Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (CUK) ಭೂವಿಜ್ಞಾನ ಕೋರ್ಸ್‌ನ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಜಯಶ್ರೀ (22) ಅವರ ಆತ್ಮಹತ್ಯೆ ಪ್ರಕರಣವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಡಿಶಾ ಮೂಲದ ದಲಿತ ವಿದ್ಯಾರ್ಥಿನಿಯಾದ ಜಯಶ್ರೀ ಅವರು ಬುಧವಾರ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಒಂದು ವೈಯಕ್ತಿಕ ದುರಂತವಲ್ಲ, ಬದಲಾಗಿ ವಿಶ್ವವಿದ್ಯಾಲಯದ ಆಡಳಿತದಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ವ್ಯವಸ್ಥಿತ ನಿರ್ಲಕ್ಷ್ಯದ ಪರಿಣಾಮ ಎಂದು ವಿದ್ಯಾರ್ಥಿ ಸಮುದಾಯ ಹಾಗೂ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಘಟನೆಯ ಸುತ್ತ ಹಲವಾರು ಅನುಮಾನಗಳು: ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.

ಆರೋಪಿತರಿಗೆ ಆಡಳಿತದ ಕುಮ್ಮಕ್ಕು: ವಿಶ್ವವಿದ್ಯಾಲಯದಲ್ಲಿ ಈ ಹಿಂದೆ ಲೈಂಗಿಕ ಕಿರುಕುಳದ ಪ್ರಕರಣಗಳು ನಡೆದಿದ್ದರೂ, ಆಡಳಿತ ಮಂಡಳಿ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಸಂಧಾನದ ಮೂಲಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದೆ ಎಂದು ವಿದ್ಯಾರ್ಥಿಗಳು ಆಪಾದಿಸಿದ್ದಾರೆ. ಕ್ಯಾಂಟೀನ್ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಾಗ, ಆತನ ಸಹೋದರನಾದ ಪ್ರಾಧ್ಯಾಪಕ ಮಲ್ಲಿಕಾರ್ಜುನ ಹೂಗಾರ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಸಂಧಾನ ನಡೆಸಿದೆ ಎನ್ನಲಾಗಿದೆ.

ಸಾವಿಗೂ ಮುನ್ನ ದೂರು: ಜಯಶ್ರೀ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ದಿನಗಳ ಮೊದಲು ವಿಶ್ವವಿದ್ಯಾಲಯದ ಡೀನ್ ಆಗಿರುವ ಪ್ರೊ. ಬಸವರಾಜ ಕುಬಕಡ್ಡಿ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆದರೆ ಆ ದೂರಿನ ಕುರಿತು ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಇಲ್ಲ.

ನಿರ್ಲಕ್ಷ್ಯದ ಇ-ಮೇಲ್ ದೂರು: ಈ ಹಿಂದೆ, ತೆಲಂಗಾಣ ಮೂಲದ ಬಿಜೆಪಿ ನಾಯಕ ಮತ್ತು ಕ್ಯಾಂಟೀನ್ ಗುತ್ತಿಗೆದಾರನ ವಿರುದ್ಧ ದಲಿತ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೇರವಾಗಿ ಡೀನ್ ಅವರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಳು. ಆದರೂ, ಆ ದೂರಿನ ಬಗ್ಗೆಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಡಾ. ಪಿ. ನಂದಕುಮಾರ್ ದೂರಿದ್ದಾರೆ.

ಪೊಲೀಸರ ಆಗಮನಕ್ಕೂ ಮುನ್ನ ಬಾಗಿಲು ಮುರಿಯುವ ಯತ್ನ: ಜಯಶ್ರೀ ಅವರು ನೇಣಿಗೆ ಶರಣಾದ ದೃಶ್ಯವನ್ನು ಕಿಟಕಿಯಿಂದ ನೋಡಬಹುದಾಗಿತ್ತು. ಆದರೆ ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಕೆಲವು ಪ್ರಾಧ್ಯಾಪಕರು ಉಪಕುಲಪತಿಗಳ ಅನುಪಸ್ಥಿತಿಯಲ್ಲೇ ಕೊಠಡಿಯ ಬಾಗಿಲು ಮುರಿಯಲು ಪ್ರಯತ್ನಿಸಿರುವುದು ಅನುಮಾನಕ್ಕೆ ಮತ್ತಷ್ಟು ಇಂಬು ಕೊಟ್ಟಿದೆ. ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಯೂ ಈಗ ಎದುರಾಗಿದೆ.

ಸಾಮಾಜಿಕ ಕಾರ್ಯಕರ್ತರ ಆಕ್ರೋಶ: ಈ ಪ್ರಕರಣದ ಕುರಿತು ಸಾಮಾಜಿಕ ಕಾರ್ಯಕರ್ತರಾದ ವಿಕಾಸ್ ಆರ್. ಮೌರ್ಯ ಮತ್ತು ಹುಲಿಕುಂಟೆ ಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸೌಜನ್ಯ ಪರ ದನಿ ಎತ್ತಿದ ಕರ್ನಾಟಕ ಜಯಶ್ರೀ ವಿಷಯದಲ್ಲಿ ಮೌನವಾಗಿದೆ. ಯಾಕೆ? ಜಾತಿ ತಿಳಿಯಿತೆ?” ಎಂದು ವಿಕಾಸ್ ಮೌರ್ಯ ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಇದು ಮತ್ತೊಂದು ಸಾಂಸ್ಥಿಕ ಹತ್ಯೆ… ದಲಿತರ ಬದುಕುಗಳು ಹೀಗೆ ಹುಳ ಉಪ್ಪಟೆಗಳ ಹಾಗೆ ನಶಿಸಿಹೋಗುತ್ತಿದ್ದರೆ ಮುಂದೇನು?” ಎಂದು ಹುಲಿಕುಂಟೆ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿ ಕೇಂದ್ರೀಯ ವಿವಿಯಲ್ಲಿ(ಸಿಯುಕೆ) ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಇಲ್ಲಿ ದೌರ್ಜನ್ಯ, ಹಿಂಸೆ ನಡೆದಿದೆ.‌ ನಿಷ್ಪಕ್ಷಪಾತ ತನಿಖೆ ನಡೆಸಬೇಕು.  ಆದರೆ ನಾಗರಿಕ ಸಮಾಜದ ಮೌನ ಮಾತ್ರ … ಸಿಯುಕೆನಲ್ಲಿ ಆರೆಸ್ಸಸ್ ನ ಪ್ರಾಬಲ್ಯ, ದಲಿತರ ಮೇಲಿನ ಶೋಷಣೆ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದರ‌ ವಿರುದ್ಧ ಕಲ್ಬುರ್ಗಿಯ‌ ಸ್ಥಳೀಯ ಹೋರಾಟ ಯಾಕೆ ರೂಪುಗೊಳ್ಳಲಿಲ್ಲ ಎನ್ನುವುದು ಯಕ್ಷಪ್ರಶ್ನೆ. ಒಂದು ವಿವಿಯೊಳಗಿನ ಮತಧರ್ಮಾಂದರು, ಜಾತಿವಾದಿಗಳ ವಿರುದ್ಧ ಹೋರಾಟ ರೂಪಿಸಲು ಸೋ ಕಾಲ್ಡ್ ಚಳುವಳಿಗಳು‌ ವಿಫಲವಾಗಿವೆ ಎಂದರೆ ಇನ್ನು ಜಿಲ್ಲೆ, ರಾಜ್ಯ, ದೇಶಾದ್ಯಂತ ಈ ದುಷ್ಟರ ವಿರುದ್ಧ ಸಂಘಟನೆ ಕಟ್ಟುವುದು ಕನಸಿನ ಮಾತು. ಈಗ ಹೇಗೆ ಸಾಂಕೇತಿಕ ಮಟ್ಟದಲ್ಲಿದೆಯೋ ಹಾಗೆ ಮುಂದುವರಿಸಿಕೊಂಡು ಹೋಗುವುದು ‘ಎಲ್ಲರಿಗೂ ಅನುಕೂಲ’… ಇದಕ್ಕೆ ಮುಖ್ಯ ಕಾರಣಗಳನ್ನು ಹೇಳುತ್ತಾ ಹೋದರೆ… ಎಂದು ಶ್ರೀಪಾದ್ ಭಟ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆಗಳು, ವಿಶ್ವವಿದ್ಯಾಲಯದ ಆಡಳಿತವು ದಲಿತ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಒದಗಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸುತ್ತವೆ.

ತನಿಖೆಗೆ ಒತ್ತಾಯ: ವಿದ್ಯಾರ್ಥಿಗಳು ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಆಡಳಿತ ಮಂಡಳಿಯ ನಿರ್ಲಕ್ಷ್ಯ, ಲೈಂಗಿಕ ಕಿರುಕುಳದ ಆರೋಪಗಳು ಮತ್ತು ಸಾಕ್ಷ್ಯ ನಾಶದ ಸಾಧ್ಯತೆಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆಯು ವಿಶ್ವವಿದ್ಯಾಲಯದ ಆಡಳಿತಕ್ಕೆ ಒಂದು ಸವಾಲಾಗಿ ಪರಿಣಮಿಸಿದ್ದು, ವಿದ್ಯಾರ್ಥಿನಿಯರಿಗೆ ಸೂಕ್ತ ನ್ಯಾಯ ದೊರೆಯುವುದೇ ಎಂದು ಕಾದು ನೋಡಬೇಕಿದೆ.

ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳ ದೋಷಮುಕ್ತಿ, ನ್ಯಾಯಕ್ಕಾಗಿ ಬಾಂಬೆ ಹೈಕೋರ್ಟ್ ಕಡೆಗೆ ಸಂತ್ರಸ್ತರ ಚಿತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...