Homeಮುಖಪುಟಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

- Advertisement -
- Advertisement -

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ ಹೇಳಿದ್ದಾರೆ.

ಭಾನುವಾರ ಶಿರಸಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಾಗುವಳಿದಾರರು ಕಾಡು ನಾಶಮಾಡಿ ಕೃಷಿ ಮಾಡುತ್ತಿಲ್ಲ. ಈಗ ನಗರಗಳು ನಿರ್ಮಾಣವಾಗಿರುವ ಪ್ರದೇಶದಲ್ಲಿ ಹಿಂದೆ ಅರಣ್ಯವಿತ್ತು. ಬಡವರಿಗೊಂದು- ಶ್ರೀಮಂತರಿಗೊಂದು ನಿಯಮ ಸರ್ಕಾರಗಳು ಮಾಡುತ್ತಿವೆ. ಈ ತಾರತಮ್ಯ ಪರಿಹಾರಕ್ಕೆ ಹೋರಾಟ ಒಂದೇ ದಾರಿ ಎಂದರು.

1972ರಲ್ಲಿ ಗೇಣಿ ಹೋರಾಟ ಆರಂಭಿಸಿ ಲಕ್ಷಾಂತರ ಬಡವರಿಗೆ ಗೇಣಿ ಭೂಮಿ ಕೊಡಿಸಿದ್ದೆವು. ಇಂದು ಅರಣ್ಯ ಅತಿಕ್ರಮಣದಾರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತಿದ್ದೇನೆ. ಸರ್ಕಾರ ಇಷ್ಟರಲ್ಲೆ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕಿತ್ತು. ಶಿರಸಿಯ ರವಿ ನಾಯ್ಕ್ರ ಮುಂದಾಳತ್ವದಲ್ಲಿ ಈಗ ನಡೆಯುತ್ತಿರುವ ಹೋರಾಟ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲಿದೆಯೆಂಬ ವಿಶ್ವಾಸವಿದೆ. ನಾನಂತೂ ಕೊನೆಯ ಉಸಿರಿರುವ ತನಕ ಅತಿಕ್ರಮಣದಾರರ ಪರವಿರುತ್ತೇನೆ ಎಂದು ಕಾಗೋಡು ಹೇಳಿದರು.

ಅಧಿಕಾರಿಗಳು ಅನಗತ್ಯ ಗೊಂದಲ, ದೌರ್ಜನ್ಯ ಮಾಡುತ್ತಿದ್ದಾರೆ. ಅರಣ್ಯದ ನಡುವೆ ಬದುಕಿರುವ ಮಂದಿಯ ಕಷ್ಟ ಇವರಿಗೆ ಅರ್ಥಮಾಡಿಕೊಳ್ಳುವ ವ್ಯವದಾನವಿಲ್ಲ. ಕಂದಾಯ ಮಂತ್ರಿಯಾಗಿದ್ದಾಗ ಬಗರ್ ಹುಕುಮ್‌ದಾರರಿಗೆ ಹಕ್ಕು ಪತ್ರ ಕೊಡಿಸಲು ಸಾಕಷ್ಟು ಪ್ರಯತ್ನ ಮಾಡಿ ಯಶಸ್ವಿಯಾದೆ. ಅರಣ್ಯ ಅತಿಕ್ರಮಣದಾರರ ಸಂಕಷ್ಟದ ಅರಿವು ಶಿರಸಿ ಶಾಸಕ (ಸ್ಪೀಕರ್ ಕಾಗೇರಿ) ಸೇರಿದಂತೆ ಹಲವು ಎಮ್ಮೆಲ್ಲೆ, ಮಂತ್ರಿಗಳಿಗೆ ಗೊತ್ತಿದೆ. ಆದರೆ ಸಮಸ್ಯೆ ಪರಿಹರಿಸುವ ಇಚ್ಚಾ ಶಕ್ತಿ ಇಲ್ಲದಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2,95,018 ಅತಿಕ್ರಮಣದಾರರು ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ 15,798 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 1,84,358 ಅರ್ಜಿಗಳು ತಿರಸ್ಕೃತವಾಗಿವೆ. ಅಂದರೆ ಮಂಜೂರಿ ಪ್ರಮಾಣ ಶೇ.5.35ರಷ್ಟು ಅಷ್ಟೆ. ಹಾಗಾಗಿ ಹೋರಾಟವಿಲ್ಲದೆ ಮಂಜೂರಿ ಸಾಧ್ಯವೇ ಇಲ್ಲ. ಅಗತ್ಯ ಇದ್ದರೆ ನಾನೂ ಹೋರಾಟಕ್ಕೆ ಇಳಿಯುತ್ತೇನೆ. ಸಧ್ಯಕ್ಕೆ ಸರ್ಚೋಚ್ಛ ನ್ಯಾಯಾಲಯ ಕೂಡ ಅತಿಕ್ರಮಣದಾರರ ತೆರವಿನ ತನ್ನ ಆದೇಶ ತಡೆಹಿಡಿದಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗೆ ಸೂಚಿಸಿದೆ ಎಂದು ಕಾಗೋಡು ಹೇಳಿದರು.


ಇದನ್ನೂ ಓದಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...