Homeಮುಖಪುಟಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ...

ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌

ಗುರುವಾರ ಪತ್ರವನ್ನು ಕೇಂದ್ರ ಸಚಿವರಿಗೆ ರವಾನಿಸಿರುವ ಅವರು, ದಿ ಹಿಂದೂ ಮತ್ತು ನಾನುಗೌರಿ ವರದಿಯ ವಿವರಗಳನ್ನು ಗಂಭೀರವಾಗಿ ಪರಿಗಣಿಸಿ ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಸಂಸದರು ಕೋರಿದ್ದಾರೆ.

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಲು ಸಮಿತಿ ನೇಮಿಸುವಂತೆ ಒತ್ತಾಯಿಸಿ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್‌ರವರು ಕೇಂದ್ರದ ಮಾನವ ಸಂಪನ್ಮೂಲ ಸಚಿವ ರಮೇಶ್‌ ನಿಶಾಂಕ್‌ ಪೋಖ್ರಿಯಾಲ್‌ರವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಕುರಿತು ’ದಿ ಹಿಂದೂ’ ಪತ್ರಿಕೆ ಪ್ರಕಟಿಸಿದ ತನಿಖಾ ವರದಿ ಮತ್ತು ಅದರ ಜಾಡು ಹಿಡಿದು GauriLankeshnews.com  ಮತ್ತು ನಾನುಗೌರಿ.ಕಾಂ ಪತ್ರಿಕೆಗಳು ವಿಸ್ತೃತ ವರದಿ ಪ್ರಕಟಿಸಿದ್ದವು. ಪತ್ರದಲ್ಲಿ ಈ ವರದಿಗಳನ್ನು ಉಲ್ಲೇಖಿಸಿ ಲಗತ್ತಿಸಿದ್ದಾರೆ.

ಗುರುವಾರ ಪತ್ರವನ್ನು ಕೇಂದ್ರ ಸಚಿವರಿಗೆ ರವಾನಿಸಿರುವ ಅವರು, ದಿ ಹಿಂದೂ ಮತ್ತು ನಾನುಗೌರಿ ವರದಿಯ ವಿವರಗಳನ್ನು ಗಂಭೀರವಾಗಿ ಪರಿಗಣಿಸಿ ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಸಂಸದರು ಕೋರಿದ್ದಾರೆ.

ಸಂಸದ ಉಮೇಶ್‌ ಜಾಧವ್‌ರವರು ಬರೆದ ಪತ್ರ

25.09.2019ರಂದು ಹೊರಡಿಸಿದ ಅಧಿಸೂಚನೆಯಂತೆ ವಿ.ವಿಯ 30 ವಿಭಾಗಗಳಲ್ಲಿನ 67 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ, ಅರ್ಹರಲ್ಲದ, ಬೋಧನಾ ಅನುಭವವಿಲ್ಲದ ವ್ಯಕ್ತಿಗಳನ್ನೂ ಸಹ ಹಲವು ಹುದ್ದೆಗಳಿಗೆ ಕುಲಪತಿಗಳಾದ ಎಚ್.ಎಂ ಮಹೇಶ್ವರಯ್ಯನವರು ನೇಮಿಸಿಕೊಂಡಿದ್ದರು.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಯುಜಿಸಿ ನಿಯಮಾವಳಿಗಳಲ್ಲಿ ಇಂತಿಷ್ಟು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಬೇಕೆಂಬ ನಿಯಮವನ್ನು ಮೀರಿ ಕೆಲವರನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ. ಅನರ್ಹ ಅಭ್ಯರ್ಥಿಗಳನ್ನು ಸಹ ತಜ್ಞರ ಸಮಿತಿಯು ಮುಂದಿನ ಹಂತಕ್ಕೆ ಕಳಿಸಿ “ಅಂತಿಮ ತೀರ್ಮಾನ ಸಕ್ಷಮ ಪ್ರಾಧಿಕಾರಕ್ಕೆ ಬಿಟ್ಟಿದ್ದು” ಎಂದು ಷರಾ ಬರೆದು ಕಳಿಸಿಲಾಗಿದೆ. ಏಕೆಂದರೆ ಸಂದರ್ಶನ ಮಾಡುವವರು ಮತ್ತು ಸಕ್ಷಮ ಪ್ರಾಧಿಕಾರವೆಂದರೆ ಕುಲಪತಿಗಳಾದ ಮಹೇಶ್ವರಯ್ಯನವರೇ ಆಗಿದ್ದಾರೆ. ಇದಕ್ಕಾಗಿ ಅವರಿಂದ ತಲಾ 30-40 ಲಕ್ಷ ರೂ ಪಡೆದಿದ್ದಾರೆಂಬ ಸುದ್ದಿ ಇಡೀ ವಲಯದಲ್ಲಿ ಹರಿದಾಡುತ್ತಿದೆ.

ಕುಲಪತಿ ಎಚ್‌.ಎಂ ಮಹೇಶ್ವರಯ್ಯ

ಇಂತಹ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ಒಂದು ಕಡೆಯಾದರೆ, ಹೀಗೆ ಅನರ್ಹರು ಆಯ್ಕೆಯಾಗುವುದರಿಂದ ವಿ.ವಿಯ ಗುಣಮಟ್ಟ ಹಾಳಾಗುತ್ತಿದೆ. ಅಲ್ಲದೇ ಅರ್ಹ ಅಭ್ಯರ್ಥಿಗಳು ಪ್ರತಿಭಾವಂತರಾದರೂ ಸಹ ಈ ಹಗರಣದ ಬಲಿಪಶುಗಳಾಗುತ್ತಿದ್ದಾರೆ. ಹಾಗಾಗಿ ಈ ಕುರಿತು ತ್ವರಿತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ. ಇದು ಬೇರೆ ಬೇರೆ ವಿವಿಗಳಿಗೂ ಪಾಠವಾಗಬೇಕಿದೆ. ಶೈಕ್ಷಣಿಕ ಕ್ಷೇತ್ರ ಪಾರದರ್ಶಕವಾಗಿ, ಗುಣಮಟ್ಟದಿಂದ ಕೂಡಿರಬೇಕಾಗಿದೆ.

ಈ ನಿಟ್ಟಿನಲ್ಲಿ ಈ ಬೃಹತ್‌ ಹಗರಣದ ಕುರಿತು ಕಾಳಜಿವಹಿಸಿ ಸಂಸದರು ಪತ್ರ ಬರೆದಿರುವುದು ಪ್ರಕರಣಕ್ಕೆ ಮತ್ತಷ್ಟು ಬಲ ತುಂಬಿದೆ. ತನಿಖೆ ಬೇಗ ನಡೆಯಲಿ ಎಂಬುದು ನಮ್ಮ ಆಶಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...