾರೆ.

ಪೊಲೀಸರ ಕೃತ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ನಂತರ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಇದೇ ಕಡೂರಿನಲ್ಲಿ ಅಕ್ರಮ ಮದ್ಯದಂಗಡಿಗಳ ವಿರುದ್ಧ ಸತತ ಹೋರಾಟ ಕಂಡುಬರುತ್ತಿದೆ. ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.


ಇದನ್ನು ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...