Homeಮುಖಪುಟಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

ಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ಪತ್ರಿಕಾ ವರದಿಗಳು ಸ್ಫೋಟಗೊಂಡ ನಂತರ ನಿಯಮಾವಳಿ ಉಲ್ಲಂಘಿಸಿ ಕಾನೂನುಬಾಹಿರವಾಗಿ ಆಯ್ಕೆ ಮಾಡಿದ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಕೊಡಲು ವಿವಿಯ ಕಾರ್ಯಕಾರಿ ಮಂಡಳಿ (ಎಕ್ಸಿಕ್ಯುಟಿವ್ ಕೌನ್ಸಿಲ್) ನಿರಾಕರಿಸಿದೆ.

ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತಾಂಗವಾದ ಕಾರ್ಯಕಾರಿ ಮಂಡಳಿ ಒಪ್ಪಿಗೆ ಇಲ್ಲದೇ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಕೊಡುವುದಕ್ಕೆ ಸಾಧ್ಯವಿಲ್ಲ. ದಿ ಹಿಂದೂ ಮತ್ತು ನಾನುಗೌರಿ.ಕಾಂನಲ್ಲಿ ಅಕ್ರಮ ನೇಮಕಾತಿಯ ವಿವರಗಳು ಬಹಿರಂಗಗೊಂಡನಂತರ ಈ ಘಟನೆ ಜರುಗಿದ್ದು ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದೆ.

ಅಕ್ರಮ ನೇಮಕಾತಿಯನ್ನು ತಡೆಯಲು ಸಾಲು ಸಾಲು ಪ್ರಯತ್ನಗಳು ಜರುಗಿವೆ. ಮೊನ್ನೆ ತಾನೆ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್ ಕೇಂದ್ರದ ಮಾನವ ಸಂಪನ್ಮೂಲ ಸಚಿವರಿಗೆ ಪತ್ರ ಬರೆದು ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಕೋರಿದ್ದರು. ಅದಕ್ಕೂ ಮೊದಲು ಅಖಿಲ ಭಾರತ ವಿಶ್ವವಿದ್ಯಾಲಯಗಳ ನವಕರರ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಎಂ.ಬಿ. ಸಜ್ಜನ್ ರಾಷ್ಟಪತಿಗೆ ಪತ್ರ ಬರೆದು ನೇಮಕಾತಿ ಅಕ್ರಮಗಳನ್ನು ಅವರ ಗಮನಕ್ಕೆ ತಂದು ನೇಮಕಾತಿ ರದ್ದುಗೊಳಿಸುವಂತೆ ಆಗ್ರಹಿಸಿದ್ದರು.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌


ಅಲ್ಲದೇ ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಮಣ್ ದಸ್ತಿಯವರು ವಿಶ್ವವಿದ್ಯಾಲಯದ ಉಪಕುಲಪತಿ ಎಚ್.ಎಂ. ಮಹೇಶ್ವರಯ್ಯ ಅವರನ್ನು ಭೇಟಿ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಹೊಸದಾಗಿ ಶುರು ಮಾಡುವಂತೆ ಕೋರಿದ್ದರು. ನಿನ್ನೆ ಮತ್ತೊಬ್ಬ ಹೋರಾಟಗಾರ ಮಹೇಶ್ ರಾಥೋಡ್ ನೇತೃತ್ವದಲ್ಲಿ ಕೆಲವು ಕಾರ್ಯಕರ್ತರು ಹೋಗಿ ಅಕ್ರಮ ನೇಮಕಾತಿ ರದ್ದು ಮಾಡುವಂತೆ ಆಗ್ರಹಿಸಿದ್ದರು.

ಆದರೂ ಛಲ ಬಿಡದ ಉಪಕುಲಪತಿಗಳು ಎಕ್ಸಿಕ್ಯುಟಿವ್ ಕೌನ್ಸಿಲ್ ಸಭೆಯಲ್ಲಿ ಈ ವಿಷಯ ಇಟ್ಟು ಅಕ್ರಮ ನೇಮಕಾತಿಗಳಿಗೆ ಕೌನ್ಸಿಲ್ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಆ ಮೂಲಕ, ನೇಮಕಾತಿಯಲ್ಲಾದ ಅಕ್ರಮಗಳಿಗೆ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರನ್ನೂ ಹೊಣೆಗಾರರನ್ನಾಗಿಸಲು ಪ್ರಯತ್ನಿಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ. “ನೇಮಕಾತಿಯಲ್ಲಿ ಏನೂ ಅಕ್ರಮ ನಡೆದಿಲ್ಲ. ಮುಂದೆ ತನಿಖೆ ನಡೆದು ಏನಾದರೂ ಅಕ್ರಮ ಕಂಡುಬಂದರೆ ಅದಕ್ಕೆ ಸಂಪುರ್ಣ ನಾನೇ ಜವಾಬ್ದಾರ” ಅಂತ ಉಪಕುಲಪತಿಗಳು undertaking ಬರೆದು ಕೊಟ್ಟರೆ ಆಯ್ಕೆ ಪಟ್ಟಿಯನ್ನು ಅನುಮೋದಿಸುವುದಾಗಿ ಕೆಲ ಸದಸ್ಯರು ಪಟ್ಟು ಹಿಡಿದರು. ಅದಕ್ಕೆ ಉಪಕುಲಪತಿಗಳು ಒಪ್ಪಲಿಲ್ಲ, ಸದಸ್ಯರು ಆಯ್ಕೆ ಪಟ್ಟಿಗೆ ಅನುಮೋದನೆ‌ ನೀಡದೆ ಸಭೆ ಮುಗಿದಿದೆ.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಮಹೇಶ್ವರಯ್ಯನವರು ಏಪ್ರಿಲ್ 19ಕ್ಕೆ ನಿವೃತ್ತಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಅವರನ್ನು ಮುಂದುವರೆಸುವಂತೆ ಕುಲಸಚಿವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಆ ಬೇಡಿಕೆಯನ್ನು ಸಾರಾಸಗಟಾಗಿ ನಿರಾಕರಿಸಿತು. ಕುಲಸಚಿವರಿಗೆ ಪತ್ರ ಬರೆದ ಇಲಾಖೆಯ ಕಾರ್ಯದರ್ಶಿಗಳು ನೇಮಕಾತಿ ಪ್ರಕ್ರಿಯೆಯನ್ನು ಮುಂದೆ ಬರುವ ಹೊಸ ಉಪಕುಲಪತಿಗಳು ಮುಂದುವರೆಸುತ್ತಾರೆ ಎಂದರಲ್ಲದೇ ಫೆಬ್ರುವರಿ 18ರ ನಂತರ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದೂ ಹೇಳಿದರು. ಇಷ್ಟು ಸ್ಪಷ್ಟವಾಗಿ ಹೇಳಿದ‌ ಮೇಲೂ ಮಹೇಶ್ವರಯ್ಯನವರು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿ ಎಕ್ಸಿಕ್ಯೂಟಿವ್ ಕೌನ್ಸಿಲ್ ಸಭೆಯಲ್ಲಿ ಆಯ್ಕೆ ಪಟ್ಟಿ ಇಟ್ಟು ಅನುಮೋದನೆ ಪಡೆಯುವ ಪ್ರಯತ್ನ‌ ನಡೆಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...