Homeಕರ್ನಾಟಕ‘ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸ್‌ ಕಮಿಷನರ್‌ ಹಲ್ಲೆ’ - ಆರೋಪ

‘ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸ್‌ ಕಮಿಷನರ್‌ ಹಲ್ಲೆ’ – ಆರೋಪ

- Advertisement -
- Advertisement -

ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ಅವರ ಅಳಿಯ, ಕಾಂಗ್ರೆಸ್‌ ಕಾರ್ಯಕರ್ತ ಆದಿಲ್ ಸುಲೇಮಾನ್ ಶೇಖ್ ಅವರನ್ನು ಕಲಬುರಗಿ ನಗರ ಪೊಲೀಸ್‌ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ಥಳಿಸಿರುವ ಆರೋಪ ಕೇಳಿಬಂದಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆದಿಲ್ ಸುಲೇಮಾನ್ ಶೇಖ್, ನಮ್ಮ ಅತ್ತೆ ಖನೀಜ್ ಫಾತಿಮಾ ಅವರನ್ನು ಮನೆಗೆ ಬಿಟ್ಟು ವಾಪಸ್ ಬರುವಾಗ ಕಲಬುರಗಿ ನಗರದ ಹಫ್ತ್ ಗುಂಬಜ್ ಬಳಿ ಬುಧವಾರ ತಡರಾತ್ರಿ ಕಾರು ತಡೆದ ಆಯುಕ್ತರು ಮನಬಂದಂತೆ ಥಳಿಸಿದ್ದಾರೆ ಎಂದು ದೂರಿದ್ದಾರೆ.

ಮೊದಲಿಗೆ ಪೊಲೀಸ್ ಸಿಬ್ಬಂದಿಗೆ ನನಗೆ ಹೊಡೆದು ಕಾಲು ಮುರಿಯುವಂತೆ ಹೇಳಿದರು. ಅವರು ಹೊಡೆಯಲು ಹಿಂದೆ ಮುಂದೆ ನೋಡಿದಾಗ ಅವರೇ ಬಂದು ಥಳಿಸಿದರು ಎಂದಿದ್ದಾರೆ.

ಇದನ್ನೂ ಓದಿ: ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

ಈ ಕುರಿತು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು, “ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ. ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು. ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ” ಎಂದಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಘಟನೆಯನ್ನು ಖಂಡಿಸಿದ್ದಾರೆ. ಆಯುಕ್ತರನ್ನು ಅಮಾನತು ಮಾಡಿ, ಸೂಕ್ತ ಕ್ರಮ ಕೈಗೊಂಡು ದಾಳಿಗೊಳಗಾದ ಕಾಂಗ್ರೆಸ್‌ ಕಾರ್ಯಕರ್ತನಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಶಾಸಕಿ ಖನೀಜ್‌ ಫಾತಿಮಾ, ಪಾಲಿಕೆ ಚುನಾವಣೆಯಲ್ಲಿ ಸೋಲುವ ಭಯದಿಂದಾಗಿ ಬಿಜೆಪಿಯವರು ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, “ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಅದು ಬಿಟ್ಟು ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪುಲ್ವಾಮದಲ್ಲಿ ಹತರಾದ ಯೋಧರ ಪತ್ನಿಯರ ಮಂಗಳಸೂತ್ರ ಕಸಿದವರು ಯಾರು? : ಡಿಂಪಲ್ ಯಾದವ್

0
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ತಾಯಂದಿರು, ಸಹೋದರಿಯರ 'ಮಂಗಳಸೂತ್ರ' ಕಿತ್ತುಕೊಳ್ಳಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ತಿರುಗೇಟು ನೀಡಿದ್ದು, "ಪುಲ್ವಾಮ ದಾಳಿಯಲ್ಲಿ ಹತರಾದ ಸೈನಿಕರ...