Homeಮನರಂಜನೆಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್‌ ಕೈ ಹಿಡಿದ ಮಾಜಿ ಶಾಸಕ ರಾಜು ಕಾಗೆ: ನವೆಂಬರ್‌...

ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್‌ ಕೈ ಹಿಡಿದ ಮಾಜಿ ಶಾಸಕ ರಾಜು ಕಾಗೆ: ನವೆಂಬರ್‌ 18ಕ್ಕೆ ನಾಮಪತ್ರ ಸಲ್ಲಿಕೆ

- Advertisement -
- Advertisement -

ಸುಪ್ರೀಂ ತೀರ್ಪನ್ನು ಕಾಯುತ್ತಿದ್ದ ಕಾಗವಾಡದ ಮಾಜಿ ಶಾಸಕ ರಾಜು ಕಾಗೆ ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದ ಕೂಡಲೇ ಬಿಜೆಪಿಗೆ ಗುಡ್‌ ಬೈ ಹೇಳಿ ಕಾಂಗ್ರೆಸ್‌ ಕೈ ಹಿಡಿಯಲು ಉತ್ಸುಕರಾಗಿದ್ದಾರೆ. ಇವರು ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಯಾವಾಗ ಅಲ್ಲಿ ಅನರ್ಹ ಶಾಸಕ ಶ್ರೀಮಂತ ಪಾಟೀಲ್‌ ಬಿಜೆಪಿಯಿಂದ ಸ್ಪರ್ಧೆ ಖಚಿತವಾಯಿತೊ ಕೂಡಲೇ ಸಿದ್ದರಾಮಯ್ಯನವರನ್ನು ಸಂಪರ್ಕಿಸಿ ಕಾಂಗ್ರೆಸ್‌ ಸೇರುವುದನ್ನು ಪಕ್ಕಾ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ನಾಳೆಯೇ ಬಿಜೆಪಿಯ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತೇವೆ. ನವೆಂಬರ್ 18ರಂದು ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸುತ್ತೇನೆ. ಇದುವರೆಗೂ 1 ಬಾರಿ ಜೆಡಿಯೂನಿಂದ ಮತ್ತು 3ಬಾರಿ ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದು ನನ್ನ 7ನೇ ಚುನಾವಣೆ. ಈಗ ಕ್ಷೇತ್ರ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ನನ್ನ ತಂದೆಯವರು ಸಹ ರಾಜಕಾರಣಿ. ರಾಜಕೀಯ ಕುಟುಂಬದಿಂದ ಬಂದ ನನಗೆ ಸಾಕಷ್ಟು ರಾಜಕೀಯ ಅನುಭವವಿದೆ. ಹಾಗಾಗಿ ಗೆದ್ದುಬರುತ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯದಲ್ಲಿ ಗೆಳೆತನ ಸಹಜ. ಹಾಗಾಗಿ ಅದಕ್‌ಎಕ ವಿಶೇಷ ಮಹತ್ವ ಕೊಡುವುದು ಬೇಡ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜು ಕಾಗೆಯವರನ್ನು ಮನವೊಲಿಸಿ ಪ್ರಯೋಜನವಿಲ್ಲ, ಆ ವಿಷಯ ಬಿಟ್ಟಾಕ್ಕಿ ಎಂದು ಖಡಕ್‌ ಆಗಿ ಹೇಳಿದ್ದಾರೆ.

ರಾಜು ಕಾಗೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದು ಆಪರೇಷನ್‌ ಅಲ್ಲವೇ ಎಂಬ ಪ್ರಶ್ನೆಗೆ “ನಾವಾಗಿಯೇ ಹಣ, ಅಧಿಕಾರದ ಆಮಿಷ ಒಡ್ಡಿ ಬೇರೆ ಪಕ್ಷದವರನ್ನು ನಮ್ಮ‌ ಪಕ್ಷಕ್ಕೆ ಕರೆತಂದರೆ ಅದು ಆಪರೇಷನ್ ಆಗುತ್ತದೆ. ಆದರೆ ನಮ್ಮ‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಅವರಾಗಿಯೇ ಬಂದರೆ ಅದು ಆಪರೇಷನ್ ಹೇಗಾಗುತ್ತದೆ? ಈ ಆಪರೇಷನ್, ಸರ್ಜರಿ ಇದರಲ್ಲಿ ಸಿಎಂ ಯಡಿಯೂರಪ್ಪ ಅವರೇ ಸ್ಪೆಷಲಿಸ್ಟ್. ನಾನು ಡಾಕ್ಟರೂ ಅಲ್ಲ, ನನಗೆ ಯಾವ ರೋಗಿಗಳು ಗೊತ್ತಿಲ್ಲ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲೇ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...